ಕೋವಿಡ್ 19 : ದ್ವಿತೀಯ ಪಿಯುಸಿ ಪರೀಕ್ಷೆಗಳು ರದ್ದು : ಕೇಂದ್ರ ಸರ್ಕಾರ
Team Udayavani, Jun 1, 2021, 8:36 PM IST
ಪ್ರಾತಿನಿಧಿಕ ಚಿತ್ರ
ನವ ದೆಹಲಿ : ದೇಶದಲ್ಲಿ ಕೋವಿಡ 19 ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದರೂ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಈ ಸಾಲಿನ ಸಿಬಿ ಎಸ್ ಇ 1 ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ.
ಕಳೆದ ವರ್ಷದಂತೆ ಕೆಲವು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಇಚ್ಛಿಸಿದರೆ, ಸಿಬಿಎಸ್‌ಇ ಅವರಿಗೆ ಪರೀಕ್ಷೆಗೆ ಅವಕಾಶ ಕಲ್ಪಿಸುತ್ತದೆ. ಆದರೆ, ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ಬಳಿಕ ಪರೀಕ್ಷೆ ನಡೆಸುವುದು ಸಾಧ್ಯವಾಗಲಿದೆ ಎಂದು ಸರ್ಕಾರ ತಿಳಿಸಿದೆ.
ಇದನ್ನೂ ಓದಿ : ಮೀನುಗಾರರು, ನೇಕಾರರು, ಸಣ್ಣ ಉದ್ಯೋಗಿಗಳಿಗೆ ಪರಿಹಾರ ಒದಗಿಸಿ : ಸಿಎಂಗೆ ಮೆಂಡನ್ ಮನವಿ
ಕೋವಿಡ್ ಗಂಭೀರ ಸ್ಥಿತಿಯ ನಡುವೆ ಪರೀಕ್ಷೆ ನಡೆಸುವ ವಿಚಾರವಾಗಿ ಪರ ವಿರೋಧ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಂದು(ಮಂಗಳವಾರ, ಜೂನ್ 1) ತಜ್ಞರು ಹಾಗೂ ಅಧಿಕಾರಗಳ ಸಭೆ ನಡೆಸಲಾಯಿತು.
ಉನ್ನತ ಅಧಿಕಾರಿಗಳು ಹಾಗೂ ಶಿಕ್ಷಣ ತಜ್ಞರು ಇದ್ದ ಸಭೆಯಲ್ಲಿ ಪರೀಕ್ಷೆ ಬೇಕೋ ಬೇಡವೋ ಎನ್ನುವುದರ ಬಗ್ಗೆ ಚರ್ಚೆ ನಡೆಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಪಡಿಸುವ ನಿರ್ಧಾರಕ್ಕೆ ಬಂದಿದೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಭಾರತ ಸರ್ಕಾರವು ದ್ವಿತೀಯ ಪಿಯುಸಿಯ ಸಿಬಿಎಸ್‌ಇ ಬೋರ್ಡ್ ಪರೀಕ್ಷೆಗಳನ್ನು ರದ್ದು ಪಡಿಸಲು ನಿರ್ಧರಿಸಿದೆ. ಸಾಕಷ್ಟು ಸಲಹೆಗಳನ್ನು ಪಡೆದ ಬಳಿಕ ನಾವು ವಿದ್ಯಾರ್ಥಿ ಸ್ನೇಹಿ ತೀರ್ಮಾನವನ್ನು ಕೈಗೊಂಡಿದ್ದೇವೆ. ನಮ್ಮ ಯುವ ಸಮೂಹದ ಭವಿಷ್ಯ ಹಾಗೂ ಆರೋಗ್ಯವನ್ನು ಕಾಪಾಡುವಂತಹ ನಿರ್ಧಾರ ಇದಾಗಿದೆ’ ಎಂದು ಅವರು ಬರೆದುಕೊಂಡಿದ್ದಾರೆ.
Government of India has decided to cancel the Class XII CBSE Board Exams. After extensive consultations, we have taken a decision that is student-friendly, one that safeguards the health as well as future of our youth. https://t.co/vzl6ahY1O2
— Narendra Modi (@narendramodi) June 1, 2021
ಇದನ್ನೂ ಓದಿ : ಮೂರನೇ ಅಲೆ ತಡೆಗೆ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸಾ ವಿಭಾಗ ಅಭಿವೃದ್ಧಿ: ಸುಧಾಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.