Budget; ಬಿಹಾರ, ಆಂಧ್ರಕ್ಕೆ ಪ್ರಧಾನ ಆದ್ಯತೆ : ಹಲವು ದೊಡ್ಡ ಯೋಜನೆಗಳು
Team Udayavani, Jul 23, 2024, 11:48 AM IST
ಹೊಸದಿಲ್ಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ ಮೂರನೇ ಅವಧಿಯ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಮೊದಲ ಬಜೆಟ್ ಮಂಡನೆಯಲ್ಲಿ ಸರಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಮಿತ್ರ ಪಕ್ಷಗಳಾದ ಜೆಡಿಯು, ಟಿಡಿಪಿ ಮತ್ತು ಎಲ್ ಜೆಪಿ ಪಕ್ಷಗಳನ್ನು ಸಂತುಷ್ಟಗೊಳಿಸಲು ಆಂಧ್ರಪ್ರದೇಶ ಮತ್ತು ಬಿಹಾರಕ್ಕೆ ಪ್ರಧಾನ ಆದ್ಯತೆ ನೀಡಿವೆ.
ಸಚಿವೆ ನಿರ್ಮಲಾ ಸೀತಾರಾಮನ್ ಎರಡು ರಾಜ್ಯಗಳಿಗೆ ಹೆಚ್ಚಿನ ಯೋಜನೆಗಳನ್ನು ಘೋಷಿಸುವ ವೇಳೆ ಸದನದಲ್ಲಿ ಕೆಲವರು ಗದ್ದಲ ಏರ್ಪಡಿಸಿದರೆ, ಟಿಡಿಪಿ, ಜೆಡಿಯು ಮತ್ತು ಎಲ್ ಜೆಪಿ ಸಂಸದರು ಮೇಜು ಕುಟ್ಟಿ ಸಂಭ್ರಮಿಸಿದರು.
ಯಾವ ಯಾವ ಯೋಜನೆ ?
“ಆಂಧ್ರ ಪ್ರದೇಶ ಮರುಸಂಘಟನೆ ಕಾಯಿದೆ(Andhra Pradesh Reorganisation Act)- ಕಾಯಿದೆಯಲ್ಲಿನ ಬದ್ಧತೆಗಳನ್ನು ಪೂರೈಸಲು ನಮ್ಮ ಸರ್ಕಾರವು ಪ್ರಯತ್ನಗಳನ್ನು ಮಾಡಿದೆ. ರಾಜ್ಯದ ಬಂಡವಾಳದ ಅಗತ್ಯವನ್ನು ಗುರುತಿಸಿ, ನಾವು ಬಹುಪಕ್ಷೀಯ ಏಜೆನ್ಸಿಗಳ ಮೂಲಕ ವಿಶೇಷ ಹಣಕಾಸಿನ ನೆರವು ನೀಡುತ್ತೇವೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಹೊಸ ರಾಜಧಾನಿ ಅಮರಾವತಿಗೆ 15,000 ಕೋಟಿ ರೂ., ಮುಂದಿನ ವರ್ಷಗಳಲ್ಲಿ ಹೆಚ್ಚುವರಿ ಮೊತ್ತಗಳನ್ನು ನೀಡುತ್ತೇವೆ. ಆಂಧ್ರಪ್ರದೇಶ ದ ರೈತರ ಜೀವನಾಡಿಯಾಗಿರುವ ಪೋಲಾವರಂ ನೀರಾವರಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಲು ಮತ್ತು ಹಣಕಾಸು ಒದಗಿಸಲು ನಮ್ಮ ಸರ್ಕಾರವು ಸಂಪೂರ್ಣವಾಗಿ ಬದ್ಧವಾಗಿದೆ” ಎಂದು ಸಚಿವೆ ಘೋಷಿಸಿದರು.
ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಸಿಕ್ಕಿರುವ ಭರವಸೆಗಳು
1. ಆಂಧ್ರಪ್ರದೇಶದ ಅಭಿವೃದ್ಧಿಗೆ ರೂ.15 ಸಾವಿರ ಕೋಟಿಗಳ ಆರ್ಥಿಕ ನೆರವು
2. ರಾಜ್ಯದ ಜೀವನಾಡಿ ಪೋಲವರಂ ಪೂರ್ಣಗೊಳಿಸಲು ಹೆಚ್ಚಿನ ಹಣ
3. ರಾಯಲಸೀಮಾ, ಪ್ರಕಾಶಂ ಮತ್ತು ಉತ್ತರಾಂಧ್ರ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್
4. ಕೈಗಾರಿಕಾ ಅಭಿವೃದ್ಧಿಗಾಗಿ ಹೈದರಾಬಾದ್-ಬೆಂಗಳೂರು ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ
5. ವಿಶಾಖಪಟ್ಟಣಂ-ಚೆನ್ನೈ ಇಂಡಸ್ಟ್ರಿಯಲ್ ಕಾರಿಡಾರ್‌ನಲ್ಲಿ ನೋಡ್‌ಗಳಿಗೆ ವಿಶೇಷ ನೆರವು
6. ಕೊಪ್ಪರ್ತಿ ಮತ್ತು ಓರ್ವಕಲ್ಲು ಕೈಗಾರಿಕಾ ಕೇಂದ್ರಗಳ ಅಭಿವೃದ್ಧಿ
7. ವಿಶಾಖ-ಚೆನ್ನೈ ಕಾರಿಡಾರ್‌ನಲ್ಲಿ ಕೊಪ್ಪರ್ತಿ ಮತ್ತು ಹೈದರಾಬಾದ್-ಬೆಂಗಳೂರು ಕಾರಿಡಾರ್‌ನಲ್ಲಿ ಧನಸಹಾಯ
8. ನೀರು, ವಿದ್ಯುತ್, ರೈಲ್ವೆ, ರಸ್ತೆಗಳ ಯೋಜನೆಗಳಿಗೆ ವಿಶೇಷ ಹಣ
9. ವಿಭಜನೆ ಕಾಯಿದೆಯಲ್ಲಿರುವ ಖಾತರಿಗಳ ಜಾರಿ
10. ಪೂರ್ವೋದಯ ಯೋಜನೆಯ ಮೂಲಕ ಆಂಧ್ರಪ್ರದೇಶಕ್ಕೆ ವಿಶೇಷ ಯೋಜನೆ
ಬಿಹಾರಕ್ಕೆ ಹಲವು ಯೋಜನೆ
“ಅಮೃತಸರ-ಕೋಲ್ಕತಾ ಕೈಗಾರಿಕಾ ಕಾರಿಡಾರ್‌ನಲ್ಲಿ ಬಿಹಾರದ ಗಯಾದಲ್ಲಿ industrial nod ಅಭಿವೃದ್ಧಿಯನ್ನು ಬೆಂಬಲಿಸುತ್ತೇವೆ. ಇದು ಪೂರ್ವ ಪ್ರದೇಶದ ಅಭಿವೃದ್ಧಿಯನ್ನು ವೇಗಗೊಳಿಸಲಿದೆ. ರಸ್ತೆ ಸಂಪರ್ಕ ಯೋಜನೆಗಳ ಅಭಿವೃದ್ಧಿಯನ್ನು ಸಹ ಬೆಂಬಲಿಸುತ್ತೇವೆ. ಪಾಟ್ನಾ-ಪೂರ್ಣಿಯಾ ಎಕ್ಸ್‌ಪ್ರೆಸ್‌ವೇ, ಬಕ್ಸಾರ್- ಭಾಗಲ್ಪುರ್ ಹೆದ್ದಾರಿ, ಬೋಧಗಯಾ-ರಾಜಗೀರ್-ವೈಶಾಲಿ-ದರ್ಭಾಂಗ ರಸ್ತೆ. ಬಕ್ಸಾರ್‌ನಲ್ಲಿ ಗಂಗಾ ನದಿಯ ಮೇಲೆ ಹೆಚ್ಚುವರಿ ದ್ವಿಪಥ ಸೇತುವೆಯನ್ನು 26,000 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡುತ್ತೇವೆ”ಎಂದು ಸಚಿವೆ ಘೋಷಿಸಿದರು.
”ಬಿಹಾರ ದ ಭಾಗಲ್ಪುರ್ ಜಿಲ್ಲೆಯ ಪಿರಪೈಂಟಿಯಲ್ಲಿ ಹೊಸ 2400 ಮೆಗಾವ್ಯಾಟ್ ವಿದ್ಯುತ್ ಸ್ಥಾವರ ಸ್ಥಾಪನೆ ಸೇರಿದಂತೆ ವಿದ್ಯುತ್ ಯೋಜನೆಗಳನ್ನು 21,400 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಬಿಹಾರದಲ್ಲಿ ಹೊಸ ವಿಮಾನ ನಿಲ್ದಾಣಗಳು, ವೈದ್ಯಕೀಯ ಕಾಲೇಜುಗಳು ಮತ್ತು ಕ್ರೀಡಾ ಮೂಲಸೌಕರ್ಯಗಳನ್ನು ನಿರ್ಮಿಸಲಾಗುವುದು. ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್‌ಗಳಿಂದ ಬಾಹ್ಯ ಸಹಾಯಕ್ಕಾಗಿ ಬಿಹಾರ ಸರ್ಕಾರದ ವಿನಂತಿಗಳನ್ನು ತ್ವರಿತಗೊಳಿಸಲಾಗುವುದು”ಎಂದು ಸಚಿವೆ ಘೋಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.