TN ಸುಪ್ರೀಂನಲ್ಲಿ ಮತ್ತೆ ಕಾವೇರಿ ಕಿರಿಕ್‌: 5 ಸಾವಿರ ಕ್ಯುಸೆಕ್‌ ನೀರು ಬಿಡುಗಡೆಗೆ ಒತ್ತಾಯ

ಸೆ.6ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

Team Udayavani, Sep 1, 2023, 10:48 PM IST

Supreme Court ಮತ್ತೆ ಕಾವೇರಿ ಕಿರಿಕ್‌: 5 ಸಾವಿರ ಕ್ಯುಸೆಕ್‌ ನೀರು ಬಿಡುಗಡೆಗೆ ಒತ್ತಾಯ

ನವದೆಹಲಿ/ಬೆಂಗಳೂರು/ಮಂಡ್ಯ:ಕರ್ನಾಟಕದಿಂದ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್‌ ನೀರು ಬಿಡಬೇಕು ಎಂದು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಹೊರತಾಗಿಯೂ, ಮೊಂಡಾಟ ಮುಂದುವರಿಸಿರುವ ತಮಿಳುನಾಡು, ಸುಪ್ರೀಂಕೋರ್ಟ್‌ ಮುಂದೆಯೂ 24 ಸಾವಿರ ಕ್ಯೂಸೆಕ್‌ ನೀರಿಗಾಗಿ ಒತ್ತಾಯಿಸಿದೆ.

ಶುಕ್ರವಾರ ಕಾವೇರಿ ಪ್ರಕರಣ ಸಂಬಂಧ ವಿಚಾರಣೆ ನಡೆಯುವುದಿಲ್ಲ ಎಂದೇ ಭಾವಿಸಲಾಗಿತ್ತು. ಆದರೂ, ನ್ಯಾ. ಗವಾಯಿ ಅವರ ಪೀಠ, ಸಮಯ ಮಾಡಿಕೊಂಡು ವಿಚಾರಣೆ ನಡೆಸಿದರು. ಈ ವೇಳೆ ತಮಿಳುನಾಡು ಪರ ವಕೀಲರು, 24 ಸಾವಿರ ಕ್ಯೂಸೆಕ್‌ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸೂಚಿಸಬೇಕು ಎಂದು ಅರಿಕೆ ಮಾಡಿಕೊಂಡರು. ಆದರೆ, ಕರ್ನಾಟಕದ ಪರ ವಾದಿಸಿದ ಹಿರಿಯ ನ್ಯಾಯವಾದಿ ಶ್ಯಾಮ್‌ ದಿವಾನ್‌ ಅವರು, ಸದ್ಯದ ಮಟ್ಟಿಗೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಸಾಧ್ಯವೇ ಇಲ್ಲ ಎಂದರು.

ಅಲ್ಲದೆ, ಪ್ರಾಧಿಕಾರದ ಸೂಚನೆಯಂತೆ, ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್‌ ನೀರು ಹರಿಸಲಾಗುತ್ತಿದೆ ಎಂದೂ ಹೇಳಿದರು.

ಇದಲ್ಲದೆ, ಕಾವೇರಿ ನೀರು ನಿರ್ವಹಣಾ ಮಂಡಳಿ ಕೂಡ ತಮಿಳುನಾಡಿಗೆ ಆದೇಶದಂತೆ ನೀರು ಹರಿದು ಹೋಗುತ್ತಿದೆ ಎಂದು ನ್ಯಾಯಪೀಠಕ್ಕೆ ಹೇಳಿದೆ. ಇದರ ಜತೆಗೆ ನ್ಯಾಯಪೀಠಕ್ಕೆ ಸಲ್ಲಿಕೆ ಮಾಡಿದ ವರದಿಯ ಅಂಶಗಳನ್ನೂ ನ್ಯಾಯಪೀಠಕ್ಕೆ ಗಮನಕ್ಕೆ ತಂದಿತು. ಇದಾದ ಬಳಿಕ ಸೋಮವಾರ ವಿಸ್ತೃತವಾಗಿ ವಿಚಾರಣೆ ನಡೆಸುವುದಾಗಿ ಪೀಠ ಹೇಳಿ ಮುಂದೂಡಿತು.

2 ರಾಜ್ಯಗಳಿಗೂ ಅನುಕೂಲ:
ಈ ನಡುವೆ ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌,  ಉಭಯ ರಾಜ್ಯಗಳಿಗೆ ಮೇಕೆದಾಟು ಯೋಜನೆಯೊಂದೇ ಪರಿಹಾರವಾಗಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಪ್ರಾಧಿಕಾರದ ಮುಂದೆ ನಾವು ಪ್ರಸ್ತಾಪ ಮಾಡುತ್ತೇವೆ. ಈ ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

“ಮೇಕೆದಾಟು ಸಮಾನಾಂತರ ಜಲಾಶಯವಿದ್ದಿದ್ದರೆ ನಾವು ನೀರು ಶೇಖರಣೆ ಮಾಡಿಕೊಳ್ಳಬಹುದಾಗಿತ್ತು. ಈ ಆಣೆಕಟ್ಟಿನಿಂದ ನಾವು ನೀರು ಬಳಸಿಕೊಳ್ಳಲು ಆಗುವುದಿಲ್ಲ. ಸಂಕಷ್ಟದ ಸಮಯದಲ್ಲಿ ತಮಿಳುನಾಡಿಗೆ ನೀರು ಬಿಡಲು ಅನುಕೂಲವಾಗುತ್ತದೆ. ಈ ವಿಚಾರದ ಬಗ್ಗೆ ತಮಿಳುನಾಡಿಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸುತ್ತೇವೆ’ ಎಂದರು.

ಪ್ರಾಧಿಕಾರದ ಮುಂದೆ 24 ಸಾವಿರ ಕ್ಯೂಸೆಕ್‌ ನೀರು ಬಿಡಲು ತಮಿಳುನಾಡು ಪಟ್ಟು ಹಿಡಿದಿತ್ತು. ನಾವು 3 ಸಾವಿರ ಕ್ಯೂಸೆಕ್‌ ನೀರು ಬಿಡುವುದಾಗಿ ಹೇಳಿದೆವು. ಅಂತಿಮವಾಗಿ ಪ್ರಾಧಿಕಾರ 5 ಸಾವಿರ ಕ್ಯೂಸೆಕ್‌ ನೀರು ಬಿಡಲು ನಿರ್ದೇಶಿಸಿದೆ. ನಮ್ಮ ಆಣೆಕಟ್ಟುಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅಧ್ಯಯನ ಮಾಡಲಿ ಎಂದು ಮನವಿ ಮಾಡಿದ್ದೇವೆ. ನಮಗೆ ಕುಡಿಯುವುದಕ್ಕೆ ನೀರಿಲ್ಲ. ಹೀಗಾಗಿ ತಮಿಳುನಾಡಿನವರು ಸ್ವಲ್ಪ ಮೃದುಧೋರಣೆ ತಾಳಬೇಕು. ಕಳೆದ ವರ್ಷ ಅವರು ನಿಗದಿಗಿಂತ ಹೆಚ್ಚು ನೀರು ಬಳಕೆ ಮಾಡಿದ್ದರು. ಕಳೆದ ವರ್ಷ ಅವರು ಶೇ. 80 ರಷ್ಟು ಹೆಚ್ಚುವರು ನೀರು ಬಳಸಿದ್ದಾರೆ. ಅವರ ನೀರನ್ನು ಅವರು ಯಾವ ಕಾರಣಕ್ಕೆ ಬಳಸುತ್ತಾರೆ ಎಂದು ನಾವು ಪ್ರಶ್ನಿಸುವುದಿಲ್ಲ. ಸಂಕಷ್ಟದ ಸಮಯದಲ್ಲಿ ಅವರು ಸಮಯೋಚಿತವಾಗಿ ನೀರು ಬಳಸಬಹುದಿತ್ತು ಎಂದು ಅಭಿಪ್ರಾಯಪಟ್ಟರು.

ಬಿಜೆಪಿ ಹಾಗೂ ಜೆಡಿಎಸ್‌ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿ ರಾಜಕೀಯದಲ್ಲಿ ಅವರ ನಿರ್ಧಾರವನ್ನು ನಾವು ಪ್ರಶ್ನೆ ಮಾಡುವುದಿಲ್ಲ. ಅವರಿಗೆ ವಾಸ್ತವಾಂಶ ಗೊತ್ತಿದೆ. ಬೊಮ್ಮಾಯಿ ಅವರು ಜಲಸಂಪನ್ಮೂಲ ಸಚಿವರಾಗಿದ್ದರು. ಆದರೂ ಮಾತನಾಡುತ್ತಿದ್ದಾರೆ. ಅವರನ್ನು ಕರೆದು ಸಭೆ ಮಾಡಿ ಚರ್ಚೆ ಮಾಡಿದ್ದೇವೆ. ಸಭೆಯಲ್ಲಿ ಏನು ಚರ್ಚೆ ಮಾಡಿದ್ದೇವೆ ಎಂದು ಹೇಳುವುದಿಲ್ಲ. ನಾವಿಬ್ಬರೂ ಸೇರಿ ರಾಜ್ಯದ ಹಿತ ಕಾಯೋಣ. ಸರ್ವಪಕ್ಷ ನಿಯೋಗ ಭೇಟಿಗೆ ದಿನಾಂಕ ಕೇಳುತ್ತೇವೆ ಎಂದು ತಿಳಿಸಿದರು.

ಬಾರುಕೋಲು ಚಳವಳಿ:
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿದ್ದನ್ನು ಖಂಡಿಸಿ ಮಂಡ್ಯ ಜಿಲ್ಲೆಯಾದ್ಯಂತ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಸರ್ಕಾರವನ್ನು ಬಡಿದೆಬ್ಬಿಸುವ ನಿಟ್ಟಿನಲ್ಲಿ ಶ್ರೀರಂಗಪಟ್ಟಣದಲ್ಲಿ ರೈತಮುಖಂಡರು ಬಾರು ಕೋಲು ಚಳವಳಿ ನಡೆಸಿದರು. ಕಾವೇರಿ ನೀರಿನ ವಿಷಯದಲ್ಲಿ ತಮಿಳುನಾಡಿಗೆ ಇರುವ ಬದ್ದತೆ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಆರೋಪಿಸಿದರು. ಇದೇ ವೇಳೆ, ಕೆಆರ್‌ಎಸ್‌ನಲ್ಲಿಯೂ ರೈತರ ಅನಿರ್ದಿಷ್ಟಾವಧಿ ಪ್ರತಿಭಟನೆ ಶುಕ್ರವಾರ ನಾಲ್ಕನೇ ದಿನಕ್ಕೆ ಪ್ರವೇಶ ಪಡೆದಿದೆ. ಮೈಸೂರು ಮತ್ತು ಕೊಡಗು ಜಿಲ್ಲೆಯ ರೈತರು ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.