ಹಾಡುಹಗಲೇ ಮಗುವನ್ನು ಅಪಹರಿಸಿದ ದುರಳ, ಸಿಸಿಟಿವಿಯಲ್ಲಿ ಸೆರೆ
Team Udayavani, Feb 24, 2018, 12:05 PM IST
ಮುಂಬಯಿ: ಮುಂಬಯಿಯ ಸಾಕಿನಾಕಾ ಪ್ರದೇಶಲ್ಲಿ ನಿನ್ನೆ ಶುಕ್ರವಾರ ಎರಡೂವರೆ ವರ್ಷ ಪ್ರಾಯದ ಬಾಲಕಿಯನ್ನು ಅಪರಿಚಿತ ವ್ಯಕ್ತಿಯೋರ್ವ ಅಪಹರಿಸಿದ್ದು ಇದರ ಸಿಸಿಟಿವಿ ವಿಡಿಯೋ ಚಿತ್ರಿಕೆ ಈಗ ವೈರಲ್ ಆಗಿದೆ.
ವಿಡಿಯೋ ಚಿತ್ರಿಕೆಯಲ್ಲಿ ಕಂಡು ಬರುವಂತೆ ಎರಡೂವರೆ ವರ್ಷ ಪ್ರಾಯದ ಶಿರೀನ್ ಫಾತಿಮಾ ಎಂಬ ಬಾಲಕಿ ಅಂಗಡಿಯಿಂದ ಹೊರಹೋಗುತ್ತಿದ್ದಾಳೆ. ಆಗ ಕಡು ಕಪ್ಪು ಬಣ್ಣದ ಶರ್ಟ್ ಧರಿಸಿದ ಅಪರಿಚಿತ ವ್ಯಕ್ತಿಯೋರ್ವ ಮಗುವಿಗೆ ಅಡ್ಡ ಬರುತ್ತಾನೆ. ಒಡನೆಯೇ ಆತ ಮಗುವನ್ನು ಅತ್ಯಂತ ಸಹಜ ರೀತಿಯಲ್ಲಿ ಯಾರಿಗೂ ಶಂಕೆ ಬಾರದಂತೆ ಎತ್ತಿಕೊಂಡು ಹೋಗುತ್ತಾನೆ.
ಮಗು ಕಾಣೆಯಾದೊಡನೆಯೇ ಮನೆಯವರು ಪೊಲೀಸರನ್ನು ಸಂಪರ್ಕಿಸಿದ್ದಾರೆ. ಮಗು ಫಾತಿಮಾ ನಾಪತ್ತೆಯಾಗಿರುವ ಬಗ್ಗೆ ತಂದೆ ಚಿಂತ್ರಾಕಾಂತರಾಗಿದ್ದಾರೆ.
#WATCH: 2.5-year-old girl abducted from outside a shop in #Mumbai‘s Saki Naka area, was rescued by Police after 6 hours. Accused has been nabbed.(Source: CCTV, 23 February) pic.twitter.com/qu9BEJsTLY
— ANI (@ANI) February 24, 2018
ಪೊಲೀಸರು ಕೂಡಲೇ ತನಿಖೆಯನ್ನು ಆರಂಭಿಸಿ ಸಿಸಿಟಿವಿ ಚಿತ್ರಿಕೆಯನ್ನು ಪರಿಶೀಲಿಸಿದ್ದಾರೆ. ಇದನ್ನು ಆಧರಿಸಿಕೊಂಡು ಪೊಲೀಸರು ಮಗುವಿನ ಅಪಹರಣ ನಡೆದ ಕೇವಲ ಆರು ತಾಸುಗಳ ಒಳಗೆ ಅಪಹರಣಕಾರನನ್ನು ಬಂಧಿಸಿದ್ದಾರೆ.
ಮಗವನ್ನು ಅಪಹರಿಸಿದ ಖದೀಮನನ್ನು 28 ವರ್ಷ ಪ್ರಾಯದ ಸಂದೀಪ್ ಪರಬ್ ಎಂದು ಗುರುತಿಸಲಾಗಿದೆ. ಮಗುವಿನ ಅಪಹರಣದ ಹಿಂದಿನ ಉದ್ದೇಶ ಏನೆಂಬುದನ್ನು ಆತ ಇನ್ನಷ್ಟೇ ತನಿಖಾಧಿಕಾರಿಗಳ ಮುಂದೆ ಬಾಯಿ ಬಿಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ
Delhi: 9 ವರ್ಷಗಳಲ್ಲೇ ಡಿಸೆಂಬರ್ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!
Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್ ಮನವಿ
ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ
Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
America: ಎಚ್-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್‌ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.