ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಕೇಸ್: ನಾಲ್ವರು ಮಹಿಳೆಯರು ಸೇರಿ 10 ಜನರ ಮೇಲೆ ಎಫ್ಐಆರ್

Team Udayavani, Aug 5, 2023, 12:04 PM IST

case against 10 including 4 women in bilwara minor case

ಜೈಪುರ: ರಾಜಸ್ಥಾನದ ಭಿಲ್ವಾರಾದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರು ಮಹಿಳೆಯರು ಸೇರಿದಂತೆ ಹತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಐವರನ್ನು ಬಂಧಿಸಲಾಗಿದೆ

ಬುಧವಾರ ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಭಿಲ್ವಾರಾ ಜಿಲ್ಲೆಯಲ್ಲಿ ಸುಟ್ಟು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆಕೆಯ ಸುಟ್ಟ ಅವಶೇಷಗಳು ಕಲ್ಲಿದ್ದಲು ಕುಲುಮೆಯಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ.

ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಆ ಪ್ರದೇಶದ ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಅವರನ್ನು ಅಮಾನತುಗೊಳಿಸಲಾಗಿದೆ.

ಅಪ್ರಾಪ್ತ ಬಾಲಕಿಯನ್ನು ಭಿಲ್ವಾರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಕಲ್ಲಿದ್ದಲು ಕುಲುಮೆಯಲ್ಲಿ ಕೊಲೆ ಮಾಡಿ ನಂತರ ಸುಟ್ಟು ಹಾಕಲಾಯಿತು. ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಸ್ಥಳೀಯರು ಹೇಳಿದ್ದರು.

ಶೋಧ ಕಾರ್ಯಾಚರಣೆಯ ನಂತರ, ಶುಕ್ರವಾರ ಗ್ರಾಮದ ಕೊಳದಿಂದ ಅರ್ಧ ಸುಟ್ಟ ದೇಹದ ಭಾಗಗಳನ್ನು ಪತ್ತೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಏನು? ಕಳೆದ ಬುಧವಾರ ದನ ಮೇಯಿಸಲು ಹೋಗಿದ್ದ ವೇಳೆ ಅಪ್ರಾಪ್ತ ಬಾಲಕಿ ನಾಪತ್ತೆಯಾಗಿದ್ದಳು. ಆರೋಪಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಅದೇ ರಾತ್ರಿ ಆಕೆಯ ದೇಹವನ್ನು ಸುಟ್ಟು ಹಾಕಿದ್ದರು.

ಬಾಲಕಿಯ ದೇಹದ ಕೆಲವು ಭಾಗಗಳನ್ನು ಕುಲುಮೆಯಲ್ಲಿ ಸುಟ್ಟು ಹಾಕಲಾಗಿದೆ ಮತ್ತು ಇತರ ಭಾಗಗಳನ್ನು ಎಲ್ಲಾ ಸಾಕ್ಷ್ಯಗಳನ್ನು ನಾಶಪಡಿಸಲು ಹತ್ತಿರದ ಕೊಳದಲ್ಲಿ ವಿಲೇವಾರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನು “ಅಪರೂಪದಲ್ಲಿ ಅಪರೂಪದ ಪ್ರಕರಣ” ಎಂದು ಕರೆದ ಭಿಲ್ವಾರಾ ಎಸ್ಪಿ ಆದರ್ಶ್ ಸಿಧು, ಆರೋಪಿಗಳಿಗೆ ಮರಣದಂಡನೆ ವಿಧಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಹೇಳಿದರು.

ಇದನ್ನೂ ಓದಿ:Gruha Jyothi Scheme ಚಾಲನೆಗೆ ಕ್ಷಣಗಣನೆ: ಊಟದ ಮೆನುವಿನಲ್ಲಿ ಲಡ್ಡು- ಪಲಾವ್

ಆರು ಪುರುಷರು ಮತ್ತು ನಾಲ್ವರು ಮಹಿಳೆಯರು ಸೇರಿದಂತೆ ಹತ್ತು ಆರೋಪಿಗಳು ಅಪರಾಧದಲ್ಲಿ ಭಾಗಿಯಾಗಿದ್ದಾರೆ ಎಂದು ಸಿಧು ಹೇಳಿದರು.

ಬಂಧಿತ ಆರೋಪಿಗಳನ್ನು ಕಲು ಲಾಲ್ (25) ಮತ್ತು ಕನ್ಹಾ (21), ಸಂಜಯ್ ಕುಮಾರ್ (20), ಮತ್ತು ಪಪ್ಪು (35) ಎಂದು ಗುರುತಿಸಲಾಗಿದೆ. ಬಂಧನದಲ್ಲಿರುವ ಅಪ್ರಾಪ್ತ ವಯಸ್ಕನ ವಯಸ್ಸನ್ನು ಪ್ರಸ್ತುತ ಕಂಡುಹಿಡಿಯಲಾಗುತ್ತಿದೆ ಎಂದು ಅವರು ಹೇಳಿದರು.

ಕನ್ಹಾ ಮತ್ತು ಕಾಲು ಸಾಮೂಹಿಕ ಅತ್ಯಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಎಸ್ಪಿ ಹೇಳಿದರು.

ಇಬ್ಬರು ಪುರುಷ ಆರೋಪಿಗಳ ಪತ್ನಿಯರು ಸೇರಿದಂತೆ ನಾಲ್ವರು ಮಹಿಳೆಯರೂ ಸಾಕ್ಷಿ ನಾಶದಲ್ಲಿ ಭಾಗಿಯಾಗಿದ್ದಾರೆ. ಇನ್ನು ಇಬ್ಬರು ಆರೋಪಿಗಳು ಆರೋಪಿಯ ತಾಯಿ ಹಾಗೂ ಮತ್ತೋರ್ವ ಆರೋಪಿಯ ಸಹೋದರಿ ಎಂದು ಎಸ್ಪಿ ತಿಳಿಸಿದ್ದಾರೆ.

ಕುಲುಮೆಗೆ ಹಾಕಿದಾಗ ಬಾಲಕಿ ಜೀವಂತವಾಗಿದ್ದಳೋ ಅಥವಾ ಪ್ರಜ್ಞಾಹೀನಳಾಗಿದ್ದಳೋ ಮತ್ತು ದೇಹವನ್ನು ಕತ್ತರಿಸಿದ ನಂತರ ಅದರಲ್ಲಿ ಎಸೆಯಲಾಗಿದೆಯೇ ಎಂಬುದನ್ನು ವಿಧಿವಿಜ್ಞಾನ ತಂಡವು ದೃಢಪಡಿಸುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.