![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jan 29, 2024, 10:46 AM IST
ಕೋಲ್ಕತ್ತಾ: ಮುಂದಿನ ಏಳು ದಿನಗಳಲ್ಲಿ ಭಾರತದಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ಬರಲಿದೆ ಎಂದು ಕೇಂದ್ರ ಸಚಿವ ಶಾಂತನು ಠಾಕೂರ್ ಹೇಳಿದ್ದಾರೆ. ಕೇಂದ್ರ ಸಚಿವರ ಹೇಳಿಕೆ ಸಂಚಲನ ಮೂಡಿಸಿದೆ.
“ಮುಂದಿನ ಏಳು ದಿನಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಮಾತ್ರವಲ್ಲ, ಭಾರತದಾದ್ಯಂತ ಸಿಎಎ ಜಾರಿಗೆ ಬರಲಿದೆ ಎಂದು ನಾನು ಖಾತರಿ ನೀಡಬಲ್ಲೆ” ಎಂದು ಬಂಗಾಳದ ದಕ್ಷಿಣ 24 ಪರಗಣಗಳ ಕಾಕ್ ದ್ವಿಪ್ ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಠಾಕೂರ್ ಬಂಗಾಳಿಯಲ್ಲಿ ಹೇಳಿದರು.
ಬಂಗಾಳದ ಬಂಗಾವ್ ನ ಬಿಜೆಪಿಯ ಲೋಕಸಭಾ ಸಂಸದ ಶಾಂತನು ಠಾಕೂರ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಿಎಎ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ.
ಕಳೆದ ವರ್ಷ ಡಿಸೆಂಬರ್ ನಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಿಎಎಯನ್ನು ಜಾರಿಗೆ ತರಲಿದೆ, ಅದನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಅಮಿತ್ ಶಾ ಹೇಳಿದ್ದರು. ಸಿಎಎಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಗುರಿಯಾಗಿಸಿ ಅವರು ಹೇಳಿದ್ದರು.
ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರವಾದ ನಂತರ ಮತ್ತು 2019 ರಲ್ಲಿ ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದ ನಂತರ, ಸಿಎಎ ಗೆ ಭಾರತದಾದ್ಯಂತ ಬೃಹತ್ ಪ್ರತಿಭಟನೆಗಳನ್ನು ಎದುರಿಸಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.