40,000 ಸ್ಟಾಂಡರ್ಡ್ ಡಿಡಕ್ಷನ್: ನೌಕರ ವರ್ಗಕ್ಕೆ ಹಿತಾನುಭವ
Team Udayavani, Feb 1, 2018, 4:24 PM IST
ಹೊಸದಿಲ್ಲಿ : 2018ರ ಕೇಂದ್ರ ಬಜೆಟ್‌ನಲ್ಲಿ ವಿತ್ತ ಸಚಿವ ಅರುಣ್ ಜೇತ್ಲಿ ಅವರು ವೈಯಕ್ತಿಕ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ಮಟ್ಟದಲ್ಲೇ ಉಳಿಸಿಕೊಂಡು ತಿಂಗಳ ಸಂಬಳ ಪಡೆಯುವ ನೌಕರ ವರ್ಗಕ್ಕೆ ನಿರಾಶೆ ಉಂಟು ಮಾಡಿರಬಹುದು; ಆದರೆ ಈ ನಿರಾಶೆಯನ್ನು ಕೊಂಚ ಮಟ್ಟಿಗೆ ತಗ್ಗಿಸುವ ಪ್ರಯತ್ನವಾಗಿ ಅವರು 40,000 ರೂ.ಗಳ ಸ್ಟಾಂಡರ್ಡ್ ಡಿಡಕ್ಷನ್‌ಗೆ ಅವಕಾಶ ಕಲ್ಪಿಸಿದ್ದಾರೆ.
ಸ್ಟಾಂಡರ್ಡ್ ಡಿಡಕ್ಷನ್ ಪರಿಕಲ್ಪನೆಯನ್ನು 2005ರ ಬಜೆಟ್‌ನಲ್ಲಿ (ಅಸೆಸ್‌ಮೆಂಟ್ ವರ್ಷ (2006-2007) ಕೈಬಿಡಲಾಗಿತ್ತು. 2004-05ರ ಅಸೆಸ್‌ಮೆಂಟ್ ವರ್ಷದ ತನಕ 30,000 ರೂ. ಸ್ಟಾಂಡರ್ಡ್ ಡಿಡಕ್ಷನ್ ಕಲ್ಪಿಸಲಾಗಿತ್ತು. ಆದರೆ ಇದನ್ನು ಪುನಃ ಆರಂಭಿಸಬೇಕೆಂಬ ಕೂಗು ಎಲ್ಲೆಡೆಯಿಂದ ಕೇಳಿಬಂದಿತ್ತು.
ಈ ಬಾರಿಯ ಬಜೆಟ್‌ನಲ್ಲಿ ಮತ್ತೆ ಸ್ಟಾಂಡರ್ಡ್ ಡಿಡಕ್ಷನ್ ಪರಿಚಯಿಸಲಾಗಿರುವುದರಿಂದ ನೌಕರಿ ವರ್ಗದವರ ತೆರಿಗೆ ಹೊರೆ ಕಡಿಮೆಯಾಗುತ್ತದೆ. ಮಾತ್ರವಲ್ಲದೆ ತೆರಿಗೆ ಲೆಕ್ಕಾಚಾರ ಹಾಕುವಾಗಿನ ಕೆಲಸವೂ ಕಡಿಮೆಯಾಗುತ್ತದೆ.
ಅಲ್ಲದೆ ಉದ್ಯೋಗಪತಿಗಳು ನೌಕರರ ಸಂಬಳದಿಂದ ಆದಾಯ ತೆರಿಗೆಯನ್ನು ಮೂಲದಲ್ಲೇ ಕಡಿತ ಮಾಡುವ ಸಂದರ್ಭದಲ್ಲಿ 40,000 ರೂ. ಸ್ಟಾಂಡರ್ಡ್ ಡಿಡಕ್ಷನ್ ಕಳೆದು ತೆರಿಗೆ ಹೊರೆಯನ್ನು ಅಂದಾಜಿಸುವುದಕ್ಕೆ ಅವಕಾಶವಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.