ಜಮ್ಮು ಕಾಶ್ಮೀರದ ಪೂಂಛ್ ನಲ್ಲಿ ಕಂದಕಕ್ಕೆ ಉರುಳಿದ ಬಸ್ : 9 ಮಂದಿ ಸಾವು, ಹಲವರಿಗೆ ಗಾಯ
Team Udayavani, Sep 14, 2022, 12:15 PM IST
ಶ್ರೀನಗರ : ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದು ಒಂಬತ್ತು ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, ಎಂಟು ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸಂಭವಿಸಿದೆ.
ಬಸ್ಸು ಪ್ರಾಣಿಕರನ್ನು ಹೊತ್ತು ಸಾವ್ಜಿಯಾನ್‌ನಿಂದ ಮಂಡಿಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.
ಘಟನೆ ನಡೆದ ಕೂಡಲೇ ಸ್ಥಳೀಯರು, ಪೊಲೀಸರು ಮತ್ತು ಸೇನೆ ರಕ್ಷಣಾ ಕಾರ್ಯಕ್ಕೆ ಧಾವಿಸಿದ್ದು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಿದ್ದಾರೆ.
ಘಟನೆ ಕುರಿತು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಟ್ವೀಟ್ ಮೂಲಕ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಮೃತರ ಕುಟುಂಬಕ್ಕೆ 5 ಲಕ್ಷ ರೂ.ಗಳನ್ನು ನೀಡಲಾಗುವುದು ಎಂದರು.
Jammu & Kashmir | A mini-bus accident occurred in the Sawjian area of Poonch. Army’s rescue operation is underway; 9 deaths reported, many injured shifted to a hospital in Mandi. Further details awaited: Mandi Tehsildar Shehzad Latif pic.twitter.com/NMFhtuK5lj
— ANI (@ANI) September 14, 2022
ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಅಪಘಾತದಲ್ಲಿ ಮೃತಪಟ್ಟವರಿಗೆ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
The loss of lives in a tragic road accident in Sawjian, Poonch is deeply distressing. My thoughts and prayers are with the bereaved families. I wish speedy recovery of the injured.
— President of India (@rashtrapatibhvn) September 14, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
MUST WATCH
ಹೊಸ ಸೇರ್ಪಡೆ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.