ಅಣೆಕಟ್ಟು ಅಭಿವೃದ್ಧಿ: ಕರ್ನಾಟಕಕ್ಕೆ 581 ಕೋಟಿ ರೂ. ನೆರವು
Team Udayavani, Sep 20, 2018, 6:00 AM IST
ಹೊಸದಿಲ್ಲಿ: ಕರ್ನಾಟಕ ಸೇರಿದಂತೆ ಏಳು ರಾಜ್ಯಗಳ ಆಣೆಕಟ್ಟೆ ನವೀಕರಣಕ್ಕಾಗಿ ಕೇಂದ್ರ ಸರಕಾರ ಮೀಸಲಿಟ್ಟಿರುವ ಮೊತ್ತವನ್ನು ಹೆಚ್ಚಿಸಿದೆ. 3466 ಕೋಟಿ ರೂ.ಅನ್ನು ಒಟ್ಟು ಯೋಜನೆಗೆ ಮೀಸಲಿರಿಸಲಾಗಿದ್ದು, ಕರ್ನಾಟಕಕ್ಕೆ ಈ ಯೋಜನೆ ಅಡಿಯಲ್ಲಿ 22 ಆಣೆಕಟ್ಟೆಗಳ ಅಭಿವೃದ್ಧಿಗಾಗಿ 581 ಕೋಟಿ ರೂ. ಸಿಗಲಿದೆ. ಈ ಹಿಂದಿನ ಯೋಜನೆ ಅಡಿಯಲ್ಲಿ 276 ಕೋಟಿ ರೂ. ಮೀಸಲಿಡಲಾಗಿತ್ತು. ಈ ಯೋಜನೆಗೆ 2628 ಕೋಟಿ ರೂ. ಅನ್ನು ವಿಶ್ವಬ್ಯಾಂಕ್ ನೀಡಲಿದ್ದು, 747 ಕೋಟಿ ರೂ.ಗಳನ್ನು ರಾಜ್ಯಗಳು ಹಾಗೂ ಬಾಕಿ 91 ಕೋಟಿ ರೂ.ಗಳನ್ನು ಕೇಂದ್ರ ಜಲ ಆಯೋಗ ಒದಗಿಸಲಿದೆ.
ವೇತನ ಹೆಚ್ಚಳಕ್ಕೆ ಸಮ್ಮತಿ: ಈಗಾಗಲೇ ಜಾರಿಗೊಂಡಿರುವ ಆಶಾ ಕಾರ್ಯಕರ್ತೆಯರ ವೇತನವನ್ನು 1 ಸಾವಿರ ರೂ.ಗಳಿಂದ 2 ಸಾವಿರ ರೂ.ಗಳಿಗೆ ಹೆಚ್ಚಿಸಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ದೇಶಾದ್ಯಂತ 10 ಲಕ್ಷಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿಗೆ ಈ ಸೌಲಭ್ಯ ಸಿಗಲಿದೆ. ಅಲ್ಲದೆ ಇವರಿಗೆ ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮೆ ಯೋಜನೆ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ವಿಮೆ ಯೋಜನೆಯ ಲಾಭ ಪಡೆಯಲೂ ಅವಕಾಶ ಕಲ್ಪಿಸಲಾಗಿದೆ. ಕೆಲ ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಈ ಬಗ್ಗೆ ಘೋಷಣೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Siddapura: ಅದೃಷ್ಟ ತಂದ ಲಾರಿ ಧರ್ಮಸ್ಥಳ ಕ್ಷೇತ್ರಕ್ಕೆ ಸಮರ್ಪಣೆ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.