ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Team Udayavani, Nov 18, 2024, 4:11 PM IST
ಪಾಟ್ನಾ: ಹೋಮ್ ವರ್ಕ್ ಮಾಡದ ಕಾರಣಕ್ಕೆ ವಿದ್ಯಾರ್ಥಿಯನ್ನು ಶಿಕ್ಷಕನೊಬ್ಬ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬಿಹಾರದ ಅರ್ವಾಲ್ ಜಿಲ್ಲೆಯ ಉಮೈರಾಬಾದ್ ಪ್ರದೇಶದ ಹಿಮಾಲಯನ್ ವಸತಿ ಶಾಲೆಯಲ್ಲಿ ನಡೆದಿರುವುದು ವರದಿಯಾಗಿದೆ.
ಐದನೇ ತರಗತಿಯಲ್ಲಿ ಓದುತ್ತಿರುವ ಅಮೃತ್ ರಾಜ್ ಅವರು ಅನಾರೋಗ್ಯವಾದ ಕಾರಣ ಶಾಲೆಗೆ ರಜೆ ಹಾಕಿದ್ದರು. ಇದರಿಂದಾಗಿ ಹಿಂದಿನ ದಿನ ಕೊಟ್ಟ ಹೋಮ್ ವರ್ಕ್ ಮಾಡಲು ಸಾಧ್ಯವಾಗಿರಲಿಲ್ಲ. ಗುಣಮುಖವಾಗಿ ಶಾಲೆಗೆ ಬಂದಾಗ ಸಹಾಯಕ ಶಿಕ್ಷಕನಾಗಿ ಹುದ್ದೆಯಲ್ಲಿದ್ದ ಪ್ರಿನ್ಸ್ ಕುಮಾರ್ ಅಮೃತ್ ಬಳಿ ಹೋಮ್ ವರ್ಕ್ ಮಾಡಿ ಯಾಕೆ ಬಂದಿಲ್ಲವೆಂದು ಕೇಳಿದ್ದಾರೆ.
ಇದನ್ನೂ ಓದಿ: Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ
ಇದಕ್ಕೆ ಅಮೃತ್ ಅನಾರೋಗ್ಯವಾಗಿದ್ದ ಕಾರಣವನ್ನು ಹೇಳಿದ್ದಾರೆ. ಆದರೆ ಶಿಕ್ಷಕ ಪ್ರಿನ್ಸ್ ಕುಮಾರ್ ವಿದ್ಯಾರ್ಥಿಯ ಮಾತನ್ನು ಕೇಳದೆ ಬೆತ್ತದಿಂದ ಹೊಡೆದಿದ್ದಾರೆ. ಹಿಗ್ಗಾಮುಗ್ಗಾವಾಗಿ ಥಳಿಸಿದ ಕಾರಣಕ್ಕೆ ಅಮೃತ್ ಅವರ ಕಣ್ಣಿಗೆ ಬಲವಾಗಿ ಏಟಾಗಿದೆ.
ಕೂಡಲೇ ಅಮೃತ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಐಜಿಎಂಎಸ್ ಪಾಟ್ನಾದ ಕಣ್ಣಿನ ವಿಭಾಗಕ್ಕೆ ಕರೆದುಕೊಂಡು ಹೋಗಲಾಗಿದೆ. ಆಳವಾದ ಗಾಯದಿಂದಾಗಿ ಅಮೃತ್ ಕಡಿಮೆ ದೃಷ್ಟಿ ಮತ್ತು ರೆಟಿನಾದ ಹಾನಿಯಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಮಗನ ಕಲಿಯುತ್ತಿರುವ ಶಾಲೆಯಲ್ಲೇ ಶಿಕ್ಷಕರಾಗಿರುವ ಸಂಜೀತ್ ಕುಮಾರ್ ಘಟನೆ ಸಂಬಂಧ ಶಿಕ್ಷಕ ಪ್ರಿನ್ಸ್ ಕುಮಾರ್, ಶಾಲೆಯ ಪ್ರಿನ್ಸಿಪಾಲ್ ರಂಜೀತ್ ಸಿಂಗ್ ಮತ್ತು ಅವರ ಪತ್ನಿ ಕೂಡ ಹಲ್ಲೆ ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಸದರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸದ್ಯ ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವುದಾಗಿ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
MUST WATCH
ಹೊಸ ಸೇರ್ಪಡೆ
T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್ ಟಿ20: ಆಸ್ಟ್ರೇಲಿಯ 3-0 ಜಯಭೇರಿ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.