ಬುರ್ಖಾಧಾರಿ ಮಹಿಳೆಯರಿಂದ ನಕಲಿ ಮತದಾನ: ಯುಪಿ ಬಿಜೆಪಿ ಅಭ್ಯರ್ಥಿ ಆರೋಪ
Team Udayavani, Apr 11, 2019, 11:27 AM IST
ಲಕ್ನೋ : ಬುರ್ಖಾಧಾರಿ ಮಹಿಳೆಯರಿಂದ ನಕಲಿ ಮತದಾನ ನಡೆದಿದೆ ಎಂದು ಉತ್ತರ ಪ್ರದೇಶದ ಮುಜಫರನಗರದ ಬಿಜೆಪಿ ಅಭ್ಯರ್ಥಿ ಸಂಜೀವ ಬಲ್ಯಾನ್ ಆರೋಪಿಸಿದ್ದು ವಿವಾದಕ್ಕೆ ಕಾರಣವಾಗಿದೆ.
‘ಬುರ್ಖಾಧಾರಿ ಮಹಿಳೆಯರ ಗುರುತನ್ನು ಪರಿಶೀಲಿಸದೆಯೇ ಅವರಿಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಹಾಗಾಗಿ ಇಲ್ಲಿ (ಮುಜಫರನಗರದಲ್ಲಿ ) ನಕಲಿ ಮತದಾನ ನಡೆಯುತ್ತಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸದಿದ್ದಲ್ಲಿ ನಾನು ಮರು ಮತದಾನಕ್ಕೆ ಆಗ್ರಹಿಸುತ್ತೇನೆ’ ಎಂದು ಬಲ್ಯಾನ್ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಇದಕ್ಕೆ ಮೊದಲು ಬಲ್ಯಾನ್ ಅವರು ಸಾರ್ವಜನಿಕ ಸಭೆಯೊಂದರಲ್ಲಿ ಮತದಾರರಿಗೆ ಬೆದರಿಕೆ ಒಡ್ಡಿದ್ದಾರೆಂಬ ದೂರಿನ ಬಗ್ಗೆ ಉತ್ತರ ಪ್ರದೇಶದ ಮುಖ್ಯ ಚುನಾವಣಾಧಿಕಾರಿ ಮುಜಫರನಗರ ಜಿಲ್ಲಾ ಮ್ಯಾಜಿಸ್ಟ್ರೇಟರಿಂದ ವರದಿ ಕೇಳಿರುವುದಾಗಿ ನಿನ್ನೆ ಮಾಧ್ಯಮ ವರದಿಗಳು ತಿಳಿಸಿದ್ದವು.
ಬಲ್ಯಾನ್ ಅವರು ಮತದಾರರಿಗೆ ಬೆದರಿಕೆ ಒಡ್ಡುವ ಭಾಷಣದ ವಿಡಿಯೋ ತುಣುಕನ್ನು ಲಗತ್ತೀಕರಿಸಿ ಆರ್‌ಎಲ್‌ಡಿ ಪಕ್ಷ ಚುನಾವಣಾಧಿಕಾರಿಗೆ ದೂರು ಸಲ್ಲಿಸಿತ್ತು.
ಇಂದು ಗುರುವಾರ ಬೆಳಗ್ಗೆ 7 ಗಂಟೆಗೆ ಉತ್ತರ ಪ್ರದೇಶದಲ್ಲಿ ಲೋಕಸಭೆಯ ಮೊದಲ ಹಂತದ ಚುನಾವಣೆ ಆರಂಭಗೊಂಡಿದ್ದು ಬಿರುಸಿನ ಮತದಾನ ಸಾಗುತ್ತಿರುವುದಾಗಿ ವರದಿಗಳು ತಿಳಿಸಿವೆ.
ಬಲ್ಯಾನ್ ಅವರು ಆರ್‌ಎಲ್‌ಡಿ ಮುಖ್ಯಸ್ಥ ಅಜಿತ್ ಸಿಂಗ್ ವಿರುದ್ಧ ಚುನಾವಣಾ ಕಣದಲ್ಲಿ ಹೋರಾಡುತ್ತಿದ್ದಾರೆ. ಅಜಿತ್ ಸಿಂಗ್ ಅವರು ಉತ್ತರ ಪ್ರದೇಶದಲ್ಲಿನ ಎಸ್‌ಪಿ-ಬಿಎಸ್‌ಪಿ-ಆರ್‌ಎಲ್‌ಡಿ ಮಹಾ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದಾರೆ.
ಉತ್ತರ ಪ್ರದೇಶವು ಲೋಕಸಭೆಗೆ 80 ಸಂಸದನ್ನು ಕಳುಹಿಸುವ ರಾಜ್ಯವಾಗಿದ್ದು ಕೇಂದ್ರ ಸರಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರವಹಿಸುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.