Ayodhya ಬಸ್-ಟ್ರಕ್ ನಡುವೆ ಭೀಕರ ಅಪಘಾತ; ಏಳು ಪ್ರಯಾಣಿಕರ ಸಾವು, 40 ಮಂದಿಗೆ ಗಾಯ
Team Udayavani, Apr 22, 2023, 8:55 AM IST
ಅಯೋಧ್ಯೆ: ಬಸ್ ಮತ್ತು ಟ್ರಕ್ ನಡುವಿನ ಭೀಕರ ಅಪಘಾತದಲ್ಲಿ ಏಳು ಜನರು ಮೃತಪಟ್ಟು 40ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ. ಲಕ್ನೋ- ಗೋರಖಪುರ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.
ಅಪಘಾತದ ರಭಸಕ್ಕೆ ಟ್ರಕ್ ಗೆ ಢಿಕ್ಕಿ ಹೊಡೆದ ಬಸ್ ಪಲ್ಟಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ.
ಅಯೋಧ್ಯೆಯಿಂದ ಬರುತ್ತಿದ್ದ ಬಸ್ಸು ಅಂಬೇಡ್ಕರ್ ನಗರದ ಕಡೆಗೆ ಹೋಗಲು ಹೆದ್ದಾರಿಯಲ್ಲಿ ತಿರುವು ಪಡೆಯಲು ಪ್ರಯತ್ನಿಸಿತು. ಈ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಟ್ರಕ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಏಳು ಮಂದಿ ಅಸುನೀಗಿ, 40ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ.
“ಸುಮಾರು 12 ಜನರನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ. 5 ಜನರನ್ನು ಜಿಲ್ಲಾ ಆಸ್ಪತ್ರೆಗೆ ಮತ್ತು 7 ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ. ಕೆಲವು ಸಾವುನೋವುಗಳು ಸಹ ಸಂಭವಿಸಿವೆ. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಅಯೋಧ್ಯೆ ಜಿಲ್ಲಾ ಮ್ಯಾಜಿಸ್ಟ್ರೇಟ್ ನಿತೀಶ್ ಕುಮಾರ್ ಹೇಳಿದ್ದಾರೆ.
Uttar Pradesh | At least 12 people injured in a collision between a passenger bus and a truck on the Lucknow-Gorakhpur highway in Ayodhya pic.twitter.com/l7MvdSHCQZ
— ANI UP/Uttarakhand (@ANINewsUP) April 21, 2023
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದಲ್ಲಿ ಜೀವಹಾನಿಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ ಎಂದು ಅವರ ಕಚೇರಿ ಟ್ವೀಟ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.