ಸಿಬಿಐಯಲ್ಲಿ ಭಾರೀ ವರ್ಗಾವಣೆ
Team Udayavani, Oct 2, 2019, 5:00 AM IST
ಬೇರೆ ಬೇರೆ ವಿಭಾಗಗಳಲ್ಲಿ ಕೆಲಸ ಮಾಡುತ್ತಿದ್ದ 200 ಮಂದಿ ಎತ್ತಂಗಡಿ
ಹತ್ತು ವರ್ಷಗಳಿಂದ ಒಂದೇ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು
ಹೊಸದಿಲ್ಲಿ: ಕೇಂದ್ರ ತನಿಖಾ ಸಂಸ್ಥೆ (ಸಿಬಿಐ)ಯಲ್ಲಿ ಹತ್ತು ವರ್ಷಗಳಿಂದ ಒಂದೇ ಹಂತದಲ್ಲಿ ಕೆಲಸ ಮಾಡಿಕೊಂಡಿದ್ದ 200 ಮಂದಿಯನ್ನು ವರ್ಗಾವಣೆ ಮಾಡಲಾಗಿದೆ. ವಿಶೇಷವಾಗಿ ಕೆಳ ಹಂತದ ಕ್ಲರ್ಕ್ (ಎಲ್‌ಡಿಸಿ), ಉನ್ನತ ದರ್ಜೆ ಕ್ಲರ್ಕ್ (ಯುಡಿಸಿ)ಗಳನ್ನು, ಅಪರಾಧ ಪ್ರಕರಣಗಳ ತನಿಖೆಗಳಲ್ಲಿ ನೆರ ವಾಗುವ ಸಹಾಯಕ ಸಿಬಂದಿ, ಕಚೇರಿ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ.
ಕೇಂದ್ರ ತನಿಖಾ ಸಂಸ್ಥೆಯ ವಕ್ತಾರ ನಿತಿನ್ ವಕನ್ಕರ್ ಈ ಮಾಹಿತಿಯನ್ನು ಖಚಿತಪಡಿಸಿದ್ದಾರೆ. ಹತ್ತು ವರ್ಷಗಳಿಂದ ಒಂದೇ ಘಟಕದಲ್ಲಿ ಕೆಲಸ ಮಾಡುತ್ತಿದ್ದವರನ್ನು ಬೇರೆ ಘಟಕಕ್ಕೆ ವರ್ಗಾವಣೆ ಮಾಡಲಾಗಿದೆ. ದಿಲ್ಲಿ, ಮುಂಬಯಿ, ಚೆನ್ನೈ, ಕೋಲ್ಕತಾ, ಲಕ್ನೋ, ಭುವನೇಶ್ವರ, ರಾಂಚಿ, ಬೆಂಗಳೂರು ಮತ್ತು ಚಂಡೀಗಢ ಕಚೇರಿಗಳಲ್ಲಿ ಕೆಲಸ ಮಾಡುವರನ್ನು ವರ್ಗಾಯಿಸಲಾಗಿದೆ ಎಂದು ಹೇಳಿದ್ದಾರೆ.
ಹೆಸರು ಬಹಿರಂಗಪಡಿಸಲಿಚ್ಛಿಸದ ಅಧಿಕಾರಿ “ದ ಹಿಂದುಸ್ತಾನ್ ಟೈಮ್ಸ್’ ಪತ್ರಿಕೆಗೆ ನೀಡಿದ ಮಾಹಿತಿ ಪ್ರಕಾರ ಹಲವು ಘಟಕಗಳಲ್ಲಿ ಬಹಳ ಸಮಯದಿಂದ ಕೆಲಸ ಮಾಡುತ್ತಿರುವ ಕಾರಣದಿಂದಾಗಿ ಅವರು ನಿರ್ವಹಿಸುವ ಕರ್ತವ್ಯದ ಶೈಲಿ ಸಂಸ್ಥೆಯ ಶಿಸ್ತಿಗೆ ಧಕ್ಕೆ ತರುತ್ತಿತ್ತು ಎಂದು ಸಿಬಿಐ ನಿರ್ದೇಶಕ ರಿಶಿ ಕುಮಾರ್ ಶುಕ್ಲಾ ಮತ್ತು ಇತರ ಹಿರಿಯ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದರು. ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಇದೇ ಮೊದಲು
ಇತ್ತೀಚಿನ ವರ್ಷಗಳಲ್ಲಿ ಸಿಬಿಐ ಈ ಪ್ರಮಾಣದಲ್ಲಿ ಉದ್ಯೋಗಿಗಳನ್ನು ವರ್ಗಾವಣೆ ಮಾಡಿರಲಿಲ್ಲ. ಸಿಬಿಐನ ಆಡಳಿತ ವಿಭಾಗದ ಜಂಟಿ ನಿರ್ದೇಶಕ ಎ.ಕೆ.ಭಟ್ನಾಗರ್ ಆ.21ರಂದು ಆಯಾ ಘಟಕಗಳ ಮುಖ್ಯಸ್ಥರಿಗೆ ಬರೆದಿದ್ದ ಪತ್ರದಲ್ಲಿ ಹಲವು ವರ್ಷಗಳಿಂದ ಒಂದೇ ಘಟಕದಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳ ಹೆಸರು ಗುರುತಿಸುವಂತೆ ಸೂಚಿಸಿದ್ದರು. ಇದರ ಜತೆಗೆ ಆಯಾ ಘಟಕಗಳಲ್ಲಿಯೇ ಉಳಿಸಿಕೊಳ್ಳಬಹುದಾದವರ ಹೆಸರುಗಳನ್ನು ಖಚಿತಪಡಿಸುವಂತೆ ಕೋರಿಕೆ ಸಲ್ಲಿಸಿದ್ದರು.
ಸೆ.20ರಂದು ಸುಮಾರು 200 ಸಿಬಂದಿಯ ಹೆಸರುಗಳನ್ನು ಆಯಾ ಘಟಕಗಳ ಮುಖ್ಯಸ್ಥರು ಕೇಂದ್ರ ಕಚೇರಿಗೆ ರವಾನಿಸಿದ್ದರು.
ಇದೇ ವೇಳೆ ಸೆ.23ರಂದು ಸಿಬಿಐನ 16 ಮಂದಿ ಸಬ್-ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ ಇದು ಆಡಳಿತಾತ್ಮಕ ಪ್ರಕ್ರಿಯೆಯ ಭಾಗವಾಗಿರಲಿಲ್ಲ ಎಂದು ಆಅಧಿಕಾರಿ ಹೇಳಿದ್ದಾರೆ.
ಸಂಸ್ಥೆಯ ಹಿತದೃಷ್ಟಿಯಿಂದ ಕ್ರಮ
ಭ್ರಷ್ಟಾಚಾರ ವಿರೋಧಿ ವಿಭಾಗ, ಜಾಗೃತ ವಿಭಾಗ, ವಿಶೇಷ ಅಪರಾಧಗಳು, ಆರ್ಥಿಕ ಅಪರಾಧಗಳು ಮತ್ತು ನೀತಿ ನಿರೂಪಣೆ ವಿಭಾಗಗಳಲ್ಲಿ ಹತ್ತು ವರ್ಷಗಳಿಂದ ಹೆಚ್ಚಿನ ಕಾಲ ಕೆಲಸ ಮಾಡುತ್ತಿದ್ದವರ ಬಳಿ ಪ್ರಕರಣಗಳಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿ ಇರುವ ಸಾಧ್ಯತೆ ಇದೆ. ಹೀಗಾಗಿ ಸಿಬಿಐ ಸಂಸ್ಥೆಯ ಹಿತದೃಷ್ಟಿಯಿಂದ ವರ್ಗಾವಣೆ ಅಗತ್ಯವೆಂದು ನಿರ್ಣಯಿಸಿ, ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.