ಕೈನಲ್ಲಿ ಹೆಚ್ಚಿದ ಒಳಬೇಗುದಿ; ಸಿಬಲ್‌ ಬಳಿಕ ಈಗ ಚಿದಂಬರಂ ಟೀಕೆ

ಚುನಾವಣೆಗಳ ಫ‌ಲಿತಾಂಶದ ಬಗ್ಗೆ ಕಳವಳ

Team Udayavani, Nov 19, 2020, 6:14 AM IST

ಕೈನಲ್ಲಿ ಹೆಚ್ಚಿದ ಒಳಬೇಗುದಿ; ಸಿಬಲ್‌ ಬಳಿಕ ಈಗ ಚಿದಂಬರಂ ಟೀಕೆ

ಹೊಸದಿಲ್ಲಿ: ಬಿಹಾರ ವಿಧಾನಸಭೆ ಚುನಾವಣೆ ಮತ್ತು ದೇಶದ ವಿವಿಧ ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳ . ಹೀನಾಯ ಸೋಲಿನ ಅನಂತರ ಕಾಂಗ್ರೆಸ್‌ನಲ್ಲಿನ ಒಳಬೇಗುದಿ ಸಿಡಿಯುತ್ತಿದೆ. ಮೊನ್ನೆಯಷ್ಟೇ ಕಪಿಲ್‌ ಸಿಬಲ್‌ ಅವರು ನಾಯಕತ್ವದ ಬಗ್ಗೆ ಬಾಂಬ್‌ ಸಿಡಿಸಿದ್ದು, ಬುಧವಾರ ಪಕ್ಷದ ಹಿರಿಯ ನಾಯಕ ಪಿ.ಚಿದಂಬರಂ
ಕೂಡ ಅದೇ ಧಾಟಿಯಲ್ಲಿ ಮಾತನಾಡಿದ್ದಾರೆ.

ಈ ಮಧ್ಯೆ, ನಾಯಕತ್ವದ ವಿರುದ್ಧ ಮಾತನಾಡಿದ ಕಪಿಲ್‌ ಸಿಬಲ್‌ ವಿರುದ್ಧ ಲೋಕಸಭೆಯಲ್ಲಿ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಸಿಡಿದೆದ್ದಿದ್ದಾರೆ. ಇಂಥ ನಾಯಕರಿಗೆ ಕಾಂಗ್ರೆಸ್‌ ಪಕ್ಷ ಸರಿ ಇಲ್ಲ ಅನ್ನಿಸುತ್ತಿದ್ದರೆ, ಅವರು ಬೇರೊಂದು ಪಕ್ಷ ಕಟ್ಟಬಹುದು ಅಥವಾ ಬೇರೆ ಪಕ್ಷಕ್ಕೆ ಸೇರಬಹುದು ಎಂದು ತಿರುಗೇಟು ನೀಡಿದ್ದಾರೆ.

ಚಿದಂಬರಂ ಹೊಸ ಬಾಂಬ್‌: ಚಿದಂಬರಂ ಅವರು, ನೇರವಾಗಿ ನಾಯಕತ್ವದ ಬಗ್ಗೆ ಏನನ್ನೂ ಮಾತನಾಡಿಲ್ಲ. ಆದರೆ, ಪಕ್ಷದ ಸಂಘಟನೆಯಲ್ಲಿನ ವೈಫ‌ಲ್ಯಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದಿ ದಿನಪತ್ರಿಕೆ ದೈನಿಕ್‌ ಭಾಸ್ಕರ್‌ಗೆ ಸಂದರ್ಶನ ನೀಡಿರುವ ಅವರು, ಪ್ರಮುಖವಾಗಿ ಎರಡು ಅಂಶಗಳ ಬಗ್ಗೆ ಪ್ರಸ್ತಾವಿಸಿದ್ದಾರೆ. ಅಷ್ಟೇ ಅಲ್ಲ, ಕೊರೊನಾ ವೈರಸ್‌ ಸಮಸ್ಯೆ ಮತ್ತು ಆರ್ಥಿಕ ಕುಸಿತದಂಥ ಮಹತ್ವದ ವಿಚಾರಗಳನ್ನು ಇರಿಸಿಕೊಂಡೂ ಉತ್ತಮ ಸಾಧನೆ ಮಾಡಲಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಕರ್ನಾಟಕ, ಗುಜರಾತ್‌, ಮಧ್ಯಪ್ರದೇಶ ಸೇರಿದಂತೆ ಉಪ ಚುನಾವಣೆಗಳಲ್ಲಿ ಪಕ್ಷ ಸೋತಿರುವುದು ಆಘಾತ ತಂದಿದೆ ಎಂದಿದ್ದಾರೆ.

ಬಿಹಾರದಲ್ಲಿ ಸಿಪಿಐಎಂ, ಎಐಎಂಐಎಂ ಪಕ್ಷಗಳು ಉತ್ತಮ ಸಾಧನೆ ಮಾಡಿದವು. ಇದಕ್ಕೆ ಕಾರಣ, ಅವುಗಳ ತಳಮಟ್ಟದ ಸಂಘಟನೆ. ಆದರೆ, ನಾವು ಈ ವಿಚಾರದಲ್ಲಿ ಸೋತಿದ್ದೇವೆ. ಆಡಳಿತ ಪಕ್ಷಕ್ಕಿಂತಲೂ ವಿಪಕ್ಷಗಳೇ ಹೆಚ್ಚು ಮತ ಪಡೆದರೂ, ನಾವು ಗೆಲ್ಲಲಾಗಲಿಲ್ಲ. ಇದಕ್ಕೆ ಕಾರಣ, ನಮ್ಮ ಸಂಘಟನೆಯ ಕೊರತೆ ಎಂದು ಪ್ರತಿಪಾದಿಸಿದ್ದಾರೆ.

ಸಿಬಲ್‌ ವಿರುದ್ಧ ಸಿಡಿದ ಅಧೀರ್‌ ರಂಜನ್‌
ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಗೆ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ ನಡೆಯಲಿ ಎಂದು ಹೇಳಿದ್ದ ಪಕ್ಷದ ಹಿರಿಯ ನಾಯಕ ಕಪಿಲ್‌ ಸಿಬಲ್‌ ವಿರುದ್ಧ ಕಿಡಿಕಾರಿರುವ ಅಧೀರ್‌ ರಂಜನ್‌ ಚೌಧರಿ, ಪಕ್ಷ ಬಿಟ್ಟು ಹೋಗುವಂತೆ ಸಲಹೆ ನೀಡಿದ್ದಾರೆ. ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಅವರಿಗೆ ಆಪ್ತರು ಎನ್ನಿಸಿಕೊಂಡಿರುವ ಕೆಲವರು ಬಹಿರಂಗವಾಗಿ ನಾಯಕತ್ವದ ವಿರುದ್ಧ ಮಾತನಾಡುತ್ತಿದ್ದಾರೆ. ಇಂಥವರು ನೇರವಾಗಿಯೇ ಈ ಇಬ್ಬರು ನಾಯಕರ ಬಳಿ ಮಾತನಾಡಬಹುದು. ಆದರೆ, ಇದನ್ನು ಬಿಟ್ಟು ಬಹಿರಂಗವಾಗಿ ಮಾತನಾಡಿ ಪಕ್ಷಕ್ಕೆ ಮುಜುಗರ ತರುತ್ತಿದ್ದಾರೆ. ಒಂದು ವೇಳೆ ಈ ನಾಯಕರಿಗೆ ಕಾಂಗ್ರೆಸ್‌ ಸರಿಯಾದ ಪಕ್ಷ ಅಲ್ಲ ಅನ್ನಿಸಿದರೆ, ಪಕ್ಷ ಬಿಟ್ಟು ಹೋಗಬಹುದು, ಇಲ್ಲವೇ ಬೇರೊಂದು ಪಕ್ಷ ಸೇರಬಹುದು ಎಂದು ನೇರವಾಗಿಯೇ ಹೇಳಿದ್ದಾರೆ.

ಮತ್ತಷ್ಟು ದುರ್ಬಲ
ಕರ್ನಾಟಕ, ಉತ್ತರ ಪ್ರದೇಶ, ಗುಜರಾತ್‌ ಮತ್ತು ಮಧ್ಯಪ್ರದೇಶ ರಾಜ್ಯಗಳ ಉಪಚುನಾವಣ ಫ‌ಲಿತಾಂಶ ನನಗೆ ಆಘಾತ ತಂದಿದೆ. ಈ ಫ‌ಲಿತಾಂಶದಿಂದಾಗಿ ನಾವು ಸಂಘಟನಾತ್ಮಕವಾಗಿ ಸಮರ್ಥರೂ ಇಲ್ಲ ಮತ್ತು ದಿನದಿಂದ ದಿನಕ್ಕೆ ದುರ್ಬಲರಾಗುತ್ತಿದ್ದೇವೆ ಎಂಬುದನ್ನು ತೋರಿಸುತ್ತಿದೆ ಎಂದು
ಚಿದಂಬರಂ ಹೇಳಿದ್ದಾರೆ.

45ರಲ್ಲಿ ಸ್ಪರ್ಧೆ ಸಾಕಿತ್ತು
ಬಿಹಾರದಲ್ಲಿ ನಾವು ನಮ್ಮ ಶಕ್ತಿಗಿಂತಲೂ ಹೆಚ್ಚು ಬಲ ಪ್ರದರ್ಶನಕ್ಕೆ ಮುಂದಾದೆವು. ಅಂದರೆ, ನಮ್ಮ ಸಂಘಟನ ಶಕ್ತಿ ಇರುವೆಡೆ ಮಾತ್ರ ಗಮನಹರಿಸಬೇಕಿತ್ತು. ಅಂದರೆ, ಕೇವಲ 45 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೂ ಸಾಕಿತ್ತು. ಆದರೆ, ಕಳೆದ 20 ವರ್ಷಗಳಿಂದ ಬಿಜೆಪಿ ಮತ್ತವರ ಅಂಗಪಕ್ಷಗಳ ವಶದಲ್ಲಿರುವ 25 ಕ್ಷೇತ್ರಗಳಲ್ಲಿ ನಮಗೆ ಟಿಕೆಟ್‌ ನೀಡಲಾಗಿತ್ತು.  ಈ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಕಾಂಗ್ರೆಸ್‌ ಹೇಳಬೇಕಿತ್ತು ಎಂದು ಚಿದಂಬರಂ ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್‌ ಸಿಗೋದು ಕಷ್ಟ – ವರದಿ

Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್‌ ಸಿಗೋದು ಕಷ್ಟ – ವರದಿ

Jammu and Kashmir: Vehicle falls into gorge

Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.