ಪ್ರಸಾರ ಭಾರತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಗೌರವ್ ದ್ವಿವೇದಿ ನೇಮಕ
Team Udayavani, Nov 15, 2022, 11:46 AM IST
ನವದೆಹಲಿ: ಹಿರಿಯ ಐಎಎಸ್ ಅಧಿಕಾರಿ ಮತ್ತು ಮಾಜಿ MyGovIndia ಮುಖ್ಯಸ್ಥ ಗೌರವ್ ದ್ವಿವೇದಿ ಅವರನ್ನು ಸೋಮವಾರ ಸಾರ್ವಜನಿಕ ಪ್ರಸಾರಕ ಪ್ರಸಾರ ಭಾರತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಲಾಗಿದೆ.
ಛತ್ತೀಸ್‌ಗಢ ಕೇಡರ್‌ನ 1995-ಬ್ಯಾಚ್ ಅಧಿಕಾರಿಯಾಗಿದ್ದ ದ್ವಿವೇದಿ ಅವರು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಐದು ವರ್ಷಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ. ಪ್ರಸ್ತುತ, ಅವರು ಛತ್ತೀಸ್‌ಗಢ ಸರ್ಕಾರದಲ್ಲಿ ವಾಣಿಜ್ಯ ತೆರಿಗೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
2016 ರಲ್ಲಿ ಮೋದಿ ಸರ್ಕಾರದ ಎರಡು ವರ್ಷಗಳನ್ನು ಗುರುತಿಸಲು ‘MyGov Town Hall’ ಅನ್ನು ಆಯೋಜಿಸುವಲ್ಲಿ ದ್ವಿವೇದಿ ಪ್ರಮುಖ ಪಾತ್ರ ವಹಿಸಿದ್ದರು.
ಉತ್ತರ ಪ್ರದೇಶದಿಂದ ಬಂದ ದ್ವಿವೇದಿಯವರು ತಮ್ಮ ಶಾಲಾ ಶಿಕ್ಷಣವನ್ನು ನೋಯ್ಡಾದ ಅಪೀಜಯ್ ಶಾಲೆಯಲ್ಲಿ ಮತ್ತು ದೆಹಲಿ ವಿಶ್ವವಿದ್ಯಾಲಯದಿಂದ ಪ್ರಾಣಿಶಾಸ್ತ್ರದಲ್ಲಿ ಪದವಿ ಪಡೆದರು. ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಪೊಲಿಟಿಕಲ್ ಸೈನ್ಸ್‌ನಿಂದ ಬಿಸಿನೆಸ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದರು.
ದ್ವಿವೇದಿ ಅವರು ಛತ್ತೀಸ್‌ಗಢ ಸರ್ಕಾರಕ್ಕೆ ಸೇರುವ ಮೊದಲು ಕೇರಳದಲ್ಲಿ ಸಹಾಯಕ ಕಲೆಕ್ಟರ್ ಆಗಿ ತಮ್ಮ ಆಡಳಿತ ವೃತ್ತಿಯನ್ನು ಪ್ರಾರಂಭಿಸಿದರು.
ದೂರದರ್ಶನದ ಮಹಾನಿರ್ದೇಶಕ ಮಾಯಾಂಕ್ ಅಗರವಾಲ್ ನಂತರ ಅವರು ಪ್ರಸಾರ ಭಾರತಿ ಸಿಇಒ ಆಗಿ ಹೆಚ್ಚುವರಿ ಪ್ರಭಾರವನ್ನು ಹೊಂದಿದ್ದಾರೆ.
ಇದಕ್ಕೂ ಮುನ್ನ ಪ್ರಸಾರ ಭಾರತಿಯ ಸಿಇಒ ಶಶಿ ಶೇಖರ್ ವೆಂಪತಿ ಅವರ ಐದು ವರ್ಷಗಳ ಅಧಿಕಾರಾವಧಿ ಮುಕ್ತಾಯವಾಗಿದ್ದು ಈ ಹಿನ್ನೆಲೆಯಲ್ಲಿ ದ್ವಿವೇದಿ ಅವರನ್ನು ನೂತನ ಸಿಇಒ ಆಗಿ ನೇಮಕಗೊಂಡಿದ್ದಾರೆ.
ಇದನ್ನೂ ಓದಿ : ಪ್ರವಾಸಿಗರ ಸುರಕ್ಷೆಗೆ ಆದ್ಯತೆ : ಮಲ್ಪೆ ಬೀಚ್, ದ್ವೀಪದಲ್ಲಿ ಈಜು ವಲಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.