Western Ghats ರಕ್ಷಣೆಗೆ ಕೇಂದ್ರ 5ನೇ ಹೆಜ್ಜೆ; ಕರ್ನಾಟಕದ 20,668 ಚ.ಕಿ.ಮೀ. ಸೇರ್ಪಡೆ
6 ರಾಜ್ಯಗಳ 56,800 ಚದರ ಕಿ.ಮೀ. ಪರಿಸರ ಸೂಕ್ಷ್ಮವಲಯಕ್ಕೆ
Team Udayavani, Aug 3, 2024, 7:00 AM IST
ಹೊಸದಿಲ್ಲಿ: ಕರ್ನಾಟಕದ 20,668 ಚದರ ಕಿ.ಮೀ. ಸಹಿತ ಪಶ್ಚಿಮ ಘಟ್ಟದ 56,800 ಚ.ಕಿ.ಮೀ.ಗೂಅಧಿಕ ಪ್ರದೇಶವನ್ನು “ಪರಿಸರ ಸೂಕ್ಷ್ಮ ವಲಯ’ (ಇಎಸ್‌ಎ) ಎಂದು ಘೋಷಿಸುವ 5ನೇ ಕರಡು ಅಧಿಸೂಚನೆಯನ್ನು ಕೇಂದ್ರ ಸರಕಾರ ಪ್ರಕಟಿಸಿದೆ. ಈ ಮೂಲಕ ಅದು ಪಶ್ಚಿಮ ಘಟ್ಟಗಳ ರಕ್ಷಣೆಗೆ ಮತ್ತೆ ಹೆಜ್ಜೆಯಿಟ್ಟಿದೆ.
ಇತ್ತೀಚೆಗಷ್ಟೇ ಭೀಕರ ಭೂಕುಸಿತಕ್ಕೆ ತುತ್ತಾಗಿರುವ ಕೇರಳದ ವಯನಾಡಿನ 13 ಹಳ್ಳಿಗಳು ಹಾಗೂ 6 ರಾಜ್ಯಗಳ ಘಟ್ಟ ಪ್ರದೇಶಗಳು ಅಧಿಸೂಚನೆಯಲ್ಲಿ ಸೇರಿವೆ. ಈ ಅಧಿಸೂಚನೆ ಹೊರಡಿಸಿದ 60 ದಿನಗಳ ಒಳಗಾಗಿ ಸಲಹೆಗಳು ಮತ್ತು ತಕರಾರುಗಳನ್ನು ಸಲ್ಲಿಸಬಹುದಾಗಿದೆ. ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಭೂಕುಸಿತದ ಬೆನ್ನಲ್ಲೇ ಕೇಂದ್ರ ಸರಕಾರ ಜು. 31ರಂದು ಈ ಅಧಿಸೂಚನೆ ಹೊರಡಿಸಿದೆ.
ಕರಡಿನಲ್ಲಿ ಏನಿದೆ?
ಕಲ್ಲು ಕೋರೆ, ಗಣಿಗಾರಿಕೆ, ಮರಳುಗಾರಿಕೆ ಪೂರ್ಣ ನಿಷೇಧ. ಈಗಾಗಲೇ ಇರುವ ಗಣಿಗಾರಿಕೆ 5 ವರ್ಷಗಳಲ್ಲಿ ಸ್ಥಗಿತ. ಹೊಸ ಉಷ್ಣ ಸ್ಥಾವರ ನಿರ್ಮಾಣ ಇಲ್ಲ. ಈಗಿರುವ ಉಷ್ಣ ಸ್ಥಾವರಗಳಿಗೆ ಅಡ್ಡಿ ಇಲ್ಲ, ಆದರೆ ವಿಸ್ತರಣೆ ಇಲ್ಲ. ಬೃಹತ್ ನಿರ್ಮಾಣ ಯೋಜನೆ, ಟೌನ್‌ಶಿಪ್ ನಿಷೇಧ. ಹಾಲಿ ನಿರ್ಮಾಣಗಳ ದುರಸ್ತಿ -ನವೀಕರಣಕ್ಕೆ ಅಡ್ಡಿ ಇಲ್ಲ.
ಡಾ| ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ತೀರ್ಮಾನವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜತೆ ಮತ್ತೊಮ್ಮೆ ಚರ್ಚಿಸಿ ನಿರ್ಧಾರ ಮಾಡಲಾಗುವುದು.
– ಸಿದ್ದರಾಮಯ್ಯ, ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.