ನಾಲ್ವರ ಮೇಲೆ BMW ಕಾರು ಹರಿಸಿದ ಮಹಿಳೆ: ಅಪಘಾತಕ್ಕೆ ನಾಯಿಯೇ ಕಾರಣ ಎಂದು ಸಬೂಬು !
Team Udayavani, Aug 2, 2020, 10:00 AM IST
ನವದೆಹಲಿ: ನಾಲ್ವರ ಮೇಲೆ 29 ವರ್ಷದ ಮಹಿಳೆಯೊಬ್ಬರು ಬಿಎಂಡಬ್ಲ್ಯೂ ಕಾರು ಹರಿಸಿದ ಘಟನೆ ದಕ್ಷಿಣ ದೆಹಲಿಯಲ್ಲಿ ಜುಲೈ 31ರ ಶುಕ್ರವಾರ ರಾತ್ರಿ ನಡೆದಿದೆ.
ಕಾರು ಹರಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡಿದ್ದು, ಲಜ್ ಪತ್ ನಗರದ ಅಮರ್ ಕಾಲೋನಿಯಲ್ಲಿ ರಾತ್ರಿ ಸುಮಾರು 10 ಗಂಟೆಗೆ ಈ ಘಟನೆ ನಡೆದಿದೆ.
ಅಪಘಾತವಾದ ಕೂಡಲೇ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದು ಆಕೆಯನ್ನು ರೋಶ್ನಿ ಆರೋರ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಈಕೆ ಫ್ಯಾಷನ್ ಡಿಸೈನರ್ ಆಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಐಸ್ಕ್ರೀಂ ತಿನ್ನಲೆಂದು ಕಾರನ್ನು ನಿಲ್ಲಿಸಿದ್ದು, ಕಾರಿನಲ್ಲಿ ನನ್ನೊಂದಿಗೆ ಸಾಕು ನಾಯಿ ಕೂಡ ಇತ್ತು. ಅದು ಏಕಾಏಕಿ ನನ್ನ ಮೇಲೆ ಎಗರಿದ ಪರಿಣಾಮ ಗಾಬರಿಯಲ್ಲಿ ಬ್ರೇಕ್ ಪೆಡಲ್ ಬದಲು ಕಾರಿನ ಆ್ಯಕ್ಸಿಲೇಟರ್ ಒತ್ತಿದೆ. ಹೀಗಾಗಿ ಅಪಘಾತವಾಯಿತು ಎಂದು ಪೊಲೀಸರಿಗೆ ತಿಳಿಸಿದ್ದಾರೆ.
#roadaccident #delhi #delhicrime pic.twitter.com/wiFZMdBwJM
— Prateek Kumar (@prateekpress) August 1, 2020
ಅಪಘಾತದ ಸಂದರ್ಭದಲ್ಲಿ ಐಷರಾಮಿ ಕಾರು ಎದುರಿಗಿದ್ದ ಐಸ್ಕ್ರೀಂ ಗಾಡಿಗೆ ಜೋರಾಗಿ ಗುದ್ದಿದ್ದು, ಗಾಡಿಯು ಅನತಿ ದೂರದವರೆಗೆ ಸಾಗಿ ಬಳಿಕ ಪಲ್ಟಿ ಹೊಡೆದಿದೆ. ಐಸ್ಕ್ರೀಂ ಗಾಡಿಯ ಮಾಲೀಕ ಸೇರಿ ಅದರ ಸುತ್ತ ನಿಂತಿದ್ದ ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿದೆ.
ತಕ್ಷಣವೇ ಅರೋರಾ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಅವರು ಮದ್ಯಪಾನ ಮಾಡಿರಲಿಲ್ಲ ಎಂಬುದು ಖಚಿತವಾಗಿದೆ. ಹಾಗಾಗಿ ಅವರನ್ನು ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಆಗ್ನೇಯ ದೆಹಲಿಯ ಡಿಸಿಪಿ ಆರ್.ಪಿ. ಮೀನಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.