One Nation One Election ಕೇಂದ್ರ ಸಚಿವ ಸಂಪುಟ ಅನುಮೋದನೆ : ವರದಿ
Team Udayavani, Dec 12, 2024, 4:45 PM IST
ಹೊಸದಿಲ್ಲಿ: ಒಂದು ದೇಶ, ಒಂದು ಚುನಾವಣೆ ಪ್ರಕ್ರಿಯೆಗೆ ಕೇಂದ್ರ ಸಚಿವ ಸಂಪುಟ ಗುರುವಾರ(ಡಿ12) ರಂದು ಅನುಮೋದನೆ ನೀಡಿದೆ. ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲೇ ಸಮಗ್ರ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಲೋಕಸಭೆ ಮತ್ತು ರಾಜ್ಯಸಭೆಯ ಉಭಯ ಸದನಗಳಲ್ಲಿ ಮಂಡಿಸಿ ಅಂಗೀಕಾರವಾದರೆ, ಅದು ಏಕಕಾಲದಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆ ನಡೆಸುವ ನಿಟ್ಟಿನಲ್ಲಿ ದೊಡ್ಡ ಹೆಜ್ಜೆಯಾಗಲಿದೆ.
2023,ಸೆಪ್ಟೆಂಬರ್ 2 ರಂದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಾರತದಲ್ಲಿ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಸಾಧ್ಯತೆಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಿತ್ತು.
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಮಿತಿಯ ಅಧ್ಯಕ್ಷರಾಗಿದ್ದರು. ರಾಜಕೀಯ ಪಕ್ಷಗಳು ಸೇರಿದಂತೆ ವಿವಿಧ ಮಧ್ಯಸ್ಥಗಾರರಿಂದ ಸಲಹೆಗಳು, ದೃಷ್ಟಿಕೋನಗಳು ಮತ್ತು ಹೇಳಿಕೆಗಳನ್ನು ಸಂಗ್ರಹಿಸಿ, ಸಮಿತಿಯು 2024, ಮಾರ್ಚ್ 14 ರಂದು ತನ್ನ ವರದಿಯನ್ನು ಸಲ್ಲಿಸಿತ್ತು. ಸಂಸತ್ ಮತ್ತು ವಿಧಾನಸಭಾ ಚುನಾವಣೆಗಳನ್ನು ಏಕ ಕಾಲದಲ್ಲಿ ನಡೆಸುವುದು ಸರಕಾರದ ಉದ್ದೇಶವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Palakkad: ಸಿಮೆಂಟ್ ಲಾರಿ ಪಲ್ಟಿಯಾಗಿ ನಾಲ್ವರು ಶಾಲಾ ವಿದ್ಯಾರ್ಥಿನಿಯರು ಬ*ಲಿ
SC:ಧಾರ್ಮಿಕ ಸ್ಥಳಗಳಿಗೆ ಸಂಬಂಧಿಸಿದ ದಾವೆ; ಕೋರ್ಟ್ ಗಳು ಆದೇಶಗಳನ್ನು ನೀಡಬಾರದು
AAP: ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2100 ರೂ… ಕೇಜ್ರಿವಾಲ್ ಘೋಷಣೆ
Heavy Rain: ತಮಿಳುನಾಡಿನ 10 ಜಿಲ್ಲೆಗಳ ಶಾಲೆಗಳಿಗೆ ಇಂದು (ಡಿ.12) ರಜೆ
ಜಡ್ಜ್ ವಿರುದ್ಧ ವಾಗ್ಧಂಡನೆಗೆ ಇಂಡಿಯಾ ಒಕ್ಕೂಟ ಸಿದ್ಧತೆ
MUST WATCH
ಹೊಸ ಸೇರ್ಪಡೆ
World Chess ರೋಚಕ ಫೈನಲ್; ಡಿಂಗ್ ಸೋಲಿಸಿದ ಗುಕೇಶ್: ಅತ್ಯಂತ ಕಿರಿಯ ವಿಶ್ವ ಚಾಂಪಿಯನ್
Panchamasali ಮೀಸಲಾತಿ ಹೋರಾಟದಲ್ಲಿ ಅನಗತ್ಯ ರಾಜಕೀಯ : ಹೆಬ್ಬಾಳ್ಕರ್ ಕಿಡಿ
Captains’ clash: ವಿರಾಟ್ ಕೊಹ್ಲಿ- ರೋಹಿತ್ ಶರ್ಮಾ; ನಾಯಕನಾಗಿ ಯಾರು ಉತ್ತಮರು?
Palakkad: ಸಿಮೆಂಟ್ ಲಾರಿ ಪಲ್ಟಿಯಾಗಿ ನಾಲ್ವರು ಶಾಲಾ ವಿದ್ಯಾರ್ಥಿನಿಯರು ಬ*ಲಿ
4,6,6,6,6: ಐಪಿಎಲ್‌ನಲ್ಲಿ 30 ಲಕ್ಷಕ್ಕೆ ಸೇಲಾದ ಆಟಗಾರನ ಭರ್ಜರಿ ಇನ್ನಿಂಗ್ಸ್ | ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.