ಮುಷ್ಕರ ಹಿಂದೆಗೆತ: ತಮಿಳು ನಾಡಿನಲ್ಲಿ ಬಸ್ ಸೇವೆ ಮಾಮೂಲಿಗೆ
Team Udayavani, Jan 12, 2018, 11:00 AM IST
ಚೆನ್ನೈ : ರಾಜ್ಯ ಸಾರಿಗೆ ನೌಕರರು ವೇತನ ಹೆಚ್ಚಳ ಬೇಡಿಕೆಯನ್ನು ಆಗ್ರಹಿಸಿ ನಡೆಸುತ್ತಿದ್ದ ತಮ್ಮ ಎಂಟು ದಿನಗಳ ಮುಷ್ಕರವನ್ನು ಹಿಂದೆಗೆದುಕೊಂಡ ಕಾರಣ ತಮಿಳು ನಾಡಿನಲ್ಲಿ ಇಂದು ಶುಕ್ರವಾರ ಬಸ್ಸು ಸೇವೆ ಮಾಮೂಲಿ ಸ್ಥಿತಿಗೆ ಮರಳಿತು.
ಜನವರಿ 14ರ ಪೊಂಗಾಲ್ ಹಬ್ಬಕ್ಕೆ ಮುನ್ನ ರಾಜ್ಯದಲ್ಲಿನ ಬಸ್ ಮುಷ್ಕರ ಕೊನೆಗೊಂಡದ್ದು ರಾಜ್ಯದ ಜನರಿಗೆ ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು.
ಪೊಂಗಾಲ್ ಪ್ರಯುಕ್ತ ರಾಜ್ಯ ಸರಕಾರ ಇಂದು ಶುಕ್ರವಾರವೇ ಶಾಲೆ, ಕಾಲೇಜುಗಳಿಗೆ ರಜೆ ಸಾರಿರುವುದರಿಂದ ವಿದ್ಯಾರ್ಥಿಗಳಿಗೆ ಇನ್ನು ಐದು ದಿನಗಳ ನಿರಂತರ ರಜೆ ಸಿಕ್ಕಂತಾಗಿದೆ.
ಸಿಐಟಿಯು ನಾಯಕ ಎ ಸೌಂದರ್ ರಾಜನ್ ಅವರು ರಾಜ್ಯಸಾರಿಗೆ ನೌಕರರು ತಮ್ಮ ಅನಿರ್ದಿಷ್ಟಾವಧಿ ಮುಷ್ಕರವನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದಾರೆ. ಸಾರಿಗೆ ನೌಕರರ ವೇತನ ಹೆಚ್ಚಳ ಬೇಡಿಕೆಯನ್ನು ಪರಿಗಣಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರದೊಂದಿಗೆ ಮಾತುಕತೆ ನಡೆಸಲು ಮದ್ರಾಸ್ ಹೈಕೋರ್ಟ್ ಸಂಧಾನಕಾರರನ್ನು ನೇಮಿಸಿರುವುದರಿಂದ ನಾವು ನಮ್ಮ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂದೆಗೆದುಕೊಂಡಿದ್ದೇವೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
MUST WATCH
ಹೊಸ ಸೇರ್ಪಡೆ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.