ಕೇಂದ್ರದಿಂದಲೇ ಹೊಸ ಒಟಿಟಿ?
ವಾರ್ತಾ ಕಾರ್ಯದರ್ಶಿ ಅಪೂರ್ವ ಚಂದ್ರ ಸುಳಿವು
Team Udayavani, Feb 17, 2023, 7:40 AM IST
ನವದೆಹಲಿ: ದೇಶದ ಮನರಂಜನಾ ಕ್ಷೇತ್ರದಲ್ಲಿ ಜನಪ್ರಿಯವಾಗಿರುವ ಒಟಿಟಿ ಪ್ಲಾಟ್‌ಫಾರಂನಲ್ಲೂ ಪ್ರವೇಶ ಪಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರ ಜತೆಗೆ ಈ ವರ್ಷವೇ ಮೊಬೈಲ್‌ನಲ್ಲಿಯೇ ಟಿವಿ ಕಾರ್ಯಕ್ರಮಗಳ ಪ್ರಸಾರ – “ಡೈರೆಕ್ಟ್ ಟು ಮೊಬೈಲ್ ಟೆಲಿವಿಷನ್’ ಪ್ರಯೋಗಕ್ಕೆ ಮುಂದಾಗಿದೆ.
ಈ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ಎಫ್ಎಂ ರೇಡಿಯೋ ತರಂಗಾತರಗಳನ್ನು ಹರಾಜು ಹಾಕಲು ಯೋಜಿಸಿದೆ. ಈ ಕುರಿತು ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಕಾರ್ಯದರ್ಶಿ ಅಪೂರ್ವ ಚಂದ್ರ, “ದೇಶದ ಎರಡು ಮತ್ತು ಮೂರನೇ ಹಂತದ ನಗರಗಳಿಗೆ ಕೂಡ ಎಫ್ಎಂ ರೇಡಿಯೋ ಕೇಂದ್ರಗಳ ವಿಸ್ತಾರಣೆಯ ನಿಟ್ಟಿನಲ್ಲಿ ಈ ವರ್ಷ ಎಫ್ಎಂ ರೇಡಿಯೋ ತರಂಗಾಂತರಗಳ ಹರಾಜಿಗೆ ಮುಂದಾಗಿದ್ದೇವೆ,’ ಎಂದು ತಿಳಿಸಿದರು.
ಒಟಿಟಿ ವ್ಯಾಪ್ತಿಯಲ್ಲಿ ಕೂಡ ಪ್ರಸಾರ ಭಾರತಿಯ ಕಾರ್ಯಕ್ರಮಗಳು ಪ್ರಸಾರವಾಗಬೇಕು. ಪ್ರಸಕ್ತ ವರ್ಷವೇ ಒಟಿಟಿ ಪ್ರವೇಶದ ಗುರಿ ಈಡೇರಲಿದೆ. ದೇಶದಲ್ಲಿ ಈಗಾಗಲೇ ಹಲವು ಎಫ್ಎಂ ರೇಡಿಯೋ ಕೇಂದ್ರಗಳು ಇವೆ. ಆದರೆ ದೇಶದ ಶೇ.60ರಷ್ಟು ಪ್ರದೇಶಗಳಿಗೆ ಮಾತ್ರ ಇದರ ಸೇವೆ ವ್ಯಾಪಿಸಿದೆ. ಪ್ರಸಾರ ಭಾರತಿಯ ಕೇಳುಗರ ವ್ಯಾಪ್ತಿಯನ್ನು ವಿಸ್ತರಿಸಲು ಮುಂದಿನ ನಾಲ್ಕು ವರ್ಷಗಳಲ್ಲಿ ಪ್ರಸಾರ ಮೂಲಸೌಕರ್ಯ ಮತ್ತು ಜಾಲ ಅಭಿವೃದ್ಧಿ(ಬಿಐಎನ್‌ಡಿ) ಯೋಜನೆಯಡಿ ಕೇಂದ್ರ ಸರ್ಕಾರ 2,500 ಕೋಟಿ ರೂ.ಗಳನ್ನು ಮೀಸಲಿರಿಸಿದೆ,’ ಎಂದು ಅಪೂರ್ವ ಚಂದ್ರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.