Tribute: ಎಂದಿಗೂ ಮರೆಯಲಾರೆ…”: ಮುಂಬೈ ದಾಳಿಯ ಸಂತ್ರಸ್ತರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ
Team Udayavani, Nov 26, 2023, 1:29 PM IST
ಮುಂಬಯಿ: ಮುಂಬೈನಲ್ಲಿ ನಡೆದ 26/11 ಭಯೋತ್ಪಾದನಾ ದಾಳಿ ನಡೆದು ಇಂದಿಗೆ 15 ವರ್ಷ ಪೂರ್ಣಗೊಂಡಿದ್ದು ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ 107 ನೇ ಆವೃತ್ತಿಯ ‘ಮನ್ ಕಿ ಬಾತ್’ ನಲ್ಲಿ ಭಯೋತ್ಪಾದನಾ ದಾಳಿಯಲ್ಲಿ ಹುತಾತ್ಮರಾದವರನ್ನು ಸ್ಮರಿಸಿದರು.
ಇದೊಂದು “ಅತ್ಯಂತ ಭೀಕರ ಭಯೋತ್ಪಾದನಾ ದಾಳಿ” ಎಂದು ಕರೆದ ಪ್ರಧಾನಿ, “ನವೆಂಬರ್ 26 ರ ಈ ದಿನವನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ದಿನವೇ ದೇಶವು ಅತ್ಯಂತ ಭೀಕರ ಭಯೋತ್ಪಾದಕ ದಾಳಿಗೆ ಒಳಗಾಯಿತು” ಎಂದು ಹೇಳಿದರು.
ದಾಳಿಯಲ್ಲಿ ಹುತಾತ್ಮರಾದ ಎಲ್ಲರಿಗೂ ಶ್ರದ್ಧಾಂಜಲಿ ಸಲ್ಲಿಸಿದ ಅವರು, ಇಂದು ಇಡೀ ದೇಶವು “ಹುತಾತ್ಮರಾದ ನಮ್ಮ ವೀರ ಪುರುಷರನ್ನು ಸ್ಮರಿಸುತ್ತಿದೆ” ಎಂದು ಹೇಳಿದರು.
ನವೆಂಬರ್ 26 ಅನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ದಿನವೇ ದೇಶದಲ್ಲಿ ಅತ್ಯಂತ ಘೋರ ಭಯೋತ್ಪಾದಕ ದಾಳಿ ನಡೆಯಿತು. ಭಯೋತ್ಪಾದಕರು ಮುಂಬೈ ಮತ್ತು ಇಡೀ ದೇಶವನ್ನು ಬೆಚ್ಚಿಬೀಳಿಸಿದ್ದಾರೆ. ಆದರೆ, ನಾವು ಆ ದಾಳಿಯಿಂದ ಚೇತರಿಸಿಕೊಂಡಿರುವುದು ಭಾರತದ ಸಾಮರ್ಥ್ಯ ಮತ್ತು ಈಗ ನಾವು ಸಂಪೂರ್ಣ ಧೈರ್ಯದಿಂದ ಭಯೋತ್ಪಾದನೆಯನ್ನು ಹತ್ತಿಕ್ಕುತ್ತಿದ್ದೇವೆ ”ಎಂದು ಪ್ರಧಾನಿ ಮೋದಿ ಹೇಳಿದರು.
ನವೆಂಬರ್ 26, 2008 ರಂದು, 10 ಪಾಕಿಸ್ತಾನಿ ಭಯೋತ್ಪಾದಕರು ಸಮುದ್ರ ಮಾರ್ಗವಾಗಿ ಮುಂಬೈಗೆ ಆಗಮಿಸಿ ಮನಬಂದಂತೆ ಗುಂಡಿನ ದಾಳಿ ನಡೆಸಿದರು ಈ ವೇಳೆ 18 ಭದ್ರತಾ ಸಿಬ್ಬಂದಿ ಸೇರಿದಂತೆ 166 ಜನರು ಜೀವ ಕಳೆದುಕೊಂಡರು ಮತ್ತು ಅನೇಕ ಮಂದಿ ಭಯೋತ್ಪಾದಕ ದಾಳಿಯಿಂದ ಗಾಯಗೊಂಡರು. ಭಯೋತ್ಪಾದಕರ ದಾಳಿಯಲ್ಲಿ ಅಂದಿನ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಮುಖ್ಯಸ್ಥ ಹೇಮಂತ್ ಕರ್ಕರೆ, ಸೇನಾ ಮೇಜರ್ ಸಂದೀಪ್ ಉನ್ನಿಕೃಷ್ಣನ್, ಮುಂಬೈನ ಹೆಚ್ಚುವರಿ ಪೊಲೀಸ್ ಕಮಿಷನರ್ ಅಶೋಕ್ ಕಾಮ್ಟೆ ಮತ್ತು ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ವಿಜಯ್ ಸಲಸ್ಕರ್ ದಾಳಿಯಲ್ಲಿ ಹುತಾತ್ಮರಾದರು.
ಮುಂಬೈನ ತಾಜ್ ಹೋಟೆಲ್, ಶಿವಾಜಿ ಟರ್ಮಿನಲ್ ಸೇರಿದಂತೆ 12 ಸ್ಥಳಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು.
ಇದನ್ನೂ ಓದಿ: UP: ನಿದ್ರೆ ಬರುವ ಪಾಯಸ ಕೊಟ್ಟು ಫಸ್ಟ್ ನೈಟ್ ದಿನವೇ ಚಿನ್ನಾಭರಣದೊಂದಿಗೆ ಪರಾರಿಯಾದ ನವವಧುಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.