ಮದುವೆಯಿಂದ ಜಾತಿ ಬದಲಾಗದು: ಸು.ಕೋ.
Team Udayavani, Jan 21, 2018, 6:05 AM IST
ಹೊಸದಿಲ್ಲಿ: ವ್ಯಕ್ತಿಯೊಬ್ಬ ಜನಿಸಿದ ಕೂಡಲೇ ನಿರ್ಧಾರವಾಗುವ ತನ್ನ ಜಾತಿಯನ್ನು, ಮುಂದೆ ತನ್ನ ಮದುವೆಯ ಆಧಾರದಲ್ಲಿ ಬದಲಾಯಿಸಿಕೊಳ್ಳುವಂತಿಲ್ಲ ಎಂಬ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದೆ.
ಮೇಲ್ಜಾತಿಗೆ ಸೇರಿದ್ದ ಮಹಿಳೆಯೊಬ್ಬರು ಪರಿಶಿಷ್ಟ ಜಾತಿಯ ವ್ಯಕ್ತಿಯೊಬ್ಬನನ್ನು ಮದುವೆಯಾದ ಹಿನ್ನೆಲೆಯಲ್ಲಿ ತಾನೂ ಪರಿಶಿಷ್ಟ ಜಾತಿಯ ಪ್ರಮಾಣ ಪತ್ರ ಪಡೆದು, ಅದರ ಆಧಾರದ ಮೇಲೆ ಮೀಸಲಾತಿಯ ಸೌಲಭ್ಯ ಪಡೆದ ಪ್ರಕರಣವೊಂದರಲ್ಲಿ ನ್ಯಾ| ಅರುಣ್ ಮಿಶ್ರಾ ಹಾಗೂ ನ್ಯಾ| ಎಂ.ಎಂ. ಶಾಂತನಗೌಡರ್ ನ್ಯಾಯ ಪೀಠ ಈ ತೀರ್ಪು ನೀಡಿದೆ. ಜಾತಿ ಹುಟ್ಟುವಾಗಲೇ ನಿರ್ಧಾರ ವಾಗುವಂಥದ್ದು. ವಿವಾಹ ವಾದೊಡನೆ ಅದು ಬದಲಾಗು ವುದಿಲ್ಲ ಎಂದು ಪೀಠ ಹೇಳಿದೆ.
ಏನಿದು ಪ್ರಕರಣ?: ಮೇಲ್ಜಾತಿಗೆ ಸೇರಿದ ಪಂಜಾಬ್‌ನ ಮಹಿಳೆಯೊಬ್ಬರು, ಪರಿಶಿಷ್ಟ ಜಾತಿಯ ವ್ಯಕ್ತಿಯೊಬ್ಬರನ್ನು ವಿವಾಹವಾಗಿದ್ದರು. ಅನಂತರ, 1995ರಲ್ಲಿ ತನ್ನ ಶೈಕ್ಷಣಿಕ ಅರ್ಹತೆ ಮೂಲಕ ಪಠಾಣ್‌ಕೋಟ್‌ನ ಕೇಂದ್ರೀಯ ವಿದ್ಯಾಲಯದಲ್ಲಿ ಸ್ನಾತಕೋತ್ತರ ಶಿಕ್ಷಕಿ ಹುದ್ದೆಗೆ ನೇಮಕಗೊಂಡಿದ್ದರು. ಆಮೇಲೆ, ತಾನು ಪರಿಶಿಷ್ಟ ವ್ಯಕ್ತಿಯನ್ನು ವಿವಾಹವಾದ ಕಾರಣ ನೀಡಿ, 1991ರಲ್ಲಿ ಜಿಲ್ಲಾಡಳಿತದಿಂದ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದಿದ್ದ ಮಹಿಳೆ, ಸರಕಾರಿ ಸೇವೆಗಳಲ್ಲಿ ಆ ಜಾತಿಗೆ ಸಿಗುವ ಭಡ್ತಿ, ಮುಂತಾದ ಸವಲತ್ತುಗಳನ್ನು ಬಳಸಿಕೊಂಡರಲ್ಲದೆ, ಕೆಲವು ವರ್ಷಗಳ ಹಿಂದೆ ಶಾಲೆಯ ಉಪಪ್ರಾಂಶು ಪಾಲರಾಗಿ ನೇಮಕವಾದರು. ಹಾಗಾಗಿ, ಇದರ ವಿರುದ್ಧ ದೂರು ದಾಖಲಾಗಿತ್ತು.
ದೂರಿನ ಆಧಾರದಲ್ಲಿ ತನಿಖೆ ನಡೆದು, ಜಿಲ್ಲಾಡಳಿತ 2015ರಲ್ಲಿ ಅವರ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ರದ್ದುಗೊಳಿಸಿತ್ತು. ಅದರ ಬೆನ್ನಲ್ಲೇ, ಕೇಂದ್ರೀಯ ವಿದ್ಯಾಲಯವು ಅವರನ್ನು ಸೇವೆ ಯಿಂದ ವಜಾಗೊಳಿಸಿತು. ಇದರ ವಿರುದ್ಧ, ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದ ಆ ಮಹಿಳೆಗೆ ನಿರಾಸೆಯಾಗಿದ್ದರಿಂದಾಗಿ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.