Maharashtra MLA: ಇಂಜಿನಿಯರ್ ಕಾಲರ್ ಹಿಡಿದು ಕಪಾಳಕ್ಕೆ ಬಾರಿಸಿದ ಶಾಸಕಿ; ವಿಡಿಯೋ ವೈರಲ್
Team Udayavani, Jun 21, 2023, 12:05 PM IST
ಮಹಾರಾಷ್ಟ್ರ: ಶಾಸಕಿಯೊಬ್ಬರು ಇಂಜಿನಿಯರ್ ನ ಕಪಾಳಕ್ಕೆ ಬಾರಿಸಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇತ್ತೀಚೆಗೆ ಮೀರಾ ಭಯಂದರ್ ಮುನ್ಸಿಪಲ್ ಕಾರ್ಪೊರೇಷನ್ ಯಾವುದೇ ಸೂಚನೆಯಿಲ್ಲದೆ ಮನೆಯೊಂದರಲ್ಲಿ ವಾಸಿಸುತ್ತಿದ್ದವರನ್ನು ಹೊರಹಾಕಿ ಕಟ್ಟಡವನ್ನು ನೆಲಸಮಗೊಳಿಸಲು ಬಂದಿದ್ದಾರೆ. ಇದರಿಂದ ಕುಟುಂಬದ ಮಹಿಳೆಯರು, ಮಕ್ಕಳು ಸೇರಿದಂತೆ ನಿವಾಸಿಗಳು ರಸ್ತೆಯಲ್ಲೇ ಪರದಾಡಬೇಕಾಗುವ ಸ್ಥಿತಿ ನಿರ್ಮಾಣವಾಗಿದ್ದು, ಈ ಕಷ್ಟವನ್ನು ಮಹಿಳೆಯೊಬ್ಬರು ಥಾಣೆ ಜಿಲ್ಲೆಯ ಮೀರಾ ಭಯಂದರ್‌ನ ಶಾಸಕಿ ಗೀತಾ ಜೈನ್ ಅವರ ಬಳಿ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಇಂಜಿನಿಯರ್ ಸೇರಿದಂತೆ ಅಧಿಕಾರಿಗೆ ಶಾಸಕಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಈ ವೇಳೆ ಇಂಜಿನಿಯರ್ ಅವರ ಕಾಲರ್ ಹಿಡಿದು ಆತನ ಕಪಾಳಕ್ಕೆ ಬಾರಿಸಿದ್ದಾರೆ.
ಈ ಬಗ್ಗೆ ಸ್ಥಳೀಯ ಸುದ್ದಿವಾಹಿನಿಯೊಂದರ ಜೊತೆ ಮಾತನಾಡಿದ ಗೀತಾ ಜೈನ್, ತಮ್ಮ ಮನೆ ಕೆಡವುತ್ತಿರುವಾಗ ಅಳುತ್ತಿದ್ದ ಮಹಿಳೆಯರನ್ನು ನೋಡಿ ಪೌರಾಡಳಿತದ ಅಧಿಕಾರಿಗಳು ನಗುತ್ತಿರುವುದನ್ನು ನೋಡಿ ನನಗೆ ಬೇಸರವಾಯಿತು. ಅವನಿಗೆ ಕಪಾಳಮೋಕ್ಷ ಮಾಡುವ ತನ್ನ ನಡೆಯನ್ನು ಸಹಜ ಪ್ರತಿಕ್ರಿಯೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಮುಸ್ಲಿಂ ಯುವತಿ ಜೊತೆ ಹಿಂದೂ ಯುವಕ ಮದುವೆ: ತಾಳಿ ಕಟ್ಟುವ ವೇಳೆ ವಧುವನ್ನು ಎಳೆದೊಯ್ದ ಪೊಲೀಸರು
ಜೂನಿಯರ್ ಸಿವಿಕ್ ಎಂಜಿನಿಯರ್‌ಗಳು ನೆಲಸಮ ಮಾಡಿದ ಮನೆಯ ಒಂದು ಭಾಗ ಮಾತ್ರ ಅಕ್ರಮವಾಗಿದೆ ಮತ್ತು ಅದರ ನಿವಾಸಿಗಳು ಅಕ್ರಮ ಭಾಗವನ್ನು ತೆಗೆದುಹಾಕುವುದಾಗಿ ಭರವಸೆ ನೀಡಿದ್ದಾರೆ. ಮಹಿಳೆಯರು ಮನೆ ತೆರವನ್ನು ವಿರೋಧಿಸುವಾಗ ಅಧಿಕಾರಿಗಳು ಅವರ ಕೂದಲನ್ನು ಎಳೆದಿದ್ದಾರೆ. ಇಬ್ಬರು ಇಂಜಿನಿಯರ್‌ಗಳು ಬಿಲ್ಡರ್‌ಗಳ ಸಹಕಾರದೊಂದಿಗೆ ಖಾಸಗಿ ಜಮೀನಿನಲ್ಲಿ ನೆಲಸಮ ಕಾರ್ಯವನ್ನು ನಡೆಸುತ್ತಿದ್ದಾರೆ ಎಂದು ಗೀತಾ ಜೈನ್ ಹೇಳಿದ್ದಾರೆ. ತನ್ನ ಕೃತ್ಯಕ್ಕೆ ವಿಷಾದಿಸುವುದಿಲ್ಲ ಮತ್ತು ಯಾವುದೇ ಶಿಕ್ಷೆಯನ್ನು ಎದುರಿಸಲು ಸಿದ್ಧ ಎಂದು ಅವರು ಹೇಳಿದ್ದಾರೆ.
“ಈ ವಿಷಯವನ್ನು ನಾನು ವಿಧಾನಸಭೆಯಲ್ಲಿ ಪ್ರಸ್ತಾಪಿಸುತ್ತೇನೆ. ಅವರು (ಕಪಾಳಮೋಕ್ಷ ಮಾಡಿದ ಎಂಜಿನಿಯರ್) ನನ್ನ ವಿರುದ್ಧ ಪ್ರಕರಣ ದಾಖಲಿಸಲಿ. ಅದನ್ನು ಎದುರಿಸಲು ನಾನು ಸಿದ್ಧನಿದ್ದೇನೆ. ಪೌರ ಅಧಿಕಾರಿಗಳು ಖಾಸಗಿ ಭೂಮಿಯಲ್ಲಿ ನಿರ್ಮಿಸಿದ ಕಟ್ಟಡಗಳನ್ನು ಕೆಡವುವುದನ್ನು ಹೇಗೆ ಸಹಿಸಿಕೊಳ್ಳುವುದು?” ಎಂದು ಶಾಸಕರು ಪ್ರಶ್ನಿಸಿದರು.
ಗೀತಾ ಜೈನ್ 2019 ರ ಅಸೆಂಬ್ಲಿ ಚುನಾವಣೆಯಲ್ಲಿ ಸ್ವತಂತ್ರವಾಗಿ ಗೆದ್ದರು ಆದರೆ ನಂತರ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾದ ನಂತರ ಶಿವಸೇನೆಗೆ ಬೆಂಬಲ ನೀಡಿದರು. ಆದರೆ, ಕಳೆದ ವರ್ಷ ಜೂನ್‌ನಲ್ಲಿ ಏಕನಾಥ್ ಶಿಂಧೆ ಬಂಡಾಯದ ನಂತರ ಗೀತಾ ಜೈನ್ ಈಗ ಭಾರತೀಯ ಜನತಾ ಪಕ್ಷದ ಪಾಳೆಯದಲ್ಲಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
MUST WATCH
ಹೊಸ ಸೇರ್ಪಡೆ
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.