ಅಗ್ನಿಪಥ: ಜಾತಿ ಪ್ರಮಾಣಪತ್ರ ಆರೋಪಕ್ಕೆ ಕೇಂದ್ರ, ಸೇನೆ ಸ್ಪಷ್ಟನೆ
Team Udayavani, Jul 19, 2022, 10:29 PM IST
ನವದೆಹಲಿ: ಅಗ್ನಿಪಥದ ಮೂಲಕ ಸೇನೆಗೆ ಸೇರ್ಪಡೆಯಾಗುತ್ತಿರುವವರ ಧರ್ಮ, ಜಾತಿ ಪ್ರಮಾಣಪತ್ರಗಳನ್ನು ಕೇಳಲಾಗುತ್ತಿದೆ ಎಂಬ ಕೆಲವು ರಾಜಕೀಯ ನಾಯಕರ ಆರೋಪಕ್ಕೆ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರ ಮಂಗಳವಾರ ಸ್ಪಷ್ಟನೆ ನೀಡಿದೆ.
ಆಪ್ ನಾಯಕ ಸಂಜಯ್ ಸಿಂಗ್, ಆರ್‌ಜೆಡಿಯ ತೇಜಸ್ವಿ ಯಾದವ್, ಜೆಡಿಯು ನಾಯಕ ಉಪೇಂದ್ರ ಕುಶ್ವಾಹ, ಬಿಜೆಪಿ ಸಂಸದ ವರುಣ್ ಗಾಂಧಿ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸೇನೆ, “ಜಾತಿ, ಧರ್ಮದ ಪ್ರಮಾಣಪತ್ರ ಪಡೆಯುವುದು ಹೊಸದೇನಲ್ಲ. ಹಿಂದಿನಿಂದಲೂ ಇದು ಚಾಲ್ತಿಯಲ್ಲಿದೆ. ಸೇವೆಯಲ್ಲಿದ್ದಾಗ ಯೋಧರು ಮೃತಪಟ್ಟರೆ ಅವರ ಅಂತ್ಯಸಂಸ್ಕಾರದ ವಿಧಿವಿಧಾನ ಪೂರೈಸಬೇಕೆಂದರೆ ಜಾತಿ ಗೊತ್ತಿರಬೇಕು ಎಂಬ ಕಾರಣಕ್ಕೆ ಇದು ಜಾರಿಯಲ್ಲಿದೆ’ ಎಂದಿದೆ. ಈ ಆರೋಪಗಳೆಲ್ಲ ಕೇವಲ ವದಂತಿ ಎಂದು ಸಚಿವ ರಾಜನಾಥ್‌ಸಿಂಗ್ ಹೇಳಿದ್ದಾರೆ. ಪ್ರತಿಪಕ್ಷಗಳ ನಾಯಕರು ಸೇನೆಯನ್ನು ಅವಮಾನಿಸುತ್ತಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.
ಅರ್ಜಿಗಳು ಹೈಕೋರ್ಟ್‌ಗೆ:
“ಅಗ್ನಿಪಥ’ ಯೋಜನೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ದೆಹಲಿ ಹೈಕೋರ್ಟ್‌ಗೆ ವರ್ಗಾಯಿಸಿ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ. ಜತೆಗೆ, ಕೇರಳ, ಪಂಜಾಬ್ ಮತ್ತು ಹರ್ಯಾಣ, ಪಾಟ್ನಾ, ಉತ್ತರಾಖಂಡಗಳ ಕೋರ್ಟ್‌ಗಳಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನೂ ಆಯಾ ಹೈಕೋರ್ಟ್‌ಗಳು ದೆಹಲಿ ಹೈಕೋರ್ಟ್‌ಗೆ ವರ್ಗಾಯಿಸಬಹುದು ಅಥವಾ ದೆಹಲಿ ಹೈಕೋರ್ಟ್‌ನ ತೀರ್ಪು ಬರುವವರೆಗೂ ಕಾಯಬಹುದು ಎಂದೂ ಸುಪ್ರೀಂ ನ್ಯಾಯಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rajasthan: ಕಾಂಗ್ರೆಸ್ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು
Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ
Yamuna ನದಿಯಲ್ಲಿ ಡಾ| ಮನಮೋಹನ್ ಸಿಂಗ್ ಚಿತಾಭಸ್ಮ ವಿಸರ್ಜನೆ
Shri Krishna Matha; ವಿಶ್ವಮಟ್ಟದಲ್ಲಿ ಭಗವದ್ಗೀತೆ ಜಾಗೃತಿ: ಪುತ್ತಿಗೆ ಶ್ರೀ
ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್ ಸಿಂಗ್, ಸ್ಮೃತಿ ಮಂಧನಾ ನಾಮ ನಿರ್ದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.