ಆಹಾರ ಉತ್ಪಾದನೆ ಗುರಿ ಹೆಚ್ಚಿಸಲು ಕೇಂದ್ರ ನಿರ್ಧಾರ
ಉತ್ತಮ ಮಳೆ ಹಿನ್ನೆಲೆ ; ಎಣ್ಣೆ ಕಾಳುಗಳು, ಆಹಾರ ಧಾನ್ಯ ಬೆಳೆಯಲು ಆದ್ಯತೆ
Team Udayavani, Sep 23, 2020, 1:20 AM IST
ಸಾಂದರ್ಭಿಕ ಚಿತ್ರ
ಮುಂಬಯಿ: ಪ್ರಸಕ್ತ ಸಾಲಿನಲ್ಲಿ ದೇಶದ ಹಲವು ಭಾಗಗಳಲ್ಲಿ ಉತ್ತಮ ಮುಂಗಾರು ಮಳೆಯಾಗಿದೆ. ಹೀಗಾಗಿ, ಜಲಸಂಗ್ರಹಾಗಾರಗಳಲ್ಲಿ ನೀರಿನ ಸಂಗ್ರಹ ತೃಪ್ತಿದಾಯಕವಾಗಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ದಾಖಲೆ ಪ್ರಮಾಣದಲ್ಲಿ ಆಹಾರ ಉತ್ಪಾದನೆಯ ಗುರಿಯನ್ನು ಕೇಂದ್ರ ಸರಕಾರ ಹಾಕಿಕೊಂಡಿದೆ. ಜತೆಗೆ ಈ ನಿಟ್ಟಿನಲ್ಲಿ ಆಮದು ಪ್ರಮಾಣ ಗಣನೀಯ ಪ್ರಮಾಣದಲ್ಲಿ ತಗ್ಗಿಸಲು ಕ್ರಮಕ್ಕೆ ಮುಂದಾಗಿದೆ. ಅದರ ಅನ್ವಯ 2020-21ನೇ ಸಾಲಿನಲ್ಲಿ 300 ದಶಲಕ್ಷ ಟನ್‌ಗಳಷುc ಆಹಾರ ಉತ್ಪಾದನೆಗೆ ಮುಂದಾಗಿದೆ. 2019-20ನೇ ಸಾಲಿಗಿಂತ ನಾಲ್ಕು ಟನ್‌ಗಳಷ್ಟು ಗುರಿ ಪ್ರಮಾಣ ಅಧಿಕವಾಗಿದೆ. ಎಣ್ಣೆ ಕಾಳು ಮತ್ತು ಆಹಾರ ಧಾನ್ಯಗಳನ್ನು
ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲು ಆದ್ಯತೆ ನೀಡಲಾಗಿದೆ. ಅದರ ಅನ್ವಯ ಎಣ್ಣೆ ಕಾಳುಗಳು, ಸಾಸಿವೆಯನ್ನು 92 ಲಕ್ಷ ಟನ್‌ಗಳಿಂದ 1.25 ಕೋಟಿ ಟನ್‌ಗಳಿಗೆ ಬೆಳೆ ಪ್ರಮಾಣ ಏರಿಸಲು ನಿಗದಿ ಮಾಡಲಾಗಿದೆ. ಇದರಿಂದಾಗಿ ಇತರ ದೇಶಗಳಿಂದ ಈ ಉತ್ಪನ್ನಗಳ ಆಮದು ತಗ್ಗಿಸಲು ಕೇಂದ್ರ ಸರಕಾರ ಯೋಜಿಸುತ್ತಿದೆ. ಅದಕ್ಕಾಗಿ ಈ ಬೆಳೆಗಳಿಗೆ ಶೇ.5.1ರಷ್ಟು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)ಯನ್ನು ಸೋಮವಾರ ಸರಕಾರ ಹೆಚ್ಚಿಸಿದೆ. ಸಾಮಾನ್ಯವಾಗಿ ಬೆಳೆಯಲಾಗುವ ಬೇಳೆ ಕಾಳುಗಳ ಬೆಳೆ ಗುರಿಯನ್ನು 2.56 ಕೋಟಿ ಟನ್‌ಗಳಷ್ಟು ಹೆಚ್ಚಿಸಲಾಗಿದೆ. ಮುಂದಿನ ತಿಂಗಳ ಮಧ್ಯಭಾಗದಿಂದ ರಬಿ ಬೆಳೆ ಕಾಲ ಶುರುವಾಗುವ ಹಿನ್ನೆಲೆಯಲ್ಲಿ ಈ ಉದ್ದೇಶಗಳನ್ನು ಪ್ರಕಟಿಸಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಎಣ್ಣೆ ಕಾಳುಗಳ ಬೆಳೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಈ ಮೂಲಕ ಅವುಗಳನ್ನು ಆಮದು ಮಾಡುವುದರ ಮೇಲೆ ಅವಲಂಬನೆ ಕಡಿಮೆ ಮಾಡಲಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್‌ವೆಲ್
Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.