ಯಾಸಿನ್ ಮಲಿಕ್ ನ ಜಮ್ಮು-ಕಾಶ್ಮೀರ್ ಲಿಬರೇಷನ್ ಫ್ರಂಟ್ ಬ್ಯಾನ್
Team Udayavani, Mar 22, 2019, 1:40 PM IST
ಹೊಸದಿಲ್ಲಿ: ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ಭೀಕರ ದಾಳಿಯ ಬಳಿಕ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಪ್ರತ್ಯೇಕತವಾದಿ ಉಗ್ರ ಯಾಸಿನ್ ಮಲಿಕ್ ನೇತೃತ್ವದ ಜಮ್ಮು-ಕಾಶ್ಮೀರ್ ಲಿಬರೇಷನ್ ಫ್ರಂಟ್ ಸಂಸ್ಥೆಯನ್ನು ಬ್ಯಾನ್ ಮಾಡಿದೆ.
ಪಾಕ್ ಸಂಕಲ್ಪ ದಿನವಾಗಿರುವ ಮಾರ್ಚ್ 22 ರಂದೇ ಕೇಂದ್ರ ಸರ್ಕಾರ ಜೆಕೆಎಲ್‌ಎಫ್ ಸಂಘಟನೆಯನ್ನು ನಿಷೇಧಿಸಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಭದ್ರತಾ ಸಂಪುಟ ಸಮಿತಿಯ ಸಭೆಯಲ್ಲಿ ಈ ದಿಟ್ಟ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗುಬ್ಟಾ ಅವರು ಜೆಕೆಎಲ್‌ಎಫ್ ಸಂಘಟನೆಯನ್ನು ಬ್ಯಾನ್ ಮಾಡಿರುವುದಾಗಿ ಘೋಷಿಸಿದ್ದಾರೆ. 1988ರಿಂದ ಸಕ್ರೀಯವಾಗಿರುವ ಉಗ್ರ ಸಂಘಟನೆಯಾಗಿದ್ದು, ಕಾಶ್ಮೀರಿ ಪಂಡಿತರು ಮತ್ತು ಸರ್ಕಾರಿ ಎಜೆನ್ಸಿ, ಸೇರಿದಂತೆ ಭದ್ರತಾ ಪಡೆಗಳ ಮೇಲೆ ಹಲವು ದಾಳಿಗಳಲ್ಲಿ ಭಾಗಿಯಾಗಿದೆ. 37 ಎಫ್ಐಆರ್‌ಗಳು ಸಂಘಟನೆಯ ಮೇಲೆ ಇದ್ದು, ಹಲವು ಬಾರಿ ವಿಚಾರಣೆಗೊಳಪಟ್ಟಿದೆ, ಹೀಗಾಗಿ ಸಂಘಟನೆಯನ್ನು ಬ್ಯಾನ್ ಮಾಡಿರುವುದಾಗಿ ತಿಳಿಸಿದ್ದಾರೆ.
ಉಗ್ರ ಯಾಸೀನ್ ಮಲಿಕ್ನನ್ನು ಫೆಬ್ರವರಿ 22 ರಂದು ಬಂಧಿಸಿ ಕೋಟ್ ಬಲ್ವಾಲ್ ಜೈಲಿನಲ್ಲಿ ಇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.