Arundhati Roy ವಿರುದ್ಧ ಕೇಸು: ಬಿಜೆಪಿ ವಿರುದ್ಧ ವಿಪಕ್ಷಗಳ ಟೀಕೆ
ಲೇಖಕಿಯ ವಿಚಾರಣೆಗೆ ಲೆಫ್ಟಿನೆಂಟ್ ಗರ್ವನರ್ ವಿ.ಕೆ.ಸಕ್ಸೇನಾ ಅನುಮತಿ
Team Udayavani, Jun 16, 2024, 12:33 AM IST
ಹೊಸದಿಲ್ಲಿ: ಲೇಖಕಿ ಅರುಂಧತಿ ರಾಯ್ ಹಾಗೂ ಪ್ರೊ| ಶೇಖ್ ಶೌಕಾತ್ ಹುಸೈನ್ ಅವರನ್ನು ಕಾನೂನು ಬಾಹಿರ ಚಟುವಟಿಕೆಗಳ(ತಡೆ)ಕಾಯ್ದೆಯಡಿ ವಿಚಾರಣೆಗೆ ಒಳಪಡಿಸಲು ದಿಲ್ಲಿಯ ಲೆಫ್ಟಿನೆಂಟ್ ಗರ್ವನರ್ ವಿ.ಕೆ.ಸಕ್ಸೇನಾ ಅನು ಮತಿ ನೀಡಿದ್ದಾರೆ. 2010ರಲ್ಲಿ ಹೊಸದಿಲ್ಲಿ ಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿ ದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಲೆಫ್ಟಿನೆಂಟ್ ಗವರ್ನರ್ ಅನುಮತಿ ದೊರೆಯುತ್ತಿದ್ದಂತೆಯೇ ಅರುಂಧತಿ ಹಾಗೂ ಶೌಕಾತ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ವಾಕ್ಸಮರ: ಈ ಬೆಳವಣಿಗೆ ಬಿಜೆಪಿ ಮತ್ತು ವಿಪಕ್ಷಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ಕರ್ನಾಟಕದ ಕಾಂಗ್ರೆಸ್ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಟ್ವೀಟ್ ಮಾಡಿ, “ಭಿನ್ನ ಅಭಿಪ್ರಾಯ ಹೊಂದುವುದನ್ನು ಹತ್ತಿಕ್ಕಲು ಬಿಜೆಪಿ ಪ್ರಯತ್ನಿಸುತ್ತಿದೆ. ಅದು ದಿನವೂ ಬಿಕ್ಕಟ್ಟುಗಳನ್ನು ಸೃಷ್ಟಿಸುತ್ತಿದೆ’ ಎಂದು ಬರೆದುಕೊಂಡಿದ್ದಾರೆ. ಅದಕ್ಕೆ ತಿರುಗೇಟು ನೀಡಿದ ಬಿಜೆಪಿಯ ಶೆಹಜಾದ್ ಪೂನಾ ವಾಲಾ “ಲೆಫ್ಟಿನೆಂಟ್ ಗವರ್ನರ್ ನೀಡಿರುವ ಆದೇಶದಿಂದ ಕಾಂಗ್ರೆಸ್ ಬುಡವೇಕೆ ಅಲುಗಾಡುತ್ತಿದೆ? ಈ ಹಿಂದೆ ಕಾಂಗ್ರೆಸ್ ಎಸ್ಡಿಪಿಐನಿಂದ ಸಹಕಾರ ಪಡೆಯುತ್ತಿತ್ತು. ಈಗ ಪ್ರತ್ಯೇಕತಾವಾದಿಗಳ ಸಹಕಾರ ಪಡೆ ಯಲು ಮುಂದಾಗಿದೆ’ ಎಂದು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.