ಸಣ್ಣ ನಗರಗಳಲ್ಲೂ ನರೇಗಾ: ಕೋವಿಡ್ 19 ಬಿಕ್ಕಟ್ಟಿನ ಉದ್ಯೋಗ ನಷ್ಟಕ್ಕೆ ‘ನರೇಗಾ’ ಆಸರೆ
Team Udayavani, Sep 3, 2020, 6:25 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಗ್ರಾಮೀಣ ನಿರುದ್ಯೋಗಿಗಳಿಗೆ ಆಸರೆಯಾಗಿರುವ, ವಿಶ್ವದ ಬೃಹತ್ ಉದ್ಯೋಗ ಯೋಜನೆ ನರೇಗಾ’ವನ್ನು ಸಣ್ಣ ನಗರಗಳಿಗೂ ವಿಸ್ತರಿಸಲು ಕೇಂದ್ರ ಸರಕಾರ ಚಿಂತಿಸಿದೆ.
ಕೋವಿಡ್ 19 ಲಾಕ್‌ಡೌನ್‌ನಿಂದಾಗಿ ಉದ್ಯೋಗ ಕಳೆದುಕೊಂಡ ನಗರಗಳ ಲಕ್ಷಾಂತರ ಮಂದಿಗೆ ನರೇಗಾ ಆಸರೆಯಾಗಲಿದೆ.
ಈ ಉದ್ದೇಶಿತ ಯೋಜನೆಗೆ ಅನುಮೋದನೆ ಸಿಕ್ಕಿದರೆ ಸಣ್ಣಪುಟ್ಟ ನಗರಗಳಿಗೆ ವಿಸ್ತರಿಸಲಾಗುತ್ತದೆ.
ಆರಂಭಿಕ ಹಂತದಲ್ಲಿ 350 ಕೋಟಿ ರೂ. ವೆಚ್ಚದಲ್ಲಿ ನರೇಗಾವನ್ನು ಅನುಷ್ಠಾನಗೊಳಿಸಲಾಗುತ್ತದೆ ಎಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ಸಂಜಯ್ ಕುಮಾರ್ ತಿಳಿಸಿದ್ದಾರೆ.
ನಗರ ಮಟ್ಟದಲ್ಲಿ ನರೇಗಾ ಅನುಷ್ಠಾನಕ್ಕೆ ಕೇಂದ್ರ ಸರಕಾರ ಕಳೆದ ವರ್ಷವೇ ಚಿಂತಿಸಿತ್ತು. ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಈ ಪರಿಕಲ್ಪನೆಗೆ ವೇಗ ಲಭಿಸಿದೆ ಎಂದು ಹೇಳಿದ್ದಾರೆ.
ದೊಡ್ಡ ನಗರಗಳಿಗಿಲ್ಲ
ನರೇಗಾವನ್ನು ಆರಂಭಿಕ ಹಂತದಲ್ಲಿ ಸಣ್ಣಪುಟ್ಟ ನಗರಗಳಲ್ಲಿ ಅಳವಡಿಸಲಾಗುತ್ತದೆ. ದೊಡ್ಡ ನಗರಗಳಲ್ಲಿ ಹೆಚ್ಚಾಗಿ ವೃತ್ತಿಪರರು ಯೋಜನೆಗಳನ್ನು ಕೈಗೊಳ್ಳುವುದರಿಂದ ನರೇಗಾ ಅಳವಡಿಕೆ ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.
202 ರೂ. ದೈನಂದಿನ ವೇತನ ಹೊಂದಿರುವ ನರೇಗಾ ಯೋಜನೆ ಮೂಲಕ ಪ್ರಸ್ತುತ ಗ್ರಾಮೀಣ ಭಾಗದ ಜನರಿಗೆ ವರ್ಷಕ್ಕೆ 100 ದಿನಗಳ ಉದ್ಯೋಗ ಕಲ್ಪಿಸುತ್ತಿದೆ.
ಏನೇನು ಕೆಲಸ?
ರಸ್ತೆ ನಿರ್ಮಾಣ, ಕಟ್ಟಡ ಕಾಮಗಾರಿ, ಗಿಡ ನೆಡುವುದು, ಕಿರು ಅರಣ್ಯ ಪೋಷಣೆ ಇತ್ಯಾದಿ ಕೆಲಸಗಳನ್ನು ಸಣ್ಣ ನಗರಗಳಲ್ಲಿ ನರೇಗಾ ಕೂಲಿಗಳಿಂದ ಮಾಡಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.