PIB ಮಹಾನಿರ್ದೇಶಕರಾಗಿ ಸಿಬಿಸಿ ಮುಖ್ಯಸ್ಥ ಮನೀಶ್ ದೇಸಾಯಿ ನೇಮಕ
Team Udayavani, Sep 1, 2023, 9:43 PM IST
ನವದೆಹಲಿ: ಸೆಂಟ್ರಲ್ ಬ್ಯೂರೋ ಆಫ್ ಕಮ್ಯೂನಿಕೇಶನ್ಸ್ (ಸಿಬಿಸಿ) ಮುಖ್ಯಸ್ಥ ಮನೀಷ್ ದೇಸಾಯಿ ಅವರನ್ನು ಪಿಐಬಿ (ಮಾಧ್ಯಮ ಮಾಹಿತಿ ಮಂಡಳಿ-ಪ್ರಸ್ ಇನ್‌ಫಾರ್ಮೇಶನ್ ಬ್ಯೂರೊ) ಮಹಾನಿರ್ದೇಶಕರಾಗಿ ನೇಮಿಸಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ತಿಳಿಸಿದೆ.
1989ರ ಬ್ಯಾಚ್‌ನ ಹಿರಿಯ ಭಾರತೀಯ ಮಾಹಿತಿ ಸೇವೆ ಅಧಿಕಾರಿಯಾಗಿರುವ ಮನೀಶ್ ದೇಸಾಯಿ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಲಿದ್ದಾರೆ. 2022ರಿಂದ ಪಿಐಬಿ ಪ್ರಧಾನ ಮಹಾನಿರ್ದೇಶಕರಾಗಿರುವ ರಾಜೇಶ್ ಮಲ್ಹೋತ್ರಾ ಅವರ ನಿವೃತ್ತಿ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ದೇಸಾಯಿ ಅವರನ್ನು ನೇಮಿಸಲಾಗಿದೆ.
ಈ ಹಿಂದೆ ದೇಸಾಯಿ ಅವರು ಸಿಬಿಸಿ ಜಾಹೀರಾತು ಮತ್ತು ಸಾರ್ವಜನಿಕ ಸಂಪರ್ಕ ವಿಭಾಗದ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ, ರಿಜಿಸ್ಟ್ರಾರ್ ಆಫ್ ನ್ಯೂಸ್‌ಪೇಪರ್ ಆಫ್ ಇಂಡಿಯಾ (ಆರ್‌ಎನ್‌ಐ) ಪ್ರಧಾನ ನಿರ್ದೇಶಕ, ಪಿಐಬಿ ಹೆಚ್ಚುವರಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿ ಅಪಾರ ಅನುಭವ ಹೊಂದಿದ್ದಾರೆ. ಅಲ್ಲದೇ ಆಕಾಶವಾಣಿ ಹಾಗೂ ಇಂಡಿಯನ್ ಇನ್ಸ್‌ಸ್ಟಿಟ್ಯೂಟ್ ಆಫ್ ಮಾಸ್ ಕಮ್ಯೂನಿಕೇಶನ್‌ನಲ್ಲಿ ಸಹ ಕರ್ತವ್ಯ ನಿರ್ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution: ಪ್ರಧಾನಿ ಸಂವಿಧಾನ ಓದಿಲ್ಲ, ಇದಕ್ಕೆ ನಾನು ಗ್ಯಾರಂಟಿ: ರಾಹುಲ್
Maha Election: ರಜಾಕಾರರ ಹಿಂಸೆಗೆ ಖರ್ಗೆ ತಾಯಿ, ಸಹೋದರಿ ಬಲಿ: ಯೋಗಿ ತಿರುಗೇಟು
Bhagava: ಕೇಸರಿ ಎಂದರೆ ಭಗವಂತನ ಬಣ್ಣ : ಖರ್ಗೆ ವಿರುದ್ಧ ರಾಮಭದ್ರಾಚಾರ್ಯ ವಾಗ್ಧಾಳಿ
Mumbai: ಬಿಜೆಪಿಯನ್ನು ನಾಯಿಗೆ ಹೋಲಿಸಿದ ಕೈ ನಾಯಕ ನಾನಾ ಪಟೋಲೆ: ಟೀಕೆ
Waqf issue; ಎರ್ನಾಕುಳಂನಲ್ಲಿ 400 ಎಕ್ರೆ ಜಮೀನು ಮೇಲೆ ವಕ್ಫ್ ಮಂಡಳಿ ಕಣ್ಣು: ಆರೋಪ
MUST WATCH
ಹೊಸ ಸೇರ್ಪಡೆ
Constitution: ಪ್ರಧಾನಿ ಸಂವಿಧಾನ ಓದಿಲ್ಲ, ಇದಕ್ಕೆ ನಾನು ಗ್ಯಾರಂಟಿ: ರಾಹುಲ್
Kasaragodu: ಆಸ್ತಿ ವಿವಾದ: ಅಣ್ಣನ ಕೊಲೆ, ಇಬ್ಬರಿಗೆ ಇರಿತ; ತಮ್ಮನ ಸೆರೆ
Congress Govt.,: ಕಾಮಗಾರಿಯಲ್ಲಿ ಮುಸ್ಲಿಂ ಮೀಸಲು: ಬಿಜೆಪಿ
Rain: ಇಂದಿನಿಂದ 3 ದಿನ ರಾಜ್ಯದ ವಿವಿಧೆಡೆ ಮಳೆ ಬೀಳುವ ಸಾಧ್ಯತೆ
Maha Election: ರಜಾಕಾರರ ಹಿಂಸೆಗೆ ಖರ್ಗೆ ತಾಯಿ, ಸಹೋದರಿ ಬಲಿ: ಯೋಗಿ ತಿರುಗೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.