![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Dec 22, 2022, 4:08 PM IST
ನವದೆಹಲಿ: ಜನವಸತಿ ಪ್ರದೇಶದಲ್ಲೇ ಯುವಕರ ತಂಡವೊಂದು ಯುವಕನನ್ನು ಥಳಿಸಿ ಜನರ ಎದುರೇ ಹರಿತವಾದ ಆಯುಧದಿಂದ ಇರಿದು ಕೊಲೆಗೈದ ಘಟನೆ ದೆಹಲಿಯ ಬದರ್‌ಪುರದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.
ಮೃತ ದುರ್ದೈವಿಯನ್ನು ಕೇಶವ್(30) ಎಂದು ಗುರುತಿಸಲಾಗಿದೆ.
ಘಟನೆಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಮೂವರು ಯುವಕರ ತಂಡ ಕೇಶವ್ ಬಳಿ ಯಾವುದೋ ವಿಚಾರವಾಗಿ ಮಾತು ಆರಂಭಿಸಿದ್ದಾರೆ ಬಳಿಕ ಮಾತಿಗೆ ಮಾತು ಬೆಳೆದು ಮೂವರು ಯುವಕರ ತಂಡ ಕೇಶವ್ ಮೇಲೆ ಹಲ್ಲೆ ನಡೆಸಿದ್ದಾರೆ ಈ ವೇಳೆ ಓರ್ವ ಯುವಕ ಚಾಕುವಿನಿಂದ ಇರಿದಿರುವುದು ಕಾಣಬಹುದು. ಆದರೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಯುತ್ತಿದ್ದರೆ ಸಾರ್ವಜನಿಕರು ಯಾರೂ ಹತ್ತಿರ ಹೋಗುವ ಸ್ಥಿತಿಯಲ್ಲಿರಲಿಲ್ಲ.
ಗಂಭೀರ ಗಾಯಗೊಂಡಿದ್ದ ಯುವಕನನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟೋತ್ತಿಗಾಗಲೇ ಯುವಕ ಮೃತಪಟ್ಟಿದ್ದ ಎಂದು ಆಸ್ಪತ್ರೆ ವೈದ್ಯರು ಹೇಳಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿಟಿವಿ ಆಧಾರದ ಮೇಲೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಹೇಳಿಕೆಯಂತೆ ಕಳೆದ ಒಂದು ವಾರದ ಹಿಂದೆ ಕೇಶವ್ ಜೊತೆ ಯುವಕರ ತಂಡ ಜಗಳಮಾಡಿಕೊಂಡಿದ್ದರು ಅದರ ಪ್ರತಿಯಾಗಿ ಯುವಕರು ಕೇಶವ್ ನನ್ನ ಚಾಕುವಿನಿಂದ ಇರಿದು ಕೊಲೆಗೈದಿದ್ದಾರೆ ಎಂದು ಹೇಳಿದ್ದಾರೆ.
ಮೃತ ಯುವಕ ಹಾಗೂ ಆರೋಪಿಗಳು ಕ್ರಿಮಿನಲ್ ಹಿನ್ನೆಲೆಯನ್ನು ಹೊಂದಿದವರು ಎಂದು ಹೇಳಲಾಗಿದೆ.
Caught On CCTV: Delhi Man Thrashed, Stabbed To Death, People Watch https://t.co/rw4zPd8B5C pic.twitter.com/jGC2T5a5A4
— NDTV (@ndtv) December 22, 2022
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.