ಜಮ್ಮು-ಕಾಶ್ಮೀರದ ಅಭಿವೃದ್ಧಿಗಾಗಿ 80,000 ಕೋಟಿ ರೂ. ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ
Team Udayavani, Jan 23, 2020, 8:12 AM IST
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬುಧವಾರ ಜಮ್ಮು ಮತ್ತು ಕಾಶ್ಮೀರಕ್ಕೆ 80,000 ಕೋಟಿ ರೂ.ಗಳ ಅಭಿವೃದ್ಧಿ ಪ್ಯಾಕೇಜ್ ಅನ್ನು ಮಂಜೂರು ಮಾಡಿದೆ. ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (ಎಂಎಚ್‌ಆರ್‌ಡಿ) ಈ ಕುರಿತು ಮಾಹಿತಿ ನೀಡಿದೆ.
ಶಿಕ್ಷಣ, ಪ್ರವಾಸೋದ್ಯಮ, ಮೂಲಸೌಕರ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಉತ್ತೇಜನವನ್ನು ನೀಡಲು ಮಾತ್ರವಲ್ಲದೆ ಸಾವಿರಾರು ನಿರುದ್ಯೋಗಿ ಕಾಶ್ಮೀರಿ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಈ ಅಭಿವೃದ್ಧಿ ಪ್ಯಾಕೇಜ್ ಜಮ್ಮು ಮತ್ತು ಕಾಶ್ಮೀರದ ಜನರ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಉನ್ನತೀಕರಿಸುತ್ತದೆ ಎಂದು ಕೇಂದ್ರ ಸ್ಪಷ್ಟಪಡಿಸಿದೆ.
ಮಾರ್ಚ್ 2021 ರ ವೇಳೆಗೆ ಹೊಸದಾಗಿ ರಚಿಸಲಾದ ಕೇಂದ್ರಾಡಳಿತ ಪ್ರದೇಶದಲ್ಲಿ ಕನಿಷ್ಠ 25 ಯೋಜನೆಗಳು ಬರಲಿವೆ, ಈ ಯೋಜನೆಗಳು 25 ಸಾವಿರ ಕೋಟಿ ರೂ.ಗಳ ಮೌಲ್ಯವನ್ನು ಹೊಂದಿರುತ್ತದೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಜನವರಿ 20 ರಂದೇ ತಿಳಿಸಿದ್ದರು. ಜೊತೆಗೆ ಜಮ್ಮು ಮತ್ತು ಕಾಶ್ಮೀರವನ್ನು ರಾಷ್ಟ್ರದ “ಆಭರಣ” ಎಂದು ಬಣ್ಣಿಸಿ, ದೊಡ್ಡ ಹೂಡಿಕೆಗಳನ್ನು ಆಕರ್ಷಿಸುವ ಆಶಯದೊಂದಿಗೆ ಕೇಂದ್ರ ಸರ್ಕಾರವು ಕೈಗಾರಿಕಾ ಪ್ಯಾಕೇಜ್ ಅನ್ನು ತರಲಿದೆ ಎಂದು ಅವರು ಹೇಳಿದ್ದರು.
ಇತ್ತೀಚಿಗಷ್ಟೇ ಜಮ್ಮು ಕಾಶ್ಮೀರಕ್ಕೆ ಕೇಂದ್ರದ 36 ಸಚಿವರ ನಿಯೋಗ ಭೇಟಿ ನೀಡಿ ಅಲ್ಲಿನ ವಸ್ತುಸ್ಥಿತಿಯನ್ನು ಪರಿಶೀಲಿಸಿತ್ತು. ಅದರ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.