ಬಾಡಿಗೆ ತಾಯ್ತನ ವಿಧೇಯಕಕ್ಕೆ ಅಸ್ತು
Team Udayavani, Feb 27, 2020, 1:19 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಬಾಡಿಗೆ ತಾಯಿಯಾಗಲು ಇಚ್ಛಿಸುವ ಯಾವುದೇ ಮಹಿಳೆಗೂ ಅಂಥ ಅವಕಾಶ ವನ್ನು ಕಲ್ಪಿಸುವ ಮತ್ತು ವಿಧವೆಯರು ಹಾಗೂ ವಿಚ್ಛೇದಿತ ಮಹಿಳೆಯರು ಕೂಡ ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಪಡೆಯಲು ಅವಕಾಶ ನೀಡುವಂಥ ಬಾಡಿಗೆ ತಾಯ್ತನ ವಿಧೇಯಕ 2020ಕ್ಕೆ ಕೇಂದ್ರ ಸಂಪುಟದ ಒಪ್ಪಿಗೆ ಸಿಕ್ಕಿದೆ.
ಬುಧವಾರ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಈ ವಿಧೇಯಕ ಅಂಗೀಕಾರವಾಗಿದೆ. ರಾಜ್ಯ ಸಭೆಯ ಆಯ್ಕೆ ಸಮಿತಿ ಶಿಫಾರಸು ಮಾಡಿರುವ ಎಲ್ಲ ಅಂಶಗಳನ್ನೂ ಈ ವಿಧೇಯಕ ಒಳಗೊಂಡಿದೆ. ಶಿಫಾರಸಿನಂತೆಯೇ, ವಾಣಿಜ್ಯಿಕ ಬಾಡಿಗೆ ತಾಯ್ತನಕ್ಕೆ ನಿಷೇಧ ಹೇರಲಾಗಿದೆ ಎಂದು ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.
ಭಾರತೀಯ ದಂಪತಿಗಳು (ಪತಿ-ಪತ್ನಿ ಇಬ್ಬರೂ ಭಾರತ ಮೂಲದವರಾಗಿದ್ದರೆ) ದೇಶದಲ್ಲಿ ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ಪಡೆಯಬಹುದು ಎಂದೂ ವಿಧೇಯಕದಲ್ಲಿದೆ. ಇದೇ ವೇಳೆ, 1,480 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ತಾಂತ್ರಿಕ ಜವಳಿ ಮಿಷನ್ ರಚನೆಗೂ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ. ನಾಲ್ಕು ವರ್ಷಗಳೊಳಗಾಗಿ ಇದು ಜಾರಿಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.