Political Alliances ಮೈತ್ರಿ ಒಕ್ಕೂಟ ನಿಯಂತ್ರಿಸುವ ಹಕ್ಕಿಲ್ಲ: ಭಾರತೀಯ ಚುನಾವಣೆ ಆಯೋಗ
Team Udayavani, Oct 30, 2023, 9:14 PM IST
ನವದೆಹಲಿ: 26 ವಿಪಕ್ಷಗಳ ಒಕ್ಕೂಟವನ್ನು “ಇಂಡಿಯಾ’ ಎಂದು ಹೆಸರಿಸಿರುವುದಕ್ಕೆ ನಿರ್ಬಂಧ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಮೈತ್ರಿಪಕ್ಷಗಳನ್ನು ನಿಯಂತ್ರಿಸುವ ಹಕ್ಕನ್ನು ತಾವು ಹೊಂದಿಲ್ಲವೆಂದು ಭಾರತೀಯ ಚುನಾವಣೆ ಆಯೋಗ (ಇಸಿಐ) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.
ಉದ್ಯಮಿ ಗಿರೀಶ್ ಭಾರದ್ವಾಜ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ “ಇಂಡಿಯಾ’ ಎಂಬ ಹೆಸರನ್ನು ರಾಜಕೀಯ ಉದ್ದೇಶಗಳಿಗಾಗಿ ಬಳಸುವುದು ಲಾಂಛನ ಹಾಗೂ ಹೆಸರುಗಳ (ಅನುಚಿತ ಬಳಕೆ ತಡೆ ) ಕಾಯ್ದೆ 1950ರ ಉಲ್ಲಂಘನೆ ಎಂದು ವಾದಿಸಿದ್ದರು.
ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಚುನಾವಣೆ ಆಯೋಗದ ಪ್ರತಿಕ್ರಿಯೆ ಕೋರಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಆಯೋಗವು ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 29ಎ ಯಾವುದೇ ಸಂಘಗಳು, ಸಂಸ್ಥೆಗಳನ್ನು ರಾಜಕೀಯ ಪಕ್ಷಗಳನ್ನಾಗಿ ನೋಂದಾಯಿಸಿಕೊಳ್ಳುವ ಅಧಿಕಾರ ನೀಡಿದೆ. ಆದರೆ ರಾಜಕೀಯ ಮೈತ್ರಿಕೂಟಗಳನ್ನು ಕಾಯ್ದೆಗಳ ಅನ್ವಯ ನಿಯಂತ್ರಿತ ಘಟಕವನ್ನಾಗಿ ಪರಿಗಣಿಸುವ ಹಕ್ಕು ಆಯೋಗಕ್ಕೆ ಇರುವುದಿಲ್ಲವೆಂದು ಸ್ಪಷ್ಟನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.