ಕೋವಿಡ್ ಸೋಂಕು ಪರೀಕ್ಷೆ ಕಡಿಮೆಯಾಗಿದೆ; 13 ರಾಜ್ಯಗಳಿಗೆ ಕೇಂದ್ರದ ಮುನ್ನೆಚ್ಚರಿಕೆ
ವಿದೇಶಗಳ ಉದಾಹರಣೆ ಪ್ರಸ್ತಾಪ
Team Udayavani, Nov 24, 2021, 10:00 PM IST
ಮುಂಬೈ/ನವದೆಹಲಿ: ಹಲವು ದೇಶಗಳಲ್ಲಿ ಕೋವಿಡ್ ಮತ್ತೆ ಹೆಚ್ಚುತ್ತಿರುವುದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಹೀಗಾಗಿ, ಮಹಾರಾಷ್ಟ್ರ, ಕೇರಳ ಸೇರಿದಂತೆ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ.
ಕಡಿಮೆ ಪ್ರಮಾಣದಲ್ಲಿ ಸೋಂಕು ಪತ್ತೆ ಪರೀಕ್ಷೆ ನಡೆಸುತ್ತಿರುವುದು ಕಳವಳಕಾರಿ. ಕೆಲವೊಂದು ದೇಶಗಳಲ್ಲಿ ಸೋಂಕು ಸಂಖ್ಯೆ ಹೆಚ್ಚುತ್ತಿದೆ.
ಹೀಗಾಗಿ, ದೇಶದಲ್ಲಿಯೂ ಸೋಂಕು ಪತ್ತೆ ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಗಳನ್ನು ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
“ಸೋಂಕು ಪತ್ತೆ ಪರೀಕ್ಷೆ ಪ್ರಮಾಣ ಕಡಿಮೆ ಮಾಡುವುದರಿಂದ ಅದು ಹರಡಲು ಕಾರಣವಾಗುತ್ತದೆ’ ಎಂದೂ ಹೇಳಿದ್ದಾರೆ.
ನಾಗಾಲ್ಯಾಂಡ್, ಸಿಕ್ಕಿಂ, ಮಹಾರಾಷ್ಟ್ರ, ಕೇರಳ, ಗೋವಾ, ಮಣಿಪುರ, ಮೇಘಾಲಯ, ಮಿಜೋರಾಮ್, ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ರಾಜಸ್ಥಾನ, ಪಶ್ಚಿಮ ಬಂಗಾಳ ಮತ್ತು ಲಡಾಖ್‌ಗೆ ಪತ್ರ ಬರೆಯಲಾಗಿದೆ.
ಮುಂದಿನ ತಿಂಗಳು 3ನೇ ಅಲೆ?
ಮಹಾರಾಷ್ಟ್ರಕ್ಕೆ ಮುಂದಿನ ತಿಂಗಳು ಮೂರನೇ ಅಲೆ ಅಪ್ಪಳಿಸುವ ಸಾಧ್ಯತೆ ಇದೆ. ಆದರೆ, ಅದರ ಪ್ರಭಾವ ಕಡಿಮೆ ಇರುವ ಅಂದಾಜು ಇದೆ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ. ಸುದ್ದಿ ವಾಹಿನಿಯೊಂದರ ಜತೆಗೆ ಮಾತನಾಡಿದ ಅವರು, ಒಂದು ವೇಳೆ 3ನೇ ಅಲೆ ಅಪ್ಪಳಿಸಿದರೂ, ಐಸಿಯು ಬೆಡ್‌ಗಳ ಅಗತ್ಯ ಇರುವುದಿಲ್ಲ. ಮಹಾರಾಷ್ಟ್ರದಲ್ಲಿ ಶೇ.80ರಷ್ಟು ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಹೇಳಿದ್ದಾರೆ.
537 ದಿನಗಳ ಕನಿಷ್ಠ:
ದೇಶದಲ್ಲಿ ಮಂಗಳವಾರದಿಂದ ಬುಧವಾರದ ಅವಧಿಯಲ್ಲಿ 9,283 ಹೊಸ ಪ್ರಕರಣಗಳು ದೃಢಪಟ್ಟಿವೆ ಮತ್ತು 437 ಮಂದಿ ಅಸುನೀಗಿದ್ದಾರೆ. ಸಕ್ರಿಯ ಸೋಂಕು ಸಂಖ್ಯೆ 537 ದಿನಗಳಿಗೆ ಹೋಲಿಕೆ ಮಾಡಿದರೆ ಕನಿಷ್ಠಕ್ಕೆ ಅಂದರೆ 1,11,481 ಪ್ರಕರಣಗಳು ದಾಖಲಾಗಿವೆ. 2020ರ ಮಾರ್ಚ್ ಬಳಿಕ ಇದು ಕಡಿಮೆಯದ್ದಾಗಿದೆ. ಚೇತರಿಕೆ ಪ್ರಮಾಣ ಶೇ.98.33 ಆಗಿದೆ ಮತ್ತು ಸಕ್ರಿಯ ಸೋಂಕಿನ ಪ್ರಮಾಣ ಶೇ.0.32 ಆಗಿದೆ.
ವರ್ಷಾಂತ್ಯಕ್ಕೆ ಶುರು?
ವರ್ಷಾಂತ್ಯಕ್ಕೆ ಅಂತಾರಾಷ್ಟ್ರೀಯ ವಿಮಾನಯಾನ ಸಾಮಾನ್ಯ ಸ್ಥಿತಿಗೆ ಬರಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ರಾಜೀವ್ ಬನ್ಸಲ್ ಹೇಳಿದ್ದಾರೆ. ಸೋಂಕಿನ ಕಾರಣದಿಂದಾಗಿ 2020ರ ಮಾರ್ಚ್‌ನಿಂದ ಪೂರ್ಣ ಪ್ರಮಾಣ ವಿಮಾನಯಾನ ಇಲ್ಲ. ಸದ್ಯ 25ಕ್ಕೂ ಹೆಚ್ಚು ದೇಶಗಳ ಜತೆಗೆ ವಿಶೇಷ ಒಪ್ಪಂದದ ಅನ್ವಯ ವಿಮಾನಯಾನ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.