ಬಿಜೆಪಿ ವಿರೋಧಿ ಬಣಕ್ಕೆ ಅಖೀಲೇಶ್ ಯಾದವ್ ಬೆಂಬಲ
Team Udayavani, Apr 16, 2017, 12:51 PM IST
ಲಕ್ನೋ: ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ವಿರುದ್ಧ ಬಿಎಸ್‌ಪಿ ನಾಯಕಿ ಮಯಾವತಿ ಬಿಜೆಪಿ ವಿರುದ್ಧ ಸಮರ ಸಾರಿರುವಂತೆಯೇ, ಎಸ್ಪಿ ನಾಯಕ ಅಖೀಲೇಶ್ ಯಾದವ್ ಅದಕ್ಕೆ ದನಿಗೂಡಿಸಿದ್ದಾರೆ. ಇವಿಎಂಗಳು ವಿಶ್ವಾಸಾರ್ಹತೆ ಕಳೆದುಕೊಂಡಿವೆ. ಮುಂಬರುವ ಚುನಾವಣೆಯಲ್ಲಿ ಮತಪತ್ರಗಳನ್ನು ಬಳಕೆ ಮಾಡಬೇಕು. ಚುನಾವಣಾ ಆಯೋಗ ಮತಯಂತ್ರಗಳ ಬಗ್ಗೆ ಎದ್ದಿರುವ ಶಂಕೆ ನಿವಾರಿಸುವ ಉತ್ತರದಾಯಿತ್ವ ಹೊಂದಿದೆ ಎಂದಿದ್ದಾರೆ.
ಲಕ್ನೋದಲ್ಲಿ ಮಾತನಾಡಿದ ಅವರು, “ಬಿಜೆಪಿ ಪ್ರಚಾರದ ವಿರುದ್ಧದ ಬಣದ ಮುಂಚೂಣಿಯಲ್ಲಿ ನಿಂತು ಕಾರ್ಯನಿರ್ವಹಿಸಲು ಸಿದ್ಧನಿದ್ದೇನೆ. ಬಿಜೆಪಿ ವಿಪಕ್ಷಗಳ ನಾಯಕರನ್ನು ಒಂದೇ ವೇದಿಕೆಯಡಿ ತರುವ ನಿಟ್ಟಿನಲ್ಲಿ ನಮ್ಮ ಪಕ್ಷ ಮಹತ್ವದ ಪಾತ್ರ ನಿರ್ವಹಿಸಲಿದೆ’ ಎನ್ನುವ ಮೂಲಕ ಮಾಯಾವತಿ ಪ್ರಯತ್ನಕ್ಕೆ ದನಿಗೂಡಿಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಅನಂತರ ಬಿಎಸ್‌ಪಿ ಹಾಗೂ ಎಸ್‌ಪಿ ನಾಯಕರಿಂದ ಒಮ್ಮತದ ಹೇಳಿಕೆ ಬಂದಿರುವುದು ಇದೇ ಮೊದಲು.
“ಮತಯಂತ್ರದಲ್ಲಿ ಯಾವಾಗ ಸಮಸ್ಯೆ ಕಾಣಿಸಿಕೊಳ್ಳುತ್ತದೆ, ಯಾವಾಗ ಸಾಫ್ಟ್ವೇರ್ ಕೈಕೊಡುತ್ತದೆ ಎಂದು ಹೇಳಲಾಗದು. ಹೀಗಾಗಿ ನಮಗೆ ವಿದ್ಯುನ್ಮಾನ ಮತಯಂತ್ರಗಳ ಮೇಲೆ ವಿಶ್ವಾಸವಿಲ್ಲ’ ಎಂದು ಅಖೀಲೇಶ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.