ಬರೇಲಿಯಲ್ಲಿ ಬಸ್-ಟ್ರಕ್ ಡಿಕ್ಕಿ: 24 ಮಂದಿ ಸಜೀವ ದಹನ
Team Udayavani, Jun 6, 2017, 3:45 AM IST
ಬರೇಲಿ:ಸರ್ಕಾರಿ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದು, ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್‌ನಲ್ಲಿದ್ದ 24 ಮಂದಿ ಸಜೀವದಹನವಾದ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ಸೋಮವಾರ ನಡೆದಿದೆ.
ದೆಹಲಿಯಿಂದ ಉತ್ತರಪ್ರದೇಶದ ಗೋಂಡಾಗೆ ಹೊರಟಿದ್ದ ಬಸ್‌ನಲ್ಲಿ 41 ಮಂದಿ ಪ್ರಯಾಣಿಕರಿದ್ದರು. ರಾಷ್ಟ್ರೀಯ ಹೆದ್ದಾರಿ 4ರ ಬಡಾ ಬೈಪಾಸ್ ಸಮೀಪದಲ್ಲೇ ಈ ದುರಂತ ಸಂಭವಿಸಿದೆ. ಬಸ್‌ಗೆ ಶಹಜಹಾನ್‌ಪುರದಿಂದ ಬರುತ್ತಿದ್ದ ಟ್ರಕ್ ಡಿಕ್ಕಿ ಹೊಡೆದ ರಭಸಕ್ಕೆ ಬಸ್‌ನ ಡೀಸೆಲ್ ಟ್ಯಾಂಕ್‌ಗೆ ಬೆಂಕಿ ಹತ್ತಿಕೊಂಡಿದೆ. ತತ್‌ಕ್ಷಣವೇ ಬಸ್ ಹೊತ್ತಿ ಉರಿಯತೊಡಗಿದ್ದು, ಚಾಲಕ ಸೇರಿದಂತೆ 24 ಮಂದಿ ಸಜೀವ ದಹನವಾಗಿದ್ದಾರೆ. ನಿರ್ವಾಹಕ ಹಾಗೂ ಇತರೆ 14 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತದೇಹಗಳು ಗುರುತು ಹಿಡಿಯ ಲಾಗದಷ್ಟರ ಮಟ್ಟಿಗೆ ಸುಟ್ಟು ಕರಕಲಾಗಿವೆ. ಹೀಗಾಗಿ, ಅವುಗಳ ಡಿಎನ್‌ಎ ಪರೀಕ್ಷೆ ನಡೆಸಿದ ಬಳಿಕವೇ ಕುಟುಂಬ ಸದಸ್ಯರಿಗೆ ಹಸ್ತಾಂತರಿಸ ಲಾಗುವುದು ಎಂದು ಬರೇಲಿ ಜಿಲ್ಲಾಸ್ಪತ್ರೆಯ ವೈದ್ಯ ಡಾ. ಶೈಲೇಶ್ ರಂಜನ್ ತಿಳಿಸಿದ್ದಾರೆ.
ಈ ದುರ್ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿ ರುವ ಪ್ರಧಾನಿ ಮೋದಿ ಅವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಾ ಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್ ಅವರೂ ಇದೇ ಮೊತ್ತದ ಪರಿಹಾರ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.