ಸಿಬಿಐ ಸಾಫ್ಟ್ ವೇರ್ ಪ್ರೋಗ್ರಾಮರ್ ವಿರುದ್ಧ ಅಕ್ರಮ ಸಂಪತ್ತಿನ ಕೇಸು
Team Udayavani, May 17, 2018, 5:04 PM IST
ಹೊಸದಿಲ್ಲಿ : ತತ್ಕಾಲ್ ರೈಲ್ವೆ ಟಿಕೆಟ್ ರಿಸರ್ವೇಶನ್ ವ್ಯವಸ್ಥೆಯನ್ನು ಪ್ರವೇಶಿಸುವುದಕ್ಕೆ ಅಕ್ರಮ ಸಾಫ್ಟ್ ವೇರ್ ರೂಪಿಸಿ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿದ್ದ ಸಿಬಿಐ ಪ್ರಧಾನ ಕಾರ್ಯಾಲಯದಲ್ಲಿ ಕೆಲಸ ಮಾಡಿಕೊಂಡಿದ್ದ ಸಹಾಯಕ ಪ್ರೋಗ್ರಾಮರ್ ಅಜಯ್ ಗರ್ಗ್ ವಿರುದ್ಧ ಇದೀಗ ಘೋಷಿತ ಆದಾಯಕಕ್ಕಿಂತ 96.09 ಲಕ್ಷ ರೂ. ಹೆಚ್ಚು ಸಂಪತ್ತನ್ನು ಕಲೆ ಹಾಕಿರುವ ಸಂಬಂಧ ಕೇಸು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಜಯ್ ಗರ್ಗ್‌ನನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಂಧಿಸಲಾಗಿತ್ತು. ಆತ ರೈಲ್ವೇ ಟಿಕೆಟ್ ಬುಕ್ಕಿಂಗ್ ಸಾಫ್ಟ್ ವೇರನ್ನು ಆಕ್ರಮವಾಗಿ ಕೋಡಿಂಗ್ ಮಾಡಿ ಮಾರಾಟ ಮಾಡಿ 2011ರಿಂದ 2017ರ ವರೆಗಿನ ಆರು ವರ್ಷಗಳ ತನ್ನ ಕಾರ್ಯಾವಧಿಯಲ್ಲಿ 1.46 ಕೋಟಿ ರೂ. ಅಕ್ರಮ ಸಂಪತ್ತನ್ನು ಕಲೆ ಹಾಕಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಜಯ್ ಗರ್ಗ್ 2007-11ರ ಅವಧಿಯಲ್ಲಿ ಇಂಡಿಯನ್ ರೈಲ್ವೆ ಕೇಟರಿಂಗ್ ಮತ್ತು ಟೂರಿಸಂ ಕಾರ್ಪೊರೇಶನ್ ಲಿಮಿಟೆಡ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.