ಆರ್ಥಿಕತೆ ಉತ್ತೇಜನಕ್ಕೆ ಭರಪೂರ ಟಾನಿಕ್‌?

ಭಾರೀ ಪ್ರಮಾಣದ ತೆರಿಗೆ ಕಡಿತಕ್ಕೆ ಕೇಂದ್ರ ಸಿದ್ಧತೆ

Team Udayavani, Oct 30, 2019, 12:56 AM IST

Parliament-of-India-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಆರ್ಥಿಕ ವ್ಯವಸ್ಥೆ ಬಲಪಡಿಸಲು ಕೇಂದ್ರ ಸರಕಾರವು, ಭಾರೀ ಪ್ರಮಾಣದಲ್ಲಿ ತೆರಿಗೆ ಕಡಿತ ಹಾಗೂ ಸುಧಾರಣೆ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.
ಮುಂದಿನ ಫೆಬ್ರವರಿಗೆ ಕೇಂದ್ರ ಬಜೆಟ್‌ ಮಂಡಿಸಲಿದ್ದು, ಇದಕ್ಕೆ ನವೆಂಬರ್‌ನಲ್ಲೇ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ. ದೀರ್ಘಾವಧಿ ಬಂಡವಾಳ ಹೂಡಿಕೆ ಲಾಭ ತೆರಿಗೆ (ಎಲ್‌ಟಿಸಿಜಿ), ಷೇರು ವಹಿವಾಟು ತೆರಿಗೆ (ಎಸ್‌ಟಿಟಿ) ಹಾಗೂ ಲಾಭಾಂಶ ಹಂಚಿಕೆ ತೆರಿಗೆ (ಡಿಡಿಟಿ)ಯನ್ನು ಕಡಿತಗೊಳಿಸುವ ಸಾಧ್ಯತೆ ಇದೆ.

ಈ ಸಂಬಂಧ ಪ್ರಧಾನಮಂತ್ರಿ ಕಾರ್ಯಾಲಯವು, ಹಣಕಾಸು ಸಚಿವಾಲಯದ ತೆರಿಗೆ ಇಲಾಖೆ ಹಾಗೂ ನೀತಿ ಆಯೋಗದ ಜೊತೆ ಚರ್ಚೆ ನಡೆಸುತ್ತಿದೆ. ನವೆಂಬರ್‌ ತಿಂಗಳಾಂತ್ಯದಲ್ಲಿ ಅಂತಿಮ ರೂಪುರೇಷೆ ನಿಗದಿಪಡಿಸಲಿದೆ ಎಂದು ಮೂಲಗಳು ತಿಳಿಸಿವೆ. ಫೆಬ್ರವರಿ 3ರಂದು ಕೇಂದ್ರ ಬಜೆಟ್‌ ಮಂಡಿಸಲಿದ್ದು, ಇದಕ್ಕೂ ಮುನ್ನವೇ ತೆರಿಗೆ ಕಡಿತವನ್ನು ಘೋಷಿಸುವ ಸಂಭವ ಇದೆ.

ಏಷ್ಯಾದಲ್ಲೇ ಎರಡನೇ ಅತಿ ದೊಡ್ಡ ಆರ್ಥಿಕತೆ ಹೊಂದಿರುವ ಭಾರತದಲ್ಲಿ ಅಟೋಮೊಬೈಲ್‌ ಮತ್ತಿತರ ವಲಯಗಳಲ್ಲಿ ಹಿಂಜರಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಜಿಎಸ್‌ಟಿ ಕಡಿತ ಸೇರಿದಂತೆ ಉದ್ಯಮಿಗಳಿಗೆ ಪೂರಕ ಸುಧಾರಣೆ ಕ್ರಮಗಳನ್ನು ಕೈಗೊಂಡಿದ್ದಾರೆ.

ಷೇರು ಮಾರುಕಟ್ಟೆಯಲ್ಲಿ ಹುಮ್ಮಸ್ಸು: ಸೆನ್ಸೆಕ್ಸ್‌ 581 ಅಂಕ ಏರಿಕೆ
ಈ ದೀಪಾವಳಿಯು ಷೇರು ಹೂಡಿಕೆದಾರರಿಗೆ ಹೊಸ ಭರವಸೆಯ ಬೆಳಕು ಮೂಡಿಸಿದ್ದು, ಹಬ್ಬದ ಮಾರನೇ ದಿನದ ವಹಿವಾಟಿನಲ್ಲೇ ಸೆನ್ಸೆಕ್ಸ್‌ ಭರ್ಜರಿ ಏರಿಕೆ ದಾಖಲಿಸಿದೆ. ಕೇಂದ್ರ ಸರಕಾರವು ಆರ್ಥಿಕತೆಗೆ ಉತ್ತೇಜನ ನೀಡಲು ಇನ್ನಷ್ಟು ಕ್ರಮಗಳನ್ನು ಘೋಷಿಸಲಿದೆ ಹಾಗೂ ಆದಾಯ ತೆರಿಗೆ ಕಡಿತ ಮಾಡಲಿದೆ ಎಂಬ ಸುದ್ದಿಯು ಹೂಡಿಕೆದಾರರಿಗೆ ಹುಮ್ಮಸ್ಸು ನೀಡಿದೆ.

ಪರಿಣಾಮ ಮಂಗಳವಾರ ಇವರು ಷೇರುಗಳ ಖರೀದಿಯಲ್ಲಿ ಆಸಕ್ತಿ ವಹಿಸಿದ ಕಾರಣ, ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 581 ಅಂಕ ಏರಿಕೆಯಾಗಿ, 39,831ರಲ್ಲಿ ವಹಿವಾಟು ಅಂತ್ಯಗೊಳಿಸಿತು. ಇದು ಸುಮಾರು 4 ತಿಂಗಳ ಬಳಿಕದ ದಾಖಲೆಯಾಗಿದೆ. ಅದೇ ರೀತಿ ನಿಫ್ಟಿ 159 ಅಂಕ ಏರಿಕೆಯಾಗಿ ದಿನಾಂತ್ಯಕ್ಕೆ 11,786ಕ್ಕೆ ತಲುಪಿತು. ಟಾಟಾ ಮೋಟಾರ್ಸ್‌ ಷೇರುಗಳು ಶೇ.17, ಟಾಟಾ ಸ್ಟೀಲ್‌, ಯೆಸ್‌ ಬ್ಯಾಂಕ್‌, ಆ್ಯಕ್ಸಿಸ್‌ ಬ್ಯಾಂಕ್‌, ಮಾರುತಿ ಸುಜುಕಿ, ಟಿಸಿಎಸ್‌ ಷೇರುಗಳು ಶೇ.7.09 ಹೆಚ್ಚಳ ಕಂಡವು.

ಟಾಪ್ ನ್ಯೂಸ್

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.