ಕರ್ನಾಟಕಪ್ರಚಾರ: ಕೈಗೆ ಪ್ರಸ್ತಾವ‌ ಕೊಟ್ಟಿದ್ದ ಕೇಂಬ್ರಿಜ್‌ಅನಾಲಿಟಿಕಾ


Team Udayavani, Apr 20, 2018, 9:44 AM IST

Rahul-Gandhi-1–600.jpg

ಲಕ್ನೋ/ಹೊಸದಿಲ್ಲಿ: ಫೇಸ್‌ ಬುಕ್‌ ದತ್ತಾಂಶ ದುರ್ಬಳಕೆ ಮಾಡಿಕೊಂಡ ಆರೋಪ ಹೊತ್ತಿರುವ ಚುನಾವಣಾ ವಿಶ್ಲೇಷಣಾ ಸಂಸ್ಥೆ ಕೇಂಬ್ರಿಜ್‌ ಅನಾಲಿಟಿಕಾ, ಕರ್ನಾಟಕದಲ್ಲಿ ಕಾಂಗ್ರೆಸ್‌ ಪರ ಚುನಾವಣಾ ಪ್ರಚಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಕಾವೇರಿ ನೀರು ಹಂಚಿಕೆ ವಿಚಾರ, ಬರ ಪರಿಹಾರ, ಕೃಷಿ ಸಾಲ ಮನ್ನಾ, ನೀರಿನ ಕೊರತೆ, ಹಿಂದಿ ಭಾಷೆಯ ಹೇರಿಕೆ ಮತ್ತು ಅಲ್ಪಸಂಖ್ಯಾಕರು ಮತ್ತು ದಲಿತರ ವಿಷಯಗಳನ್ನು ಇಟ್ಟುಕೊಂಡು ಚುನಾವಣೆಯನ್ನು ಎದುರಿಸುವ ಪ್ರಸ್ತಾವ ಮಾಡಿತ್ತು ಎಂದು ‘ದ ಟೈಮ್ಸ್‌ ಆಫ್ ಇಂಡಿಯಾ’ ವರದಿ ಮಾಡಿದೆ.

ಅಷ್ಟೇ ಅಲ್ಲ, ಉತ್ತರ ಪ್ರದೇಶದಲ್ಲಿ ಬಿಜೆಪಿ ಯಶಸ್ಸಿನಿಂದಾಗಿ ಕರ್ನಾಟಕದಲ್ಲೂ ಬಿಜೆಪಿ ಹೆಚ್ಚು ಬಲವಾಗಿದೆ. ಇದಕ್ಕೆ ಸ್ಮಾರ್ಟ್‌ಫೋನ್‌ ಬಳಕೆಯೇ ಕಾರಣ. ವ್ಯಾಪಕವಾಗಿ ಇಂಟರ್ನೆಟ್‌ ದತ್ತಾಂಶ ಬಳಕೆಯಾಗುತ್ತಿದ್ದು, ಕರ್ನಾಟಕದಲ್ಲೂ ಇದು ಮಹತ್ವದ ಪಾತ್ರ ವಹಿಸಲಿದೆ ಎಂದು ಕೇಂಬ್ರಿಜ್‌ ಅನಾಲಿಟಿಕಾ ತನ್ನ ವರದಿಯಲ್ಲಿ ಉಲ್ಲೇಖೀಸಿತ್ತು. ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢದ ಚುನಾವಣೆಗಾಗಿ ಕೂಡ ಆಯಾ ರಾಜ್ಯಗಳ ಸ್ಥಳೀಯ ವಿಚಾರಗಳನ್ನು ಮುಂದಿಟ್ಟುಕೊಂಡು ಯಾವ ರೀತಿ ಚುನಾವಣೆ ಎದುರಿಸಲು ರಣತಂತ್ರ ರೂಪಿಸಬೇಕು ಎಂಬ ಬಗ್ಗೆ ಪ್ರಸ್ತಾವನೆ ಸಲ್ಲಿಸಿ, ಒಪ್ಪಂದಕ್ಕೂ ಮುಂದಾಗಿತ್ತು.

ಮುಚ್ಚಳಿಕೆ ಬರೆಸಿಕೊಳ್ಳಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಫೇಸ್‌ ಬುಕ್‌ನಿಂದ ಮುಚ್ಚಳಿಕೆ ಬರೆಯಿಸಿಕೊಳ್ಳಿ ಎಂದು ಮಾಹಿತಿ ತಂತ್ರಜ್ಞಾನಕ್ಕಾಗಿರುವ ಸಂಸತ್‌ ಸ್ಥಾಯಿ ಸಮಿತಿ ಕೇಂದ್ರ ಸರಕಾರಕ್ಕೆ ಸೂಚಿಸಿದೆ. ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌ ನೇತೃತ್ವದ ಸಮಿತಿ ಫೇಸ್‌ ಬುಕ್‌ಗೆ ಕಳುಹಿಸಲಾಗಿರುವ ಎಲ್ಲಾ ಲಿಖೀತ ಮಾಹಿತಿಯ ಪ್ರತಿ ನೀಡಬೇಕು ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಇಲೆಕ್ಟ್ರಾನಿಕ್ಸ್‌ ಸಚಿವಾಲಯಕ್ಕೆ ಹೇಳಿದೆ.

ಇದೇ ವೇಳೆ ಸಭೆಯಲ್ಲಿ ದೇಶದ ಡಿಜಿಟಲ್‌ ಅರ್ಥ ವ್ಯವಸ್ಥೆಗೆ ಸಂಬಂಧಿಸಿದಂತೆ ಮಾಹಿತಿ ತಂತ್ರಜ್ಞಾನ ಮತ್ತು ಇಲೆಕ್ಟಾನಿಕ್ಸ್‌ ಸಚಿವಾಲಯದ ಜತೆ ಸೂಕ್ತ ಮಾಹಿತಿ ಇಲ್ಲ ಎಂಬ ಅಂಶದ ಬಗ್ಗೆ ಸ್ಥಾಯಿ ಸಮಿತಿ ಅಚ್ಚರಿ ವ್ಯಕ್ತಪಡಿಸಿದೆ. ನಿಯಮಗಳನ್ನು ಬಲಪಡಿಸದೇ ಇದ್ದರೆ ವಿಶ್ವದ ಇತರ ರಾಷ್ಟ್ರಗಳಿಗೆ ಹೋಲಿಕೆ ಮಾಡಿದರೆ ದೇಶದ ಮಾಹಿತಿ ತಂತ್ರಜ್ಞಾನ ವ್ಯವಸ್ಥೆ ಹಿಂದುಳಿದೀತು ಎಂಬ ಅಭಿಪ್ರಾಯಕ್ಕೆ ಬರಲಾಗಿದೆ. ಕಳೆದ ತಿಂಗಳು ಬಳಕೆದಾರರ ಮಾಹಿತಿ ದುರುಪಯೋಗ ಆರೋಪಕ್ಕೆ ಕೇಂದ್ರ ಸರಕಾರ ಫೇಸ್‌ ಬುಕ್‌ ಗೆ ನೋಟಿಸ್‌ ನೀಡಿತ್ತು. ಅದಕ್ಕೆ ಜಾಲತಾಣ ಸಂಸ್ಥೆ ಉತ್ತರ ನೀಡಿದ್ದು, ಅದು ಸರಕಾರದ ಪರಿಶೀಲನೆಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

ಸಲಹೆ ಆಹ್ವಾನ: ಆನ್‌ ಲೈನ್‌ ಮಾಹಿತಿ ಸುರಕ್ಷತೆಯಲ್ಲಿ ಭಾರತ ಕೈಗೊಳ್ಳಬೇಕಾದ ಕ್ರಮ ಇನ್ನೂ ಹಲವು ಇವೆ ಎಂದು ಸದಸ್ಯರು ಹೇಳಿದ್ದಾರೆ. ಅದಕ್ಕೆ ಪೂರಕವಾಗಿ ಸಮಿತಿ ಅಧ್ಯಕ್ಷ ಠಾಕೂರ್‌ ಮಾಹಿತಿ ಸುರಕ್ಷತೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಸಲಹೆ ಮತ್ತು ಮಾಹಿತಿ ನೀಡುವಂತೆ ಆಹ್ವಾನ ನೀಡಿದ್ದಾರೆ.

ಪ್ರಚಾರಕ್ಕೆ ಪ್ರಸ್ತಾವ‌
ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು  ಕೇಂಬ್ರಿಜ್‌ ಅನಾಲಿಟಿಕಾ ಮುಖ್ಯಸ್ಥ ಅಲೆಕ್ಸಾಂಡರ್‌ ನಿಕ್ಸ್‌ ರಾಹುಲ್‌ ಗಾಂಧಿ ಲಂಡನ್‌ನಲ್ಲಿ 2017ರ ಆಗಸ್ಟ್‌ನಲ್ಲಿ ಭೇಟಿ ಮಾಡಿದ್ದರು. ಈ ವೇಳೆ 2019ರ ಚುನಾವಣೆಯ ಪ್ರಚಾರ ತಂತ್ರಕ್ಕಾಗಿ ಕೇಂಬ್ರಿಜ್‌ ಅನಾಲಿಟಿಕಾ 50 ಪುಟಗಳ ವರದಿಯನ್ನು ಸಲ್ಲಿಸಿತ್ತು. ಇದಕ್ಕೆ 2.5 ಕೋಟಿ ರೂ. ವೆಚ್ಚದ ಪ್ರಸ್ತಾವವನ್ನೂ ಮಾಡಿತ್ತು. ಆದರೆ ಕಾಂಗ್ರೆಸ್‌ ಮಾತ್ರ ಕೇಂಬ್ರಿಜ್‌ ಅನಾಲಿಟಿಕಾ ಜತೆ ಯಾವುದೇ ರೀತಿಯ ಸಂಪರ್ಕ ಹೊಂದಿಲ್ಲ ಎಂದು ಹೇಳಿಕೊಂಡಿತ್ತು.  ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಬಳಿಕ ಕಾಂಗ್ರೆಸ್‌ಗೆ ಈ ಪ್ರಸ್ತಾವ ಸಲ್ಲಿಸಲಾಗಿತ್ತು. ಅದಕ್ಕೆ ಪೂರಕವಾಗಿ ಕರ್ನಾಟಕ, ಮಧ್ಯಪ್ರದೇಶ, ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅನ್ನು ಗೆಲ್ಲಿಸಲು ಎಲ್ಲ ರೀತಿಯ ಪ್ರಯತ್ನ ಮಾಡುವ ಬಗ್ಗೆಯೂ ಪ್ರಸ್ತಾವ ಮಾಡಲಾಗಿತ್ತು.

ಟಾಪ್ ನ್ಯೂಸ್

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನು ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.