NRI ವಿವಾಹ ವಂಚನೆ ತಡೆಗೆ ವೆಬ್‌ಸೈಟ್ ರಚನೆ
Team Udayavani, Jan 2, 2018, 10:15 AM IST
ಹೊಸದಿಲ್ಲಿ: ‘ಹುಡುಗ ಅಮೆರಿಕದಲ್ಲಿದ್ದಾನೆ. ಮಗಳನ್ನು ಆತನಿಗೇ ಕೊಟ್ಟು ಮದುವೆ ಮಾಡಬೇಕು’ ಎನ್ನುವುದು ಹೆಣ್ಣು ಹೆತ್ತವರ ಆಸೆ. ಇಂಥವರು ಕೆಲವೊಂದು ಸಂದರ್ಭದಲ್ಲಿ ಮೋಸ ಹೋಗುವ ಸಾಧ್ಯತೆಗಳೂ ಇರುತ್ತವೆ. ಅಂಥ ಪ್ರಕರಣಗಳನ್ನು ತಪ್ಪಿಸಲು ಮತ್ತು ನಿಗಾ ಇರಿಸಿಕೊಳ್ಳಲು ವೆಬ್‌ಸೈಟ್ ಆರಂಭಿಸಲು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಮುಂದಾಗಿದೆ.
ಈ ಬಗ್ಗೆ ‘ದ ಹಿಂದುಸ್ತಾನ್ ಟೈಮ್ಸ್’ ವರದಿ ಮಾಡಿದೆ. ವೆಬ್‌ಸೈಟ್‌ನಲ್ಲಿ ಅನಿವಾಸಿ ಭಾರತೀಯ ವರನ ಹೆಸರು, ವಿಳಾಸ, ಆತ ಕೆಲಸ ಮಾಡುತ್ತಿರುವ ಸ್ಥಳ ಮತ್ತು ಇತರ ವಿವರಗಳು ಇರುತ್ತವೆ. ಎಷ್ಟು ಮಂದಿ ವಿದೇಶಗಳಲ್ಲಿ ಮದುವೆ ಯಾಗಿ ನೆಲೆಸಿದ್ದಾರೆ ಎಂಬ ಬಗ್ಗೆ ಮಾಹಿತಿ ಇರದಿದ್ದರೂ 3,328 ವಂಚನೆ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 3,268 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ ಎಂದಿದ್ದಾರೆ ಕೇಂದ್ರ ವಿದೇಶಾಂಗ ಇಲಾಖೆ ಸಹಾಯಕ ಸಚಿವ ಜ| ವಿ.ಕೆ.ಸಿಂಗ್. ಭಾರತದಲ್ಲಿ ಮದುವೆಯಾಗಿ ವಿದೇಶಕ್ಕೆ ಪತ್ನಿಯನ್ನು ಕರೆದೊಯ್ದ ಬಳಿಕ ಹಿಂಸೆಗೆ ಗುರಿ ಮಾಡುವುದು, ತ್ಯಜಿಸುವಂಥ ಪ್ರಕರಣ ತಡೆಯುವ ನಿಟ್ಟಿನಲ್ಲಿ ಅದನ್ನು ಆರಂಭಿಸಲಾಗಿದೆ. ಜತೆಗೆ ಎನ್‌ಆರ್‌ಐಗಳ ವಿವಾಹಕ್ಕೆ ಸಂಬಂಧಿಸಿ ಇರುವ ಸಮಸ್ಯೆ ಬಗೆಹರಿಸಲು ಸಚಿವಾಲಯದ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.