ಉತ್ತರ ಪ್ರದೇಶ: 10 ದಿನಗಳಲ್ಲಿ ಡೆಂಗ್ಯೂಗೆ 60 ಬಲಿ
Team Udayavani, Sep 4, 2021, 7:17 PM IST
ಸಾಂದರ್ಭಿಕ ಚಿತ್ರ.
ಲಕ್ನೋ: ಉತ್ತರ ಪ್ರದೇಶದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 10 ದಿನಗಳಲ್ಲಿ 60 ಮಂದಿ ಡೆಂಗ್ಯೂಗೆ ಬಲಿಯಾಗಿದ್ದಾರೆ.
ಅದರಲ್ಲಿ 50 ಮಂದಿ ಫಿರೋಜಾಬಾದ್‌ನಲ್ಲೇ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಫಿರೋಜಾಬಾದ್‌ನಲ್ಲಿ ಸಾವನ್ನಪ್ಪಿದವರಲ್ಲಿ 40 ಮಕ್ಕಳಿದ್ದಾರೆ. ಅಲ್ಲಿ 200 ಜನರ ಸ್ಯಾಂಪಲ್‌ಗಳನ್ನು ಪರೀಕ್ಷೆ ಮಾಡಲಾಗಿದ್ದು ಅದರಲ್ಲಿ ಶೇ. 50ರಷ್ಟು ಮಂದಿಯಲ್ಲಿ ಡೆಂಗ್ಯೂ ದೃಢವಾಗಿದೆ.
ಮಥುರಾ, ಫರಿದಾಬಾದ್, ಪ್ರಯಾಗ್ ರಾಜ್‌ನಲ್ಲಿ ಡೆಂಗ್ಯೂ ಉಲ್ಬಣಗೊಂಡಿದೆ. ಪ್ರಯಾಗ್ ರಾಜ್ ಸುತ್ತಮುತ್ತ ಒಟ್ಟು 34 ಪ್ರಕರಣಗಳು ವರದಿಯಾಗಿವೆ ಎಂಬುವುದು ಮತ್ತೊಂದು ಆಘಾತಕಾರಿ ವಿಚಾರ.
ಇದನ್ನೂ ಓದಿ:ಕೋವಿಡ್ : ರಾಜ್ಯದಲ್ಲಿಂದು 983 ಜನರಲ್ಲಿ ಸೋಂಕು ದೃಢ : 1620 ಸೋಂಕಿತರು ಗುಣಮುಖ
ಇನ್ನು ಡೆಂಗ್ಯೂ ಹಾವಳಿ ಮಧ್ಯೆ ಆರು ಮಂದಿಯ ತಂಡ ಜ್ವರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದು, ಸೋಮವಾರ ವರದಿ ನೀಡುವ ಸಾಧ್ಯತೆ ಇದೆ.
ಜಿಲ್ಲೆಯಲ್ಲಿ ಹೆಮರಾಜಿಕ್ ಡೆಂಗ್ಯೂ ಪ್ರಕರಣಗಳು ಹೆಚ್ಚಿವೆ. ಇದರಿಂದಾಗಿ ಹೆಚ್ಚಾಗಿ 10 ವರ್ಷದೊಳಗಿನ ಮಕ್ಕಳು ಬಳಲುತ್ತಿದ್ದಾರೆ. ಅವರ ರಕ್ತ ದಲ್ಲಿನ ಬಿಳಿ ರಕ್ತದ ಕಣ ಕಡಿಮೆಯಾಗುತ್ತಿದ್ದು, ರಕ್ತಸ್ರಾವ ಸಮಸ್ಯೆಯೂ ಅತಿಯಾಗಿ ಕಾಣಿಸಿಕೊಳ್ಳುತ್ತಿದೆ ಎಂದು ಜಿಲ್ಲೆಯ ಮ್ಯಾಜಿಸ್ಟ್ರೇಟ್ ಚಂದ್ರ ವಿಜಯ್ ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.