ಶಬರಿಮಲೆ ವಿಮಾನ ನಿಲ್ದಾಣ ಯೋಜನೆಗೆ ಕೇರಳ ಸರಕಾರ ಅಸ್ತು
Team Udayavani, Feb 15, 2017, 3:00 PM IST
ತಿರುವನಂತಪುರ : ವರ್ಷಂಪ್ರತಿ ಅಯ್ಯಪ್ಪ ಸ್ವಾಮಿ ದೇವರನ್ನು ಭೇಟಿಯಾಗಲು ಬರುವ ಲಕ್ಷಾಂತರ ಯಾತ್ರಿಕರ ಅನುಕೂಲಕ್ಕಾಗಿ ಶಬರಿಮಲೆಯಲ್ಲಿ ಹಸಿರು ವಿಮಾನ ನಿಲ್ದಾಣವನ್ನು ನಿರ್ಮಿಸುವ ಪ್ರಸ್ತಾವಕ್ಕೆ ಕೇರಳ ಸಚಿವ ಸಂಪುಟ ತಾತ್ವಿಕ ಅನುಮತಿ ನೀಡಿದೆ.
ಈ ಪ್ರಸ್ತಾವಿತ ವಿಮಾನ ನಿಲ್ದಾಣದ ನಿರ್ಮಾಣ ಕುರಿತಾದ ಅಧ್ಯಯನವನ್ನು ಕೈಗೊಳ್ಳಲು ಕೇರಳ ಸರಕಾರ ಕೈಗಾರಿಕಾಭಿವೃದ್ಧಿ ನಿಗಮವನ್ನು ಸಚಿವ ಸಂಪುಟ ಕೋರಿದೆ.
ಪ್ರಕೃತ ಯಾತ್ರಿಕರು ರಸ್ತೆ ಮಾರ್ಗವಾಗಿ ಮಾತ್ರವೇ ಶಬರಿಮಲೆಗೆ ಹೋಗಬಹುದಾಗಿದೆ. ಈಚಿನ ವರ್ಷಗಳಲ್ಲಿ ಶಬರಿಮಲೆಗೆ ಹೋಗುವ ಯಾತ್ರಿಕರ ಸಂಖ್ಯೆ ಗಮನಾರ್ಹವಾಗಿ ಏರಿದೆ.
ಸಿಪಿಎಂ ನೇತೃತ್ವದ ಎಲ್ಡಿಎಫ್ ಸರಕಾರ ಈ ಹಿಂದೆ ಎರುಮಲೆ ಸಮೀಪದ ತಾಣವನ್ನು ಪ್ರಸ್ತಾವಿತ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಗುರುತಿಸಿತ್ತು. ಎರುಮಲೆ ತಾಣವು ಕೇರಳದ ಪಟ್ಟಣಂತಿಟ್ಟ ಜಿಲ್ಲೆಯಲ್ಲಿನ ಶಬರಿಮಲೆ ದೇವಳದಿಂದ 45 ಕಿ.ಮೀ. ದೂರದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.