![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Feb 1, 2022, 12:27 PM IST
ಹೊಸದಿಲ್ಲಿ: ಕೋವಿಡ್ ಸೋಂಕು ಕಾರಣದಿಂದ ಹೊಸ ರೂಪ ಪಡೆದಿರುವ ಶಿಕ್ಷಣ ವ್ಯವಸ್ಥೆಗೆ ಬೂಸ್ಟ್ ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.
ಐಎಸ್‌ಟಿಇ ಮಾನದಂಡಗಳೊಂದಿಗೆ ವಿಶ್ವ ದರ್ಜೆಯ ಗುಣಮಟ್ಟದ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳಿಗೆ ಪ್ರವೇಶವನ್ನು ಒದಗಿಸಲು ಡಿಜಿಟಲ್ ವಿಶ್ವವಿದ್ಯಾಲಯವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
‘ಒನ್ ಕ್ಲಾಸ್- ಒನ್ ಟಿವಿ ಚಾನೆಲ್’ ಪಿಎಂ ಇ-ವಿದ್ಯಾ ಕಾರ್ಯಕ್ರಮವನ್ನು 12 ರಿಂದ 200 ಟಿವಿ ಚಾನೆಲ್ ಗಳಿಗೆ ವಿಸ್ತರಿಸಲಾಗುವುದು. ಇದು ಕೋವಿಡ್ ನಿಂದಾಗಿ ಔಪಚಾರಿಕ ಶಿಕ್ಷಣದ ನಷ್ಟವನ್ನು ಸರಿದೂಗಿಸಲು 1 ರಿಂದ 12 ನೇ ತರಗತಿಗಳಿಗೆ ಪ್ರಾದೇಶಿಕ ಭಾಷೆಗಳಲ್ಲಿ ಪೂರಕ ಶಿಕ್ಷಣವನ್ನು ಒದಗಿಸಲು ಎಲ್ಲಾ ರಾಜ್ಯಗಳಿಗೆ ಅನುವು ಮಾಡಿಕೊಡುತ್ತದೆ” ಎಂದು ವಿತ್ತ ಸಚಿವೆ ಘೋಷಿಸಿದರು.
ನೈಸರ್ಗಿಕ, ಶೂನ್ಯ ಬಜೆಟ್, ಸಾವಯವ ಕೃಷಿ ಮತ್ತು ಆಧುನಿಕ ಕೃಷಿಗೆ ಉತ್ತೇಜನ ನೀಡುವ ಸಲುವಾಗಿ ರಾಜ್ಯಗಳು ಕೃಷಿ ವಿಶ್ವವಿದ್ಯಾಲಯದ ಪಠ್ಯಕ್ರಮಗಳನ್ನು ಮರು ಪರಿಶೀಲನೆ ನಡೆಸಬೇಕು ಎಂದರು.
ಇದನ್ನೂ ಓದಿ:Budget 2022: ದೇಶದಲ್ಲಿ ಹೊಸ ತೆರಿಗೆ ನೀತಿ ; ಆದಾಯ ತೆರಿಗೆ ಪಾವತಿದಾರರಿಗೆ ಬಿಗ್ ರಿಲೀಫ್
ವಿದ್ಯಾರ್ಥಿಗಳು, ಪ್ರಮುಖವಾಗಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಎರಡು ವರ್ಷಗಳ ಔಪಚಾರಿಕ ಶಿಕ್ಷಣವನ್ನು ಕಳೆದುಕೊಂಡಿದ್ದಾರೆ ಎಂದ ಅವರು, ಪ್ರಾದೇಶಿಕ ಭಾಷೆಗಳಲ್ಲಿ ಉತ್ತಮ ಗುಣಮಟ್ಟದ ಇ-ಕಂಟೆಂಟ್ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
ಮಾನಸಿಕ ಆರೋಗ್ಯ ಸಮಾಲೋಚನೆಗಾಗಿ ರಾಷ್ಟ್ರೀಯ ಟೆಲಿ-ಮೆಂಟಲ್ ಆರೋಗ್ಯ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಈ ಕಾರ್ಯಕ್ರಮಕ್ಕೆ ಐಐಟಿ ಬೆಂಗಳೂರು ತಾಂತ್ರಿಕ ಬೆಂಬಲವನ್ನು ನೀಡುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು.
ನಾಲ್ಕನೇ ಬಜೆಟ್ ಮಂಡನೆ ಮಾಡುತ್ತಿರುವ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಈ ಬಾರಿಯ ಬಜೆಟ್ 39.5 ಲಕ್ಷ ಕೋಟಿ ರೂ. ಗಾತ್ರದ್ದಾಗಿದೆ.
ಇದನ್ನೂ ಓದಿ: ದೇಶದ ಐದು ನದಿ ಜೋಡಣೆಗೆ ಬಜೆಟ್ ನಲ್ಲಿ ಅಸ್ತು: 44,605 ಕೋಟಿ ರೂ ಅನುದಾನ
ಇದನ್ನೂ ಓದಿ: ಬಜೆಟ್ 2022: ಮಾನಸಿಕ ಆರೋಗ್ಯ ವರ್ಧನೆಗೆ ರಾಷ್ಟ್ರೀಯ ಟೆಲಿ-ಮೆಂಟಲ್ ಆರೋಗ್ಯ ಕಾರ್ಯಕ್ರಮ ಘೋಷಣೆ
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.