DA; ನೌಕರರ ಡಿಎ ಹೆಚ್ಚಳ ಮಾಡಿದ ಕೇಂದ್ರ ಸರಕಾರ: 1 ಕೋಟಿ ಮಂದಿಗೆ ಪ್ರಯೋಜನ


Team Udayavani, Mar 7, 2024, 8:46 PM IST

MONEY (2)

ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಮುನ್ನ ಕೇಂದ್ರ ಸರಕಾರ ನೌಕರರಿಗೆ ಭರ್ಜರಿ ಗಿಫ್ಟ್ ಎಂಬಂತೆ ಗುರುವಾರ ತುಟ್ಟಿಭತ್ಯೆ (ಡಿಎ)ಯನ್ನು ಮೂಲ ವೇತನದ ಶೇಕಡಾ 50 ಕ್ಕೆ ಏರಿಸಿದ್ದು, ಈ ವರ್ಷದ ಜನವರಿ 1 ರಿಂದ ಜಾರಿಗೆ ಬರುವಂತೆ  1 ಕೋಟಿ ನೌಕರರು ಮತ್ತು ಪಿಂಚಣಿದಾರರಿಗೆ ಪ್ರಯೋಜನವಾಗಲಿದೆ.

”ಮೂಲ ವೇತನ, ಪಿಂಚಣಿ, ಬೆಲೆ ಏರಿಕೆ  ಸರಿದೂಗಿಸುವ ಸಲುವಾಗಿ ಜನವರಿ 1, 2024 ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ (ಡಿಎ) ಮತ್ತು ಪಿಂಚಣಿದಾರರಿಗೆ ಡಿಆರ್‌ನೆಸ್ ರಿಲೀಫ್ (ಡಿಆರ್) ಅನ್ನು ಬಿಡುಗಡೆ ಮಾಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದು ಪ್ರಸ್ತುತ ಇರುವ ಶೇಕಡಾ 46 ರ ದರಕ್ಕಿಂತ 4 ಶೇಕಡಾ ಹೆಚ್ಚಳವಾಗಿದೆ” ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಸಂಪುಟ ಸಭೆಯ ನಂತರ ಹೇಳಿದ್ದಾರೆ.

Dearness Allowance ಮತ್ತು Dearness Relief ಎರಡರ ಲೆಕ್ಕದಲ್ಲಿ ಬೊಕ್ಕಸಕ್ಕೆ ವಾರ್ಷಿಕ 12,869 ಕೋಟಿ ರೂ. ಹೊರೆ ಇದ್ದು ಇನ್ನು ಮುಂದೆ ಹೆಚ್ಚಳದ ಪರಿಣಾಮ 2024-25ರ ಅವಧಿಯಲ್ಲಿ (ಜನವರಿ 2024 ರಿಂದ ಫೆಬ್ರವರಿ 2025) 15,014 ಕೋಟಿ ರೂ.ಹೊರೆಯಾಗಲಿದೆ.

ಡಿಎ ಹೆಚ್ಚಳದೊಂದಿಗೆ ಸಾರಿಗೆ ಭತ್ಯೆ, ಕ್ಯಾಂಟೀನ್ ಭತ್ಯೆ ಮತ್ತು ನಿಯೋಜಿತ ಭತ್ಯೆಗಳನ್ನು ಶೇ 25 ರಷ್ಟು ಹೆಚ್ಚಿಸಲಾಗಿದೆ. ಮನೆ ಬಾಡಿಗೆ ಭತ್ಯೆಯನ್ನು ಮೂಲ ವೇತನದ ಶೇ.27, ಶೇ.19 ಮತ್ತು ಶೇ.9ರಿಂದ ಕ್ರಮವಾಗಿ ಶೇ.30, ಶೇ.20 ಮತ್ತು ಶೇ.10ಕ್ಕೆ ಏರಿಸಲಾಗಿದೆ.

ಗ್ರಾಚ್ಯುಟಿ ಅಡಿಯಲ್ಲಿ ಪ್ರಯೋಜನಗಳನ್ನು ಶೇಕಡಾ 25 ರಷ್ಟು ಹೆಚ್ಚಿಸಲಾಗಿದೆ ಮತ್ತು ಈಗಿರುವ 20 ಲಕ್ಷದಿಂದ 25 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ವಿವಿಧ ಭತ್ಯೆಗಳ ಹೆಚ್ಚಳದಿಂದ ಬೊಕ್ಕಸಕ್ಕೆ ವಾರ್ಷಿಕವಾಗಿ 9,400 ಕೋಟಿ ರೂ.ಹೊರೆಯಾಗಲಿದೆ.

7ನೇ ಕೇಂದ್ರೀಯ ವೇತನ ಆಯೋಗದ ಶಿಫಾರಸುಗಳ ಆಧಾರದ ಮೇಲೆ ಅಂಗೀಕೃತ ಸೂತ್ರಕ್ಕೆ ಅನುಗುಣವಾಗಿ ಡಿಎ ಮತ್ತು ಡಿಆರ್ ಹೆಚ್ಚಳವಾಗಿದೆ. ಕೇಂದ್ರ ಸರಕಾರದ ಈ ನಿರ್ಧಾರವು 67.95 ಲಕ್ಷ ಪಿಂಚಣಿದಾರರು ಜತೆಗೆ 49.18 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ ಪ್ರಯೋಜನವನ್ನು ಪಡೆಯಲಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

sringeri-new

Sringeri: ಇಂದು ಸುವರ್ಣ ಭಾರತೀ ಮಹೋತ್ಸವ “ಸ್ತೋತ್ರ ತ್ರಿವೇಣಿ ಮಹಾಸಮರ್ಪಣೆ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rahul-gandhi

Savarkar ಅವಮಾನ ಕೇಸ್‌: ರಾಹುಲ್‌ಗೆ ಪುಣೆ ಕೋರ್ಟ್‌ ಬೇಲ್‌

MONEY (2)

Tax share: ರಾಜ್ಯಕ್ಕೆ ಕೇಂದ್ರದಿಂದ 6,310 ಕೋ.ರೂ. ಹಂಚಿಕೆ

Exam 3

2024ರಲ್ಲಿ ಕಾಲೇಜಿಂದ ಹೊರಗುಳಿದವರಿಗೆ ಜೆಇಇ ಪರೀಕ್ಷೆಗೆ ಸಮ್ಮತಿ

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

1-wqewqeqwe

Cardiac arrest: ಗುಜರಾತ್‌ ಶಾಲೆಯಲ್ಲಿ 3ನೇ ತರಗತಿ ವಿದ್ಯಾರ್ಥಿನಿ ಸಾ*ವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.