ವಿದೇಶಿ ದೇಣಿಗೆ ಸಂಗ್ರಹದಲ್ಲಿ ಅಕ್ರಮ: ರಾಜೀವ್ ಗಾಂಧಿ ಪ್ರತಿಷ್ಠಾನದ FCRA ಲೈಸೆನ್ಸ್ ರದ್ದು
ವಿದೇಶಿ ದೇಣಿಗೆ ಸಂಗ್ರಹದಲ್ಲಿ ಕಾನೂನು ಉಲ್ಲಂಘನೆ
Team Udayavani, Oct 23, 2022, 10:56 AM IST
ನವದೆಹಲಿ : ಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ರಾಜೀವ್ ಗಾಂಧಿ ಫೌಂಡೇಶನ್ (RGF) ಮತ್ತು ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್ (RGCT) ನ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (FCRA) ಪರವಾನಗಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ವಿದೇಶಿ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೂಲಗಳ ಪ್ರಕಾರ, ಆರ್‌ಜಿಎಫ್ ಮತ್ತು ಆರ್‌ಜಿಸಿಟಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆ ಸಿಬಿಐಗೆ ವಹಿಸುವ ಸಾಧ್ಯತೆ ಇದೆ.
ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರ್‌ಜಿಎಫ್‌ನ ಮುಖ್ಯಸ್ಥೆಯಾಗಿದ್ದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಇದರ ಸದಸ್ಯರಾಗಿದ್ದಾರೆ.
ಗಾಂಧಿ ಕುಟುಂಬ ನಡೆಸುತ್ತಿರುವ ಎನ್‌ಜಿಒದಲ್ಲಿ ನಡೆದಿರುವ ಆರೋಪದ ಅಕ್ರಮಗಳ ತನಿಖೆಗಾಗಿ 2020 ರಲ್ಲಿ ಗೃಹ ಸಚಿವಾಲಯವು ರಚಿಸಿದ್ದ ಅಂತರ-ಸಚಿವಾಲಯ ಸಮಿತಿಯು ನಡೆಸಿದ ವಿಚಾರಣೆಯ ನಂತರ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.
ಇದನ್ನೂ ಓದಿ : ಗುಂಡ್ಲುಪೇಟೆ: ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಕಪಾಳಮೋಕ್ಷ ಮಾಡಿದ ಸಚಿವ ವಿ. ಸೋಮಣ್ಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.