ಆಫ್ಘನ್, ಬಾಂಗ್ಲಾ, ಪಾಕ್‌ನಿಂದ ಬಂದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡಿ
ಗುಜರಾತ್‌ನ 2 ಡಿಸಿಗಳಿಗೆ ಕೇಂದ್ರ ಸೂಚನೆ
Team Udayavani, Nov 1, 2022, 7:48 PM IST
ನವದೆಹಲಿ: ಗುಜರಾತ್‌ನ 2 ಜಿಲ್ಲೆಗಳಲ್ಲಿ ನೆಲೆಸಿರುವ ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನಗಳಿಂದ ವಾಪಸಾದ ಹಿಂದೂಗಳು, ಸಿಖ್, ಬೌದ್ಧ, ಜೈನ, ಪಾರ್ಸಿ, ಕ್ರಿಶ್ಚಿಯನ್ ಸಮುದಾಯಕ್ಕೆ ದೇಶದ ಪೌರತ್ವ ನೀಡುವ ಬಗ್ಗೆ ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿ, ಆದೇಶ ನೀಡಿದೆ.
ಮೆಹಸಾನಾ ಮತ್ತು ಆನಂದ್ ಜಿಲ್ಲೆಗಳ ಜಿಲ್ಲಾಡಳಿತಕ್ಕೆ ಈ ಬಗ್ಗೆ ಪತ್ರ ರವಾನೆಯಾಗಿದೆ. ಗಮನಾರ್ಹವೆಂದರೆ, ಕೇಂದ್ರ ಸರ್ಕಾರ 2019ರಲ್ಲಿ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಅನ್ವಯ ಈ ನಿರ್ಧಾರ ಕೈಗೊಳ್ಳಲಾಗಿಲ್ಲ. ಪೌರತ್ವ ಕಾಯ್ದೆ 1955ರ ಅನ್ವಯ ಮತ್ತು 2009ರಲ್ಲಿ ಜಾರಿಯಾಗಿರುವ ಪೌರತ್ವ ನಿಯಮಗಳ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ.
ಆಗಸ್ಟ್‌ನಲ್ಲಿ ಗುಜರಾತ್‌ನ ಗೃಹ ಸಚಿವ ಹರ್ಷ ಸಾಂಘ್ವಿ ಪಾಕಿಸ್ತಾನದಿಂದ ವಾಪಸಾಗಿದ್ದ 40 ಹಿಂದೂಗಳಿಗೆ ದೇಶದ ಪೌರತ್ವ ನೀಡುವ ಪ್ರಮಾಣ ಪತ್ರ ನೀಡಿದ್ದರು. 2017ರ ಬಳಿಕ ಅಹ್ಮದಾಬಾದ್ ಜಿಲ್ಲೆಯಲ್ಲಿ 1,032 ಮಂದಿ ಪಾಕಿಸ್ತಾನದಿಂದ ಬಂದವರಿಗೆ ಪೌರತ್ವ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.