ಸಿ.ಬಿ.ಎಸ್.ಇ. ಪ್ರಶ್ನೆ ಪತ್ರಿಕೆ ಸೋರಿಕೆ ತನಿಖೆಗೆ ಎಸ್.ಐ.ಟಿ.
Team Udayavani, Mar 30, 2018, 5:30 AM IST
ಹೊಸದಿಲ್ಲಿ: ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಯ (ಸಿ.ಬಿ.ಎಸ್.ಇ.) ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಮಾ.23ರಂದೇ ಮಾಹಿತಿ ಸಿಕ್ಕಿತ್ತು ಎಂಬ ಅಂಶ ಬಹಿರಂಗವಾಗಿದೆ. 12ನೇ ತರಗತಿಯ ಅರ್ಥಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಅಂಶದ ಬಗ್ಗೆ ಕೈಬರಹದಲ್ಲಿ ಬರೆಯಲಾಗಿರುವ ನಾಲ್ಕು ಪುಟಗಳ ಉತ್ತರ ಸಹಿತ ಪತ್ರವೊಂದು ಮಂಡಳಿಗೆ ತಲುಪಿತ್ತು. ಅದನ್ನು ಸಿಬಿಎಸ್‌ಇ ಪೊಲೀಸರಿಗೆ ಸಲ್ಲಿಸಿರುವ ದೂರಿನಲ್ಲಿ ಪ್ರಸ್ತಾಪಿಸಿದೆ. ಮಾ.23ರಂದು ಅದು ತಲುಪಿತ್ತು ಎಂದು ಮಂಡಳಿ ಹೇಳಿದೆ.
25 ಮಂದಿಯ ವಿಚಾರಣೆ: ಇದೇ ವೇಳೆ, ತರಗತಿಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ನವದಿಲ್ಲಿ ಪೊಲೀಸರು ಕೋಚಿಂಗ್ ಸೆಂಟರ್ ಮುಖ್ಯಸ್ಥ ಸೇರಿದಂತೆ 25 ಮಂದಿಯನ್ನು ವಿಚಾರಣೆ ನಡೆಸಿದ್ದಾರೆ. ಜತೆಗೆ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಇದೇ ವೇಳೆ ಸಿಬಿಎಸ್.ಇ ಅಧಿಕಾರಿಗಳು ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದ ಬಗ್ಗೆ ಸುಳಿವು ಇದುವರೆಗೆ ಸಿಕ್ಕಿಲ್ಲ ಎಂದಿದ್ದಾರೆ ಪೊಲೀಸರು.
ಪೊಲೀಸರು ಗುರುವಾರ 18 ವಿದ್ಯಾರ್ಥಿಗಳು, ಐವರು ಬೋಧಕರು ಸೇರಿ 25 ಮಂದಿಯನ್ನು ವಿಚಾರಣೆ ನಡೆಸಿದ್ದಾರೆ. ದಿಲ್ಲಿ ವಿವಿಯಲ್ಲಿ ಪದವಿ ವಿದ್ಯಾರ್ಥಿಗೆ ಕೋಚಿಂಗ್ ಸೆಂಟರ್ ಇದ್ದು, ಅದರ ಮುಖ್ಯಸ್ಥನೇ ಗಣಿತ ಮತ್ತು ಅರ್ಥಶಾಸ್ತ್ರ ಹೇಳಿಕೊಡುತ್ತಿದ್ದ. ಈತನನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಶ್ನೆಪತ್ರಿಕೆಗಳನ್ನು ಯಾವ ರೀತಿ ಕಳುಹಿಸಲಾಗುತ್ತಿತ್ತು ಎಂಬ ಬಗ್ಗೆ ಮಾಹಿತಿ ಕೊಡುವಂತೆ ಪೊಲೀಸರು ಸಿಬಿಎಸ್‌ಇಗೆ ಮನವಿ ಮಾಡಿಕೊಂಡಿದ್ದಾರೆ.
ಜಾವಡೇಕರ್ ವಜಾ ಮಾಡಿ: ಪ್ರಕರಣದ ಹಿನ್ನೆಲೆಯಲ್ಲಿ ಸಿಬಿಎಸ್‌ಇ ಅಧ್ಯಕ್ಷೆಯನ್ನು ಹಾಗೂ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ರನ್ನು ವಜಾ ಮಾಡಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಒತ್ತಾಯಿಸಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸರಕಾರದ ಅವಧಿಯಲ್ಲಿ ‘ಪರೀಕ್ಷಾ ಮಾಫಿಯಾ’ಕ್ಕೆ ಉತ್ತೇಜನ ಸಿಗುತ್ತಿದೆ ಎಂದು ಅವರು ದೂರಿದ್ದಾರೆ. ‘ಚೌಕಿದಾರ ದುರ್ಬಲರಾಗಿದ್ದಾರೆ. ಹೀಗಾಗಿ ಹೆಚ್ಚಿನ ಪ್ರಮಾಣದಲ್ಲಿ ಸೋರಿಕೆಯಾಗುತ್ತಿದೆ’ ಎಂದು ಪ್ರಧಾನಿ ಮೋದಿಯವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.
ಪ್ರತಿಭಟನೆ: ಮರು ಪರೀಕ್ಷೆ ನಡೆಸುವ ಸಿಬಿಎಸ್.ಇ ನಿರ್ಧಾರ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಜಂತರ್‌ಮಂತರ್‌ನಲ್ಲಿ ಫಲಕಗಳನ್ನು ಹಿಡಿದಿದ್ದ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಏ.1ರಂದು ಹೊಸ ದಿನಾಂಕ?
ಮರುಪರೀಕ್ಷೆ ದಿನಾಂಕಗಳನ್ನು ಸಿಬಿಎಸ್.ಇ ಸೋಮವಾರ ಅಥವಾ ಮಂಗಳವಾರ ಪ್ರಕಟ ಮಾಡಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ. ಇದರ ಜತೆಗೆ ಕೆಲವೊಂದು ಹೊಸ ಕ್ರಮಗಳನ್ನೂ ಘೋಷಣೆ ಮಾಡಲಿದೆ ಎಂದು ಹೇಳಿದ್ದಾರೆ. ಈ ಘಟನೆ ನಿಜಕ್ಕೂ ದುರದೃಷ್ಟಕರ. ವಿದ್ಯಾರ್ಥಿಗಳು, ಹೆತ್ತವರ ಆತಂಕ ತಮಗೆ ಅರ್ಥವಾಗುತ್ತದೆ ಎಂದು ಜಾವಡೇಕರ್ ಹೇಳಿದ್ದಾರೆ.
ಚೌಕೀದಾರ ದುರ್ಬಲ: ರಾಹುಲ್
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ಟ್ವೀಟ್ ಮಾಡಿದ್ದು, ಸಿಬಿಎಸ್‌ಇ ಪ್ರಶ್ನೆ ಪತ್ರಿಕೆ ಸೋರಿಕೆ ಹಲವು ಪ್ರಕರಣಗಳಿಗೆ ಸೇರ್ಪಡೆಯಾಗಿದೆ. ಆದರೆ ಚೌಕಿದಾರ (ಪ್ರಧಾನಿ ನರೇಂದ್ರ ಮೋದಿ) ದುರ್ಬಲರಾಗಿದ್ದಾರೆ ಎಂದು ಛೇಡಿಸಿದ್ದಾರೆ. ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಅವರು ಟ್ವೀಟ್ ಮಾಡಿದ್ದಾರೆ. ಆದರೆ ರಾಹುಲ್ ಆರೋಪವನ್ನು ಬಿಜೆಪಿ ತಿರಸ್ಕರಿಸಿದ್ದು, ‘ರಾಹುಲ್ ಗಾಂಧಿ ಯುಪಿಎ ಕಾಲದ ಹಗರಣಗಳನ್ನು ನೆನಪಿಸಿಕೊಳ್ಳುತ್ತಿದ್ದಾರೆ’ ಎಂದು ಹೇಳಿದೆ.
– 18 ವಿದ್ಯಾರ್ಥಿಗಳನ್ನೂ ಪ್ರಶ್ನಿಸಿದ ಪೊಲೀಸರು
– ದಿಲ್ಲಿಯ ಪದವಿ ವಿದ್ಯಾರ್ಥಿ ನೇತೃತ್ವದ ಕೋಚಿಂಗ್ ಸೆಂಟರ್
ಮಂಡಳಿ ಮುಖ್ಯಸ್ಥೆ ಹಾಗೂ ಸಚಿವ ಜಾವಡೇಕರ್ ವಜಾಕ್ಕೆ ಕಾಂಗ್ರೆಸ್ ಒತ್ತಾಯ
– ಪ್ರಧಾನಿ ಮೋದಿ ಸರಕಾರದ ಅವಧಿಯಲ್ಲಿ ‘ಪರೀಕ್ಷಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.