ಸಿಬಿಎಸ್‌ಇ, ಐಸಿಎಸ್‌ಇ ಪರೀಕ್ಷೆ ನಿರ್ಧಾರ ಇಂದು
Team Udayavani, Jun 24, 2020, 8:06 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಸಿಬಿಎಸ್‌ಇ ಮತ್ತು ಐಸಿಎಸ್‌ಇ ಪಠ್ಯ ಕ್ರಮದ 10, 12ನೇ ತರಗತಿಗಳ ಬಾಕಿ ಉಳಿದ ಪರೀಕ್ಷೆ ನಡೆಸಬೇಕೇ ಬೇಡವೇ ಎಂಬ ಬಗ್ಗೆ ಸ್ಪಷ್ಟ ತೀರ್ಮಾನ ಬುಧವಾರ ಪ್ರಕಟವಾಗುವ ಸಾಧ್ಯತೆ ಇದೆ. ಮಂಗಳವಾರ ಸುಪ್ರೀಂಕೋರ್ಟ್‌ನಲ್ಲಿ ಈ ಬಗ್ಗೆ ಪ್ರತ್ಯೇಕವಾಗಿ ಅರ್ಜಿಗಳ ವಿಚಾರಣೆ ನಡೆದವು. ಎರಡೂ ಅಂಶಗಳ ವಿಚಾರಣೆ ಜೂ.25ರಂದು ನಡೆಯಲಿದೆ.
ವೇಳಾಪಟ್ಟಿ ಪ್ರಕಾರ ಸಿಬಿ ಎಸ್‌ಇ ಪಠ್ಯಕ್ರಮದ ಬಾಕಿ ಉಳಿದ ವಿಷಯಗಳ ಪರೀಕ್ಷೆ ಜು.1-15ರ ವರೆಗೆ ನಿಗದಿಯಾಗಿದೆ. ನ್ಯಾ.ಎ.ಎಂ.ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠದ ಮುಂದೆ ನಡೆದ ವಿಚಾರಣೆಯಲ್ಲಿ ಕೇಂದ್ರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ “ವಿದ್ಯಾರ್ಥಿಗಳು ಮತ್ತು ಪೋಷಕರ ಆತಂಕವನ್ನು ಅರ್ಥ ಮಾಡಿಕೊಳ್ಳಲಾಗಿದೆ. ಪರೀಕ್ಷೆ ನಡೆಸುವ ಬಗ್ಗೆ ಶೀಘ್ರವೇ ತೀರ್ಮಾನಿಸಲಾಗುತ್ತದೆ. ಹೀಗಾಗಿ, ವಿಚಾರಣೆಯನ್ನು ಮುಂದೂಡಬೇಕು’ ಎಂದು ಮನವಿ ಮಾಡಿದರು.
ಹೀಗಾಗಿ, ನ್ಯಾಯಪೀಠ ಜೂ.25ಕ್ಕೆ ವಿಚಾರಣೆ ಮುಂದೂಡಿತು. ಅದಕ್ಕೆ ಪೂರಕವಾಗಿ ಸಿಬಿಎಸ್‌ಇ ಆಡಳಿತ ಮಂಡಳಿ ಬುಧವಾರ ಸಭೆ ಸೇರಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಇದಕ್ಕಿಂತ ಮೊದಲು ಐಸಿಎಸ್‌ಇ ಪಠ್ಯಕ್ರಮದ ಪರೀಕ್ಷೆ ಬಗ್ಗೆ ನಡೆದ ವಿಚಾರಣೆ ವೇಳೆ, ಮಂಡಳಿ ಪರ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಇದೇ ವಿಚಾರಕ್ಕೆ ಸಂಬಂಧಿಸಿದ ವಿಚಾರಣೆ ಗುರುವಾರ ನಡೆಯಲಿದೆ ಎಂದರು. ಅದಕ್ಕೆ ಉತ್ತರಿಸಿದ ನ್ಯಾಯಪೀಠ ಪರೀಕ್ಷೆ ನಡೆಯುವ ಬಗ್ಗೆ ಮಂಡಳಿಯೇ ತೀರ್ಮಾನಿಸಿ ನಿರ್ಧಾರ ಕೈಗೊಳ್ಳಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.