ಬಜೆಟಲ್ಲಿ ತೆರಿಗೆ ವಿನಾಯ್ತಿ, ಜನಪರ ಯೋಜನೆ ನಿರೀಕ್ಷೆ


Team Udayavani, Jan 9, 2018, 6:55 AM IST

modi.jpg

ಹೊಸದಿಲ್ಲಿ: ಮುಂದಿನ ಹಣಕಾಸು ವರ್ಷದ ಬಜೆಟ್‌ ಮಂಡಿಸಲು ಇಪ್ಪತ್ತಮೂರು ದಿನಗಳಷ್ಟೇ ಬಾಕಿ ಉಳಿದಿವೆ. ಹೊಸದಿಲ್ಲಿಯಲ್ಲಿ ಬಿರುಸಿನ ಸಮಾಲೋಚನೆ-ಚರ್ಚೆಗಳು ಆರಂಭವಾಗಿವೆ. ಹಾಲಿ ವರ್ಷ ಕರ್ನಾಟಕ ಸಹಿತ ಎಂಟು ರಾಜ್ಯಗಳ ವಿಧಾನಸಭೆ, 2019ರ ಲೋಕಸಭೆ ಚುನಾವಣೆ ಮುಂದಿಟ್ಟುಕೊಂಡು ಹಲವಾರು ಜನಪರ ಯೋಜನೆ ಜಾರಿಗೆ ನರೇಂದ್ರ ಮೋದಿ ನೇತೃತ್ವದ ಸರಕಾರ ಸಿದ್ಧತೆ ನಡೆಸಿದೆ. ರಾಜ್ಯಗಳಿಗೆ ಸೇರಬೇಕಾಗಿರುವ ಯೋಜನೆಗಳ ಅನ್ವಯ ಎಷ್ಟೆಷ್ಟು ಮೊತ್ತ ಸಂದಾಯವಾಗಬೇಕು, ಆಯಾ ರಾಜ್ಯಗಳ ಅನುದಾನಕ್ಕೆ ಸಂಬಂಧಿಸಿದಂತೆ ಚರ್ಚೆಯೂ ನಡೆದಿದೆ. 

ಆಡಳಿತಾರೂಢ‌ ಬಿಜೆಪಿಯ ಮತಬ್ಯಾಂಕ್‌ ಆಗಿರುವ ಮಧ್ಯಮ ವರ್ಗಕ್ಕೆ ಹಲವು ರೀತಿಯ ತೆರಿಗೆ ಸುಧಾರಣೆ, ಲಾಭಗಳನ್ನು ಫೆ.1ರ ಕೊನೆಯ ಪೂರ್ಣ ಪ್ರಮಾಣದ ಬಜೆಟ್‌ನಲ್ಲಿ ಹಣಕಾಸು ಸಚಿವ ಅರುಣ್‌ ಜೇಟಿÉ ಘೋಷಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ. ಆರೋಗ್ಯ ವಿಮೆಯ ಪ್ರಮಾಣ ವಿಸ್ತರಣೆ, ವಿವಿಧ ರೀತಿಯ ಹೂಡಿಕೆಗಳಿಗೆ ಪ್ರೋತ್ಸಾಹಕ್ಕೆ ಉತ್ತೇಜನ ನೀಡುವ ಸಾಧ್ಯತೆ ಇದೆ. ಆದರೆ, ಸರಕು ಮತ್ತು ಸೇವೆಗಳ ತೆರಿಗೆ (ಜಿಎಸ್‌ಟಿ) ಜಾರಿಯಾಗಿದ್ದರಿಂದ ಘೋಷಣೆಗಳಿಗೆ ಯಾವ ರೀತಿಯಲ್ಲಿ ಆರ್ಥಿಕ ಸಂಪನ್ಮೂಲಗಳನ್ನು ಒದಗಿಸಲಿದೆ ಎನ್ನುವುದೇ ಕುತೂಹಲಕರ ವಿಚಾರ.

ಹೀಗಾಗಿಯೇ, ಷೇರು ಮಾರುಕಟ್ಟೆ ವಹಿವಾಟುದಾರರಿಗೆ ವಿಧಿಸಲಾಗುವ ಕ್ಯಾಪಿಟಲ್‌ ಗೈನ್ಸ್‌ ಟ್ಯಾಕ್ಸ್‌ ಅನ್ನು ಮತ್ತೆ ಜಾರಿ ಮಾಡಲಾಗುತ್ತದೆ. ಈ ಬಗ್ಗೆ ಆಕ್ಷೇಪಗಳು ಇರುವ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಷೇರು ವಹಿವಾಟುದಾರರಿಗೆ ಅದನ್ನು ಅನ್ವಯಗೊಳಿಸುವ ಪ್ರಸ್ತಾಪ ಜೇಟಿÉ ಮುಂದಿದೆ. 

ಇಪಿಎಫ್ಒ, ಕಾರ್ಮಿಕರ ರಾಜ್ಯ ವಿಮಾ ನಿಗಮ ಮೂಲಕ ಕಾರ್ಮಿಕ ಕ್ಷೇತ್ರಕ್ಕೆ ಯೋಜನೆಗಳನ್ನೂ ಹೆಚ್ಚಿನ ಪ್ರಮಾಣದಲ್ಲಿ ಜಾರಿಯಾಗುವ ಸಾಧ್ಯತೆಗಳಿವೆ. ಇಪಿಎಫ್ ವ್ಯವಸ್ಥೆಯಲ್ಲಿ ಉದ್ಯೋಗಿ ನೀಡುವ ಪ್ರಮಾಣದಷ್ಟೇ ಮಾಲಿಕನೂ ನೀಡುತ್ತಿದ್ದಾನೆ. ದೇಶದ ಒಟ್ಟು ಜನಸಂಖ್ಯೆಗೆ ಹೋಲಿಕೆ ಮಾಡಿದರೆ ಎಲ್ಲರಿಗೆ ಈ ರೀತಿಯ ವ್ಯವಸ್ಥೆ ಇಲ್ಲ. ಹೀಗಾಗಿ, ಬಡತನ ರೇಖೆಗಿಂತ ಕೆಳಗಿನವರಿಗೆ ಪಿಂಚಣಿ ಯಂಥ ಯೋಜನೆ ನೀಡಲು ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ಯೋಜನೆ ರೂಪಿಸಬೇಕು ಮತ್ತು ಅದಕ್ಕಾಗಿ ಹಣದ ಮೂಲ ಕಂಡುಕೊಳ್ಳಬೇಕಾಗಿದೆ. ಅದಕ್ಕಾಗಿ ಮಾತುಕತೆಗಳು ನಡೆಯುತ್ತಿವೆ. ಈಗಾಗಲೇ ಕೆಲವೊಂದು ರಾಜ್ಯಗಳಲ್ಲಿ ವೃದ್ಧರಿಗಾಗಿ 1 ಸಾವಿರ ರೂ. ಪಿಂಚಣಿ ನೀಡುತ್ತಿವೆ. ಅದಕ್ಕೆ ಪೂರಕವಾಗಿ ಹೆಚ್ಚುವರಿ ಮೊತ್ತ ನೀಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ನಾಳೆ ಆರ್ಥಿಕ ತಜ್ಞರ ಜತೆ ಮೋದಿ ಸಭೆ
ಮುಂಬರುವ ಬಜೆಟ್‌ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ವಿವಿಧ ಕ್ಷೇತ್ರಗಳ ಪರಿಣತರು, ನೀತಿ ಆಯೋಗದ ಸದಸ್ಯರು ಮತ್ತು ಪ್ರಧಾನಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ ಜತೆ ಸಭೆ ನಡೆಸಲಿದ್ದಾರೆ. ಉದ್ಯೋಗ ಸೃಷ್ಟಿ ಮತ್ತು ರೈತಾಪಿ ವರ್ಗದ ಸಮಸ್ಯೆ ನಿವಾರಿಸಲು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ಅವರು ವಿಚಾರ ವಿಮರ್ಶೆ ನಡೆಸಲಿದ್ದಾರೆ. ಕೇಂದ್ರ ಸಾಂಖೀÂಕ ಕಚೇರಿ ಮುಂದಿನ ವರ್ಷದ ಬೆಳವಣಿಗೆ ದರ ಕಡಿಮೆಯಾಗಲಿದೆ ಅಂದರೆ  ಅದು ನಾಲ್ಕು ವರ್ಷಗಳಷ್ಟು ಕನಿಷ್ಠ ಅಂದರೆ ಶೇ.6.5ರಷ್ಟು ಕಡಿಮೆಯಾಗಲಿದೆ ಎಂದು ಹೇಳಿತ್ತು. ಹೀಗಾಗಿ ಈ ಸಭೆ ಮಹತ್ವ ಪಡೆದಿದೆ.

ಟಾಪ್ ನ್ಯೂಸ್

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನು ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.