Gujarat: ಬಸ್ಗಳ ನಡುವೆ ಮುಖಾಮುಖಿ ಢಿಕ್ಕಿ; ಭೀಕರ ಅಪಘಾತಕ್ಕೆ ಮೂವರು ಬಲಿ
Team Udayavani, Jun 1, 2024, 1:15 PM IST
ಗುಜರಾತ್: ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಮೂವರು ಮೃತಪಟ್ಟು, 30 ಮಂದಿ ಗಾಯಗೊಂಡಿರುವ ಘಟನೆ ಗುಜರಾತ್ ನಲ್ಲಿ ಶನಿವಾರ(ಜೂ.1 ರಂದು) ನಡೆದಿರುವುದು ವರದಿಯಾಗಿದೆ.
ಸಕರಿಯಾ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಮಾಲ್ಪುರದಿಂದ ಬರುತ್ತಿದ್ದ ರಾಜ್ಯ ಸಾರಿಗೆ ಬಸ್ ಡಿವೈಡರ್ ಹಾರಿ ಮೊಡಸಾದಿಂದ ವಿರುದ್ಧ ಧಿಕ್ಕಿನಲ್ಲಿ ಮಾಲ್ಪುರಕ್ಕೆ ತೆರಳುತ್ತಿದ್ದ ಮತ್ತೊಂದು ಬಸ್ಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮೂವರು ಮೃತಪಟ್ಟಿದ್ದಾರೆ.
ಮೃತರ ಗುರುತು ಪರಿಚಯದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
ಘಟನೆಯಲ್ಲಿ 30 ಮಂದಿಗೆ ಗಾಯಗಳಾಗಿದೆ. ಸ್ಥಳೀಯರು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
ಭೀಕರ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸರೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.